Monday, July 4, 2022

ಅ. 30ಕ್ಕೆ ಬಿ ಸಿ ರೋಡಿನ ಬಂಟರ ಸಭಾಭವನದಲ್ಲಿ  ವಿವಿಧ ಬ್ಯಾಂಕ್‍ಗಳಿಂದ ಸಾಲ ಸೌಲಭ್ಯ ಮಾಹಿತಿ ಕಾರ್ಯಾಗಾರ : ಸಂಸದ ಕಟೀಲ್

ಮಂಗಳೂರು : 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೇಶದ ಪ್ರಧಾನಮಂತ್ರಿಗಳು 2021ರ ಆಗಸ್ಟ್ 15ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ “ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಸಂಭ್ರಮದಲ್ಲಿ ಈ ವರ್ಷ ಹಲವಾರು ಕಾರ್ಯಕ್ರಮಗಳ ಮೂಲಕ ಆಚರಿಸಲು ನಿರ್ದೇಶನ ನೀಡಿದ್ದರು, ಆ ಹಿನ್ನಲೆಯಲ್ಲಿ ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿಯು ಕರ್ನಾಟಕದಲ್ಲಿ 13ನೇ ಅಕ್ಟೋಬರ್ 2021ರಿಂದ ರಾಜ್ಯದ 20 ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.

ಅದರ ಅಂಗವಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಾರ್ವಜನಿಕ ಹಾಗೂ ಖಾಸಗಿ ವಲಯದ ಬ್ಯಾಂಕುಗಳು, ಪ್ರಾದೇಶಿಕ ಬ್ಯಾಂಕು, ಡಿಸಿಸಿಬಿ, ಎಂಎಫ್‍ಗಳು, ಎಸ್‍ಬಿಎಫ್‍ಸಿಗಳು, ನಬಾರ್ಡ್ ಮತ್ತು ಕೆ.ವಿ.ಐ.ಸಿ, ಕೆ.ವಿ.ಐ.ಬಿ.ಡಿ.ಐ.ಸಿ ಮೀನುಗಾರಿಕೆ, ಪಶುಸಂಗೋಪನೆ ಸೇರಿದಂತೆ ಇತರೆ ಸರ್ಕಾರಿ ಇಲಾಖೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ ಎಂದು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಂಟ್ವಾಳದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ವಿವಿಧ ಸಾಲ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲು, ಸಾಲದ ಅರ್ಜಿಗಳನ್ನು ಸ್ವೀಕರಿಸಲು, ಮಂಜೂರಾತಿ ಅಥವಾ ತಾತ್ವಿಕ ಮಂಜೂರಾತಿ ಪತ್ರಗಳನ್ನು ವಿತರಿಸಲು, ಸರಕಾರದ ವಿವಿಧ ಯೋಜನೆಗಳ ಮಾಹಿತಿ ನೀಡಲು, ಸಾಲ ಸೌಲಭ್ಯಗಳ ಮಾಹಿತಿ ಕಾರ್ಯಾಗಾರವನ್ನು ಇದೇ ಅ.30 ರಂದು ಬಿಸಿ ರೋಡಿನ ಬಂಟರ ಸಭಾಭವನದಲ್ಲಿ  ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಪಿ.ಎಂ.ಎಂ.ವೈ (ಮುದ್ರಾ), ಸ್ಟ್ಯಾಂಡ್ ಆಪ್ ಇಂಡಿಯಾ, ಪಿ.ಎಂ.ಸ್ವನಿಧಿ, ಇ.ಸಿ.ಎಲ್.ಜಿ.ಎಸ್, ಪಿ.ಎಂ.ಇ.ಜಿ.ಪಿ, ಕೃಷಿ ಮೂಲಸೌಕರ್ಯ ವಿಧಿ ಯೋಜನೆ (ಎ.ಐ.ಎಫ್), ಪಶು ಸಂಗೋಪನಾ ಮೂಲಸೌಕರ್ಯ ಅಭಿವೃದ್ಧಿ ನಿಧಿ ಯೋಜನೆ (ಎ.ಎಚ್.ಐ.ಡಿ.ಎಸ್), ಕೃಷಿ ಎಂ.ಎಸ್.ಎಂ.ಇ ಚಿಕ್ಕರೆ, ಶಿಕ್ಷಣ, ವಸತಿ ಸಾಲಗಳು ಮತ್ತು ಇತರ ಆತ್ಮನಿರ್ಭರ ಭಾರತ್ ಯೋಜನೆಗಳಾದ ಪಿ.ಎಂ.ಎಸ್.ಬಿ.ವೈ, ಪಿ.ಎಂ.ಜೆ.ಜೆ.ಬಿ.ವೈ, ಎ.ಪಿ.ವೈನಂತಹ ವಿವಿಧ ಪಿ.ಎಂ ಆತ್ಮ ಸುರಕ್ಷಾ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಹಾಗೂ ಸಾಲ ಮಂಜೂರಾತಿಗಳ ಪತ್ರಗಳನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.

ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವರಾದ ಭಗವಂತ್ ಖೂಬಾ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್.ಯು, ಅಧ್ಯಕ್ಷತೆ ವಹಿಸುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಅಂಗಾರ.ಎಸ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗವಹಿಸಲಿದ್ದಾರೆ, ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ವಿವಿಧ ಬ್ಯಾಂಕುಗಳ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ವ್ಯಕ್ತಿ ಕೊನೆಯುಸಿರು

ಬೆಳ್ತಂಗಡಿ: ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಬದ್ಯಾರು ಬಳಿ ಇಂದು ನಡೆದಿದೆ.ಕುಶಾಲಪ್ಪ ಗೌಡ (46) ಮೃತ ವ್ಯಕ್ತಿ. ಮೃತ ಕುಶಾಲಪ್ಪ ಗೌಡ ಮನೆಯ...

ವಿಟ್ಲದಲ್ಲಿ ನಿರಂತರ ಮಳೆಗೆ ನೀರುಪಾಲಾದ ತೋಡು-ಮನೆ ಕುಸಿಯುವ ಭೀತಿ

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ಎಂಬಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತೋಡಿನ ಬದಿ ಕುಸಿದು ಮನೆ ಅಪಾಯದಂಚಿನಲ್ಲಿದೆ.ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ನಿವಾಸಿ ರಾಮಣ್ಣ ಪಿಲಿಂಜ ಅವರಿಗೆ ಸೇರಿದ ಮನೆಯ ಪಕ್ಕದಲ್ಲಿ...

ಮಂಗಳೂರು KSRTC ನಿಲ್ದಾಣದ ಟಾಯ್ಲೆಟ್‌ಗೆ ಹೋಗಿದ್ದ ಯುವತಿ ನಾಪತ್ತೆ..!

ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದಲ್ಲಿ ಜು.2 ರಂದು ಮುಂಜಾನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ.ಘಟನೆ ವಿವರ ಹಾವೇರಿ ಜಿಲ್ಲೆ...