Friday, July 1, 2022

ಚುನಾವಣಾ ಫಲಿತಾಂಶ ಬಿಜೆಪಿಗೆ ತೃಪ್ತಿ ತಂದಿದೆ: ರಾಜ್ಯಾಧ್ಯಕ್ಷ ಕಟೀಲ್ ಪ್ರತಿಕ್ರಿಯೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದು ಅಧಿಕಾರ ಉಳಿಸಿಕೊಂಡಿದ್ದು ರಾಜ್ಯದಲ್ಲಿ ಒಟ್ಟಾರೆಯಾಗಿ ಫಲಿತಾಂಶ ಬಿಜೆಪಿಗೆ ತೃಪ್ತಿ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.


ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್ ಈ ಬಾರಿ ಸ್ಥಳಿಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಗಮನಿಸಿದರೆ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಪಡೆದಿದ್ದು ಒಟ್ಟಾರೆ ರಾಜ್ಯದ ಫಲಿತಾಂಶದಲ್ಲಿ ಕಳೆದ ಬಾರಿಗಿಂತ ಉತ್ತಮ ಫಲಿತಾಂಶ ಸಿಕ್ಕಿದೆ. ಈ ಚುನಾವಣೆ ಸ್ಥಳೀಯವಾದ ಕಾರಣ ಅಭ್ಯರ್ಥಿಗಳು,

ವಿಷಯಗಳು ಸ್ಥಳೀಯವಾಗಿರುತ್ತೆ ಆದ್ದರಿಂದ ಇದು ಸ್ಥಳೀಯವಾಗಿ ಸಂಬಂಧಿಸಿದ ಚುನಾವಣೆಯಾಗಿದೆ. ಒಬ್ಬ ಪಕ್ಷೇತರ ನಿಂತರೂ ಓಟುಗಳು ವ್ಯತ್ಯಾಸವಾಗುತ್ತೆ

ಮತ್ತು ಫಲಿತಾಂಶ ವಿರುದ್ದ ಬರುತ್ತೆ ಆದರೂ ಆದರೂ ಉತ್ತಮವಾದ ಫಲಿತಾಂಶ ಬಿಜೆಪಿಗೆ ಸಿಕ್ಕಿದೆ ಎಂದರು. ಚಿಕ್ಕಮಗಳೂರು, ಉತ್ತರ ಕರ್ನಾಟಕ ಭಾಗದ ಕೆಲವೆಡೆ ಈ ಬಾರಿ ಗೆದ್ದಿದ್ದೇವೆ.

ಈ ಫಲಿತಾಂಶ ಖಂಡಿತವಾಗಿಯೂ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಅಲ್ಲ, ಇದರಲ್ಲಿ ಲೋಕಲ್ ಸಮಸ್ಯೆ, ಲೋಕಲ್ ವಿಷಯ, ಲೋಕಲ್ ಅಭ್ಯರ್ಥಿಗಳಿರ್ತಾರೆ.

ಇದು ಅಲ್ಲಲ್ಲೇ ನಡೆಯುವ ಚುನಾವಣೆ, ಯಾವುದೇ ಚುನಾವಣೆ ದಿಕ್ಸೂಚಿ ಅಲ್ಲ ಆದರೂ ಬಿಜೆಪಿ ಒಳ್ಳೆಯ ಫಲಿತಾಂಶ ಕೊಟ್ಟಿದೆ ಅಂತ ಅನಿಸ್ತಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

Hot Topics

ಕುಂದಾಪುರ: ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗಲೇ ಕುಸಿದು ಕೃಷಿಕ ಜೀವಾಂತ್ಯ…

ಕುಂದಾಪುರ: ಭತ್ತದ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿರುವಾಗಲೇ ಕೃಷಿಕರೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ನಿನ್ನೆ ನಡೆದಿದೆ.ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ನಿವಾಸಿ ಪ್ರಸ್ತುತ ಕುಂದಾಪುರ...

ವಿಶ್ವಾಸಮತಕ್ಕೆ ಮುನ್ನವೇ ಮಹಾರಾಷ್ಟ್ರ ಸಿಎಂ ರಾಜೀನಾಮೆ ಘೋಷಣೆ

ಮಹಾರಾಷ್ಟ್ರ: ಸುಪ್ರೀಂಕೋರ್ಟ್ ವಿಶ್ವಾಸ ಮತಯಾಚನೆ ಮಾಡಲು ಆದೇಶಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದ್ದಾರೆ.ತಡರಾತ್ರಿ ರಾಜ್ಯಪಾಲರ ನಿವಾಸಕ್ಕೆ ಆಗಮಿಸಿದ ಠಾಕ್ರೆ ಭಗತ್ ಸಿಂಗ್ ಕೋಶಿಯಾ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿ...

ಮುಲ್ಕಿ: ಆಯತಪ್ಪಿ ಚರಂಡಿಗೆ ಬಿದ್ದು ವ್ಯಕ್ತಿ ಜೀವಾಂತ್ಯ…

ಮುಲ್ಕಿ: ನಡೆದುಕೊಂಡು ಹೋಗುತ್ತಿರುವಾಗ ಆಯತಪ್ಪಿ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ ಘಟನೆ ಮುಲ್ಕಿಯ ನಗರ ಪಂಚಾಯತ್ ವ್ಯಾಪ್ತಿಯ ಕೆಎಸ್ ರಾವ್ ನಗರ ಲಿಂಗಪ್ಪಯ್ಯಕಾಡು ಸರಕಾರಿ ಬಾವಿ ಬಳಿ ನಿನ್ನೆ ರಾತ್ರಿ ನಡೆದಿದೆ.ಮೃತ ವ್ಯಕ್ತಿಯನ್ನು...