Monday, July 4, 2022

ರಸ್ತೆ ದಾಟುತ್ತಿದ್ದ ಬಾಲಕಿ ಅಕ್ಷಯಳನ್ನು ಬಲಿ ಪಡೆದ ಬಿಬಿಎಂಪಿ ಕಸದ ಲಾರಿ : ಆರು ಮಂದಿಗೆ ಗಾಯ..!

ಬೆಂಗಳೂರು: ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿ ಮೇಲೆ‌ ಬಿಬಿಎಂಪಿ‌ ಕಸದ ಲಾರಿ ಹರಿದು ಬಾಲಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ.

13 ವರ್ಷದ ಅಕ್ಷಯ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಕ್ಷಯ ಡಿವೈಡರ್ ಮೇಲೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಂದ ಕಸದ ಲಾರಿ ಬಲಿ ಪಡೆದಿದೆ.

ಘಟನೆಯಲ್ಲಿ ಸುಮಾರು 6ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೃತ್ಯವೆಸಗಿದ ಕಸದ ಲಾರಿ ಚಾಲಕ‌ ನಾಪತ್ತೆಯಾಗಿದ್ದು, ಘಟನೆ ಸಂಬಂಧ ಆರ್.ಟಿ.ನಗರ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿನ್ನೆ ರಾತ್ರಿ ಮಳೆಯಾಗಿದ್ದರಿಂದ‌ ಹೆಬ್ಬಾಳ ಪೊಲೀಸ್ ಠಾಣೆ‌ ಮುಂಭಾಗದಲ್ಲಿರುವ ಅಂಡರ್ ಪಾಸ್​​ನಲ್ಲಿ ನೀರು ತುಂಬಿಕೊಂಡಿತ್ತು, ಪಾದಚಾರಿಗಳು ನಡೆದಾಡಲು ಸಾಧ್ಯವಾಗಿರಲಿಲ್ಲ.

ಈ ಹಿನ್ನೆಲೆ ಡಿವೈಡರ್ ದಾಟಿ ರೋಡ್ ಕ್ರಾಸ್ ಮಾಡಲು ವಿದ್ಯಾರ್ಥಿನಿ ಅಕ್ಷಯಾ ಮುಂದಾಗಿದ್ದಳು.

ಈ ವೇಳೆ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ರಕ್ತಸ್ರಾವಗೊಂಡು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಇನ್ನು ಹೆಬ್ಬಾಳದ ಫ್ಲೈ ಓವರ್ ಬಳಿ ಡಿವೈಡರ್ ದಾಟುತ್ತಿದ್ದ ವೇಳೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ ಅಕ್ಷಯ ಕುಟುಂಬಕ್ಕೆ ಶಾಸಕ ಭೈರತಿ ಸುರೇಶ್ ವೈಯಕ್ತಿಕವಾಗಿ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ‘ಬ್ಲಡ್ ಡೋನರ್ಸ್’ ಇದರ 350ನೇ ರಕ್ತದಾನ ಶಿಬಿರಕ್ಕೆ ಚಾಲನೆ

ಉಳ್ಳಾಲ: ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ವತಿಯಿಂದ ರೆಡ್ ಕ್ರಾಸ್ ರಕ್ತನಿಧಿ ಕೇಂದ್ರ ಮಂಗಳೂರು, ಫಾದರ್ ಮುಲ್ಲರ್ ರಕ್ತನಿಧಿ ಕೇಂದ್ರ ಮಂಗಳೂರು, ಯೆನೆಪೋಯಾ ಮೆಡಿಕಲ್ ಕಾಲೇಜು ರಕ್ತನಿಧಿ ಕೇಂದ್ರ ದೇರಳಕಟ್ಟೆ ಇದರ...

ಮಂಗಳೂರಿನಲ್ಲಿ 518 ಅಕ್ರಮ ವಿದೇಶಿಗರು ಪೊಲೀಸರ ವಶಕ್ಕೆ

ಮಂಗಳೂರು: ಮಂಗಳೂರು ಪೊಲೀಸರು ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಯೂರಿರುವ ವಿದೇಶಿಗರ ಪತ್ತೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.ಸರಿಯಾದ ದಾಖಲೆಗಳಿಲ್ಲದ 518 ವಿದೇಶಿ ವಲಸಿಗರೆಂದು ಹೇಳಲಾದವರ ವಿಚಾರಣೆ ಆರಂಭಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಅಕ್ರಮವಾಗಿ ‌ನೆಲೆಸಿರುವ ವಿದೇಶಿಯರ...

ಸುಳ್ಯ: ದ್ವಿಚಕ್ರ ವಾಹನಗಳು ಪರಸ್ಪರ ಢಿಕ್ಕಿ-ಸಹಸವಾರೆಗೆ ಗಾಯ

ಸುಳ್ಯ: ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಎರಡು ವಾಹನಗಳ ಸವಾರರು ಅಪಾಯದಿಂದ ಪಾರಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಟ್ಟಿಪಳ್ಳ ಎಂಬಲ್ಲಿನ ಮುಖ್ಯ ರಸ್ತೆಯಲ್ಲಿ ನಡೆದಿದೆ.ಸುಳ್ಯದ ಮಾಧ್ಯಮವೊಂದರ...