Sunday, March 26, 2023

ಹುಣಸೂರಿನಲ್ಲಿ ಬಾಲಕನ ಅಪಹರಿಸಿದ ದುಷ್ಕರ್ಮಿಗಳು : ವಿಫಲತೆಗೆ ಬರ್ಬರ ಕೊಲೆ ಮಾಡಿ ಬಿಸಾಕಿದ ಪಾಪಿಗಳು..!

ಮೈಸೂರು : ಬಾಲಕನನ್ನು ಅಪಹರಿಸಿದ ದುಷ್ಕರ್ಮಿಗಳು 4 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೇ, ಗುರುತು ಪತ್ತೆಯಾಗುವ ಭೀತಿಯಲ್ಲಿ ಬಾಲಕನನ್ನು ಹತ್ಯೆ ಮಾಡಿದ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡಿನಲ್ಲಿ ನಡೆದಿದೆ.

ಹನಗೋಡು ಗ್ರಾಮದ ತರಕಾರಿ ವ್ಯಾಪಾರಿ ನಾಗರಾಜ್​ರ 9 ವರ್ಷದ ಪುತ್ರ  ಕಾರ್ತಿಕ್ ಕೊಲೆಯಾದ ಬಾಲಕನಾಗಿದ್ದಾನೆ. ಪಟಾಕಿ ತರಲು ಹೋದ ಬಾಲಕ ಕಾರ್ತಿಕ್​ ನನ್ನು ದುಷ್ಕರ್ಮಿಗಳು ನಿನ್ನೆ ಸಂಜೆ ವೇಳೆಯಲ್ಲಿ ಅಪಹರಿಸಿದ್ದಾರೆ.

ಮನೆಯ ಮುಂದೆ ಇದ್ದ ಬಾಲಕ ಕಣ್ಮರೆಯಾದಾಗ ಪೋಷಕರು ಕಾರ್ತಿಕ್​ನನ್ನು ಹುಡುಕಾಡಿದ್ದಾರೆ.

ಈ ವೇಳೆ ಬಾಲಕನ ತಂದೆ ನಾಗರಾಜ್​ಗೆ ಕರೆ ಮಾಡಿದ ಅಪಹರಣಕಾರರು 4 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

ಅಲ್ಲದೇ ಪೊಲೀಸರಿಗೆ ದೂರು ನೀಡಿದರೆ ಮಗುವನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಇದರಿಂದ ಇನ್ನಷ್ಟು ಆತಂಕಗೊಂಡ ಪೋಷಕರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಳಿಕ ಎಸ್.ಪಿ. ಚೇತನ್, ಎಎಸ್ ಪಿ ಶಿವಕುಮಾರ್ ಮಾರ್ಗದರ್ಶನದಲ್ಲಿ ಡಿವೈಎಸ್ ಪಿ ರವಿಪ್ರಸಾದ್ ನೇತೃತ್ವದಲ್ಲಿ, ಇನ್ಸ್ ಪೆಕ್ಟರ್​ಗಳಾದ ಚಿಕ್ಕಸ್ವಾಮಿ, ರವಿ, ರವಿಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಗಿಳಿದಿದ್ದರು.

ಮೊಬೈಲ್ ಕರೆ ಆಧರಿಸಿ ಕಾರ್ಯಪ್ರವೃತ್ತರಾದ ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿಯೊಬ್ಬ ಬಾಲಕನನ್ನು ಹತ್ಯೆ ಮಾಡಿ, ಕುಂಟೇರಿ ಕೆರೆಯ ಬಯಲಿನ ಹಳ್ಳದಲ್ಲಿ ಶವವನ್ನು ಬಿಸಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ.ಸ್ಥಳಕ್ಕೆ ಎಸ್​ಪಿ ಚೇತನ್, ಡಿವೈಎಸ್ ಪಿ ರವಿಪ್ರಸಾದ್, ಇನ್ಸ್ ಪೆಕ್ಟರ್ ಚಿಕ್ಕಸ್ವಾಮಿ ಭೇಟಿ ನೀಡಿ ಪರಿಶೀಲಿಸಿದ ವೇಳೆ ಬಾಲಕನ ಶವ ಪತ್ತೆಯಾಗಿದ್ದು ತನಿಖೆ ಮುಂದುವರೆದಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 4 ಲಕ್ಷ ರೂ. ವಶ

ಉಡುಪಿ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 4 ಲಕ್ಷ ರೂ. ಹಣವನ್ನು ಪೊಲೀಸರು ನಿನ್ನೆ ವಶಪಡಿಸಿಕೊಂಡ ಘಟನೆ ಉಡುಪಿಯ ಮೂಡುತೋನ್ಸೆ ಗ್ರಾಮದ ನೇಜಾರು ಚೆಕ್ ಪೋಸ್ಟ್‌ನಲ್ಲಿ ನಡೆದಿದೆ.ಉಡುಪಿ ಪೊಲೀಸ್ ಠಾಣೆಯ ಪಿಎಸ್‌ಐ ಸುಷ್ಮಾ...

ಬಂಟ್ವಾಳ: ಆಸ್ತಿಗಾಗಿ ಹೆತ್ತ ತಾಯಿಯ ಜುಟ್ಟು ಹಿಡಿದು ಮುಖಚಚ್ಚಿದ ಪಾಪಿ ಮಗ

ಬಂಟ್ವಾಳ: ಆಸ್ತಿಯಲ್ಲಿ ಪಾಲುಕೊಡುವಂತೆ ಹೆತ್ತ ತಾಯಿಗೆ ಬೆದರಿಸಿ ಗಾಯಗೊಳಿಸಿ ಮಗ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಘಟನೆ ವಿವರ ಮಾ.24 ರಂದು ಇಡ್ಕಿದು ಗ್ರಾಮದ ನಾರಾಯಣ ಗೌಡ ಎಂಬುವವರ...

ಸುಳ್ಯ : ಮನೆ ಕೊಟ್ಟಿಗೆ ಕಾಮಗಾರಿಯ ವೇಳೆ ಘೋರ ದುರಂತ – ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತ್ಯು..!

ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ ದುರಂತ ನಡೆದು ಮೂವರು ಕಾರ್ಮಕರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ.ಸುಳ್ಯ : ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ...