Connect with us

DAKSHINA KANNADA

ಸ್ಥಳೀಯ ಸಂಸ್ಥೆ ಚುನಾವಣಾ ಫೈಟ್‌: ದ.ಕ-ಉಡುಪಿಯಲ್ಲಿ ಮುನ್ನಡೆ ಕಾಯ್ದ ಕಮಲ

Published

on

ಬೆಂಗಳೂರು: ರಾಜ್ಯದ 5 ನಗರ ಸಭೆಗಳು ಸೇರಿ ಅವಧಿಪೂರ್ಣಗೊಂಡಿರುವ 58 ನಗರ ಸ್ಥಳೀಯ ಸಂಸ್ಥೆಗಳು ಮತ್ತು 59 ಗ್ರಾಮ ಪಂಚಾಯಿತ್ ಗಳಿಗೆ ಸೋಮವಾರ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.


ದ.ಕ ಜಿಲ್ಲೆಯಲ್ಲಿ ಕೋಟೆಕಾರು ಪಟ್ಟಣ ಪಂಚಾಯತ್‌, ವಿಟ್ಲ ಪಟ್ಟಣಪಂಚಾಯತ್‌ಗೆ ನಡೆದ ಚುನಾವಣೆಯ ಮತೆಣಿಕೆ ನಡೆಯುತ್ತಿದೆ. ಜೊತೆಗೆ ಉಡುಪಿ ಜಿಲ್ಲೆಯಲ್ಲಿ ಕಾಪು ಪುರಸಭೆ ಮತಗಳ ಎಣಿಕೆ ಇಂದು ಬೆಳಗ್ಗೆ 8ರಿಂದ ಆರಂಭವಾಗಿದೆ.

ಕೋಟೆಕಾರು ಪಟ್ಟಣ ಪಂಚಾಯತ್‌

ಕೋಟೆಕಾರು ಪಟ್ಟಣ ಪಂಚಾಯತ್‌ನ 17 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ 11 ವಾರ್ಡ್‌ ಬಿಜೆಪಿ ತೆಕ್ಕೆಗೆ, 4 ಕಾಂಗ್ರೆಸ್‌ ಹಾಗೂ 1 ಎಸ್‌ಡಿಪಿಐ, 1 ಪಕ್ಷೇತರ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ.

ವಿಟ್ಲ ಪಟ್ಟಣ ಪಂಚಾಯತ್‌
ವಿಟ್ಲ ಪಟ್ಟಣ ಪಂಚಾಯತ್‌ಗೆ ನಡೆದ ಚುನಾವಣೆಯಲ್ಲಿ 18 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ 10 ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದು, 3 ಕಾಂಗ್ರೆಸ್‌ ಹಾಗೂ ಎಸ್‌ಡಿಪಿಐನ ಓರ್ವ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ.

ಕಾಪು ಪುರಸಭೆ

ಕಾಪು ಪುರಸಭೆಯ 23 ಕ್ಷೇತ್ರಗಳಲ್ಲಿ  ಫಲಿತಾಂಶ ಪ್ರಕಟವಾಗಿದ್ದು, ಇದರಲ್ಲಿ ಬಿಜೆಪಿ 12ರಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್‌ 7 ಸ್ಥಾನದಲ್ಲಿ ಎಸ್‌ಡಿಪಿಐ 3 ಜೆಡಿಎಸ್ 1 ಸ್ಥಾನ ಪಡೆದುಕೊಂಡಿದೆ.

ಕೋತಲಕಟ್ಟೆ: ಪರ್ಝಾನ ಕಾಂಗ್ರೆಸ್ ಗೆಲುವು
ಕೈಪುಂಜಾಲು: ಶೋಭಾ ಎಸ್ ಬಂಗೇರ ಕಾಂಗ್ರೆಸ್ ಗೆಲುವು
ಕೊಪ್ಪಲಂಗಡಿ: ನಾಗೇಶ್ ಬಿಜೆಪಿ ಗೆಲುವು
ತೊಟ್ಟಂ: ಸತೀಶ್ಚಂದ್ರ ಕಾಂಗ್ರೆಸ್ ಗೆಲುವು
ಪೊಲಿಪು ಗುಡ್ಡೆ: ರತ್ನಾಕರ್ ಬಿಜೆಪಿ ಶೆಟ್ಟಿ
ಕರಾವಳಿ: ಕಿರಣ್ ಆಳ್ವ ಬಿಜೆಪಿ ಗೆಲುವು
ಮಂಗಳಾಪೇಟೆ: ವಹೀದಾ ಬಾನು ಎಸ್ಡಿಪಿಐ ಗೆಲುವು
ದುಗ್ಗನ್ ತೋಟ: ಮಹಮ್ಮದ್ ಆಸೀಪ್ ಕಾಂಗ್ರೆಸ್ ಗೆಲುವು
ಜನಾರ್ದನ ದೇವಸ್ಥಾನ: ಹರಿಣಿ ದೇವಾಡಿಗ ಬಿಜೆಪಿ ಗೆಲುವು
ಬಡಗರಗುತ್ತು: ವಿದ್ಯಾಲತ ಕಾಂಗ್ರೆಸ್ ಗೆಲುವು

BELTHANGADY

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ

Published

on

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

rain

ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

DAKSHINA KANNADA

ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು

Published

on

ಮಂಗಳೂರು : ಬಹುನಿರೀಕ್ಷಿತ ಚಿತ್ರ ‘ಗಬ್ಬರ್ ಸಿಂಗ್’ ಇಂದು (ಮೇ 3) ತೆರೆಗಪ್ಪಳಿಸಿದೆ. ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ “ಗಬ್ಬರ್ ಸಿಂಗ್” ಮಂಗಳೂರಿನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ತೆರೆಕಂಡಿದೆ.


ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಎಂ.ಶೇಖರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಚಲನಚಿತ್ರಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿ ನಿರ್ಮಾಪಕ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ತುಳು ಸಿನಿಮಾ ತೆರೆಕಾಣದೆ ಕೆಲವು ಸಮಯ ಆಗಿದೆ. ಬೇಸಿಗೆ ಕಾಲದಲ್ಲಿ ತರೆಕಾಣುತ್ತಿರುವ ಗಬ್ಬರ್ ಸಿಂಗ್ ಸಿನಿಮಾ ಹಾಸ್ಯಭರಿತವಾಗಿದ್ದು, ಪ್ರೇಕ್ಷಕರಿಗೆ ಸಂಪೂರ್ಣ ಮನರಂಜನೆ ಒದಗಿಸಿದೆ. ಭೋಜರಾಜ್ ವಾಮಂಜೂರು ಅವರ ಹಾಸ್ಯಕ್ಕೆ ಒತ್ತು ಕೊಟ್ಟ ಪಾತ್ರ ಜೊತೆಗೆ ಗಿರೀಶ್ ಶೆಟ್ಟಿಯವರ ಖಡಕ್ ವಿಲನ್ ಪಾತ್ರ, ನಾಯಕ ಶರಣ್ ಶೆಟ್ಟಿ, ನಾಯಕಿ ವೆನ್ಸಿಟಾ ಡಯಾಸ್ ಪಾತ್ರಗಳು ಗಮನ ಸೆಳೆಯುತ್ತದೆ ಎಂದರು.

ಸಮಾರಂಭದಲ್ಲಿ ಡಾ ಮೆಲ್ವಿನ್ ಡಿ ಸೋಜಾ, ರಂಜಿತಾ ಹೇಮನಾಥ ಶೆಟ್ಟಿ ಕಾವು, ಭೋಜರಾಜ ವಾಮಂಜೂರು, ತುಳು ಚಲನ ಚಿತ್ರನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಉದ್ಯಮಿ ಗಿರೀಶ್ ಎಂ ಶೆಟ್ಟಿಕಟೀಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮೋಹನ್ ಕೊಪ್ಪಲ, ತಮ್ಮಲಕ್ಷ್ಮಣ, ಮಧು ಸುರತ್ಕಲ್, ಚಂದ್ರಶೇಖರ ನಾನಿಲ್ ಹಳೆಯಂಗಡಿ, ಜಯಾನಂದ ಅಮೀನ್, ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಶರಣ್ ಶೆಟ್ಟಿ, ನಟಿ ವೆನ್ಸಿಟಾ ಡಯಾಸ್, ರಾಹುಲ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

ಎಲ್ಲೆಲ್ಲಿ ತೆರೆಗೆ?

ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರ ಮಂದಿರಗಳಲ್ಲಿ “ಗಬ್ಬರ್ ಸಿಂಗ್” ಸಿನಿಮಾ ತೆರೆ ಕಂಡಿದೆ.

ನೈಜಘಟನೆಯಾಧಾರಿತ ಚಿತ್ರ :


‘ಗಬ್ಬರ್ ಸಿಂಗ್’ ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ‌ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಇದನ್ನೂ ಓದಿ : ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು

ತಾರಾಂಗಣ :

ನಾಯಕ ನಟನಾಗಿ ಶರಣ್ ಶೆಟ್ಟಿ, ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. “ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ.

ಸಿನಿಮಾ ಕತೆ, ಚಿತ್ರಕತೆ, ಸತೀಶ್ ಪೂಜಾರಿ ಬಾರ್ಕೂರ್, ಮಧು ಸುರತ್ಕಲ್ ಸಂಭಾಷಣೆ, ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.

Continue Reading

DAKSHINA KANNADA

ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್‌ಗಳ ಹಗಲು ದರೋಡೆ..! ಏನಿದು ಘಟನೆ?

Published

on

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಸೇರಿದಂತೆ ಆಸುಪಾಸಿನ ಜನತೆಗೆ ಸರಕಾರಿ ಬಸ್ಸು ಸಿಬ್ಬಂದಿ ಹಗಲು ದರೋಡೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕುಕ್ಕೆ ಕೆಎಸ್‌ಆರ್‌ಟಿಸಿ ಡಿಪೋದಿಂದ ಹೊರಡುವ ಸರಕಾರಿ ಬಸ್ ಸಿಬ್ಬಂದಿ ಹಗಲು ದರೋಡೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಏಪ್ರಿಲ್ 28ರಂದು ಹುಬ್ಬಳ್ಳಿ ಕಡೆಯ ದಂಪತಿ ಕುಕ್ಕೆ ಸುಬ್ರಹ್ಮಣ್ಯದಿಂದ ಹುಬ್ಬಳ್ಳಿ‌ಗೆ ಹೋಗುವ ಸಲುವಾಗಿ ಬಿಎಂಟಿಸಿಯ KA 57 F 3463 ನಂಬರಿನ ಬಸ್ಸಿಗೆ ಹತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ರೋಡ್ ಅಥವಾ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ಬಸ್ ಹೋಗುತ್ತದೆ ಎಂದು ಬಸ್ಸಿನ ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ. ಈ ಭಾಗದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ಮತ್ತು ಬಸ್ಸಿನ ಸಿಬ್ಬಂದಿ ಹೇಳಿದ್ದನ್ನೇ ನಂಬಿದ ಹುಬ್ಬಳ್ಳಿ ಈ ದಂಪತಿ ಬೆಂಗಳೂರು ಮಹಾನಗರ ಪಾಲಿಕೆಯ ಡಿಪೋ ನಂಬರ್‌2ರ ಈ ಸರಕಾರಿ ಬಸ್ ಹತ್ತಿದ್ದಾರೆ. ಬಸ್ಸಿನ ನಿರ್ವಾಹಕ ಮಹಿಳೆಗೆ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯ ಎಂಬುದಾಗಿ ಉಚಿತ ಟಿಕೆಟ್ ನೀಡಿದ್ದೂ, ಜೊತೆಯಲ್ಲಿ ಇದ್ದ ಪತಿ ಮತ್ತು ಮಕ್ಕಳಿಂದ 150 ರೂಪಾಯಿ ಹಣ ಪಡೆದು ಟಿಕೆಟ್ ನೀಡಿಲ್ಲ ಎನ್ನಲಾಗಿದೆ. ಇಷ್ಟು ಹಣ ಪಡೆದು ಇವರನ್ನು ಕುಕ್ಕೆ ಸುಬ್ರಹ್ಮಣ್ಯದಿಂದ ಸುಮಾರು ಮೂರು ಕಿಲೋ ಮೀಟರ್ ದೂರದ ಕೈಕಂಬ ಎಂಬಲ್ಲಿ ಬಸ್ಸಿಂದ ಇಳಿಸಿ ಹೋಗಿದ್ದಾರೆ. ನಂತರದಲ್ಲಿ ಈ ದಂಪತಿಗಳು ತಮ್ಮ ಮಕ್ಕಳೊಂದಿಗೆ ಸುಮಾರು ಆರು ಕಿಲೋ ಮೀಟರ್ ದೂರ ನಡೆದು ಕುಕ್ಕೆ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣ ತಲುಪಿದ್ದಾರೆ. ನಂತರದಲ್ಲಿ ಸ್ಥಳೀಯರಲ್ಲಿ ತಮಗಾದ ಅನ್ಯಾಯದ ಬಗ್ಗೆ ಕಣ್ಣೀರಿಟ್ಟು ಇಂತಹ ಬಸ್ಸ್‌ಗಳ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

subrahmanya

ಇಂತಹ ಘಟನೆಗಳು ಈ ಭಾಗದಲ್ಲಿ ಪದೇಪದೇ ಮರುಕಳಿಸುತ್ತಿದ್ದೂ,ಈ ಬಗ್ಗೆ ಹಲವು ಬಾರಿ ಮೇಲಧಿಕಾರಿಗಳಿಗೆ ತಿಳಿಸಿದರೂ ಸಹಾ ಈ ತನಕ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಮುಂದೆ ಓದಿ..;ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

ಆದುದರಿಂದ ಈ ಭಾಗದಲ್ಲಿ ನಡೆಯುವ ಈ ಹಗಲು ದರೋಡೆಗೆ ಅಧಿಕಾರಿಗಳೂ ಸಾಥ್ ನೀಡುತ್ತಿದ್ದಾರೆ ಎನ್ನಲಾಗಿದೆ. ಆದುದರಿಂದ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು ಎಂದು ರೈಲು ಬಳಕೆದಾರರ ವೇದಿಕೆ ನೆಟ್ಟಣ ಸಂಘವು ಆಗ್ರಹಿಸಿದೆ.

Continue Reading

LATEST NEWS

Trending