LATEST NEWS
ಲೋಕಲ್ ಫೈಟ್‌ನಲ್ಲಿ ಕಾಂಗ್ರೆಸ್ ಮುಂದೆ-ಬಿಜೆಪಿ ಹಿಂದೆ: ಮೂರನೇ ಸ್ಥಾನದಲ್ಲಿ ಪಕ್ಷೇತರರು
Published
3 years agoon
By
Adminಬೆಂಗಳೂರು: ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಒಟ್ಟು ಸ್ಥಾನಗಳಲ್ಲಿ ರಾಜ್ಯಾದ್ಯಾಂತ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಬಿಜೆಪಿ ಎರಡನೇ ಸ್ಥಾನಕ್ಕೆ ಪಡೆದರೆ. ಪಕ್ಷೇತರರು ಮೂರನೇ ಸ್ಥಾನದಲ್ಲಿದ್ದರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಆಡಳಿತಾರೂಢ ಬಿಜೆಪಿಯಲ್ಲಿ ಆತಂಕ ತಂದಿದ್ದರೆ, ಸ್ವಲ್ಪ ಮುನ್ನಡೆ ಸಾಧಿಸಿರುವುದು ಕಾಂಗ್ರೆಸ್ನಲ್ಲಿ ಮುಂದಿನ ಚುನಾವಣೆ ಸಿದ್ಧತೆಯ ಹುರುಪು ಹೆಚ್ಚಿಸಿದೆ. ಆಮ್ ಆದ್ಮಿ ಪಕ್ಷ ಒಂದು ಸ್ಥಾನ ಗೆಲ್ಲುವುದರೊಂದಿಗೆ ಹೆಜ್ಜೆ ಇಡಲಾರಂಭಿಸಿರುವುದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.
ಒಟ್ಟು 34 ಪಟ್ಟಣ ಪಂಚಾಯಿತಿ, 19 ಪುರಸಭೆ ಮತ್ತು 5 ನಗರಸಭೆಯ 1185 ವಾರ್ಡ್‌ಗಳಿಗೆ ನಡೆದ ಚುನಾವಣಾ ಪೈಕಿ 1184 ವಾರ್ಡ್‌ಗಳ ಫಲಿತಾಂಶ ಹೊರಬಿದ್ದಿದೆ. ಈ ಪೈಕಿ ಕಾಂಗ್ರೆಸ್ 501, ಬಿಜೆಪಿ 433 ವಾರ್ಡ್‌ನಲ್ಲಿ ಜಯಗಳಿಸಿದೆ. 195 ವಾರ್ಡ್‌ಗಳಲ್ಲಿ ಪಕ್ಷೇತರರು ಜಯಭೇರಿ ಭಾರಿಸಿದ್ದಾರೆ. ಜೆಡಿಎಸ್ 45 ವಾರ್ಡ್‌ಗಳನ್ನು, ಎಸ್‌ಡಿಪಿಐ 6 ಸೀಟ್, ಆಮ್ ಆದ್ಮಿ ಹಾಗೂ ಜನತಾ ಪಕ್ಷ ತಲಾ ಒಂದು, ಗೆದ್ದುಕೊಂಡಿದೆ.
ಕಾಂಗ್ರೆಸ್ 28 ಬಿಜೆಪಿ 14 ಕಡೆ ಅಧಿಕಾರ
58 ನಗರ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಅಧಿಕ ಸ್ಥಾನ ಗೆದ್ದು ಬೀಗಿರುವ ಕಾಂಗ್ರೆಸ್ 28 ಕಡೆ, ಬಿಜೆಪಿ 14 ಮತ್ತು ಜೆಡಿಎಸ್ ಒಂದು ಕಡೆ ಅಧಿಕಾರ ಹಿಡಿಯಲಿದೆ. 9 ಕಡೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.
LATEST NEWS
ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಪ್ರಕರಣ – 8 ಜನರ ಬಂಧನ
Published
12 minutes agoon
26/11/2024By
NEWS DESK2ಬೆಳಗಾವಿ: ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ಫೋಟೊಗ್ರಾಫರ್ ಕಿಡ್ನ್ಯಾಪ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಫೋಟೋಗ್ರಾಫರ್ ಉಮೇಶ್ ಹೊಸೂರು ಎಂಬುವವರು ಅಪಹರಣವಾಗಿ ಹಲ್ಲೆಗೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ ಬೆಳಗಾವಿ ನಗರಕ್ಕೆ ಬಂದಿದ್ದರು. ಕಿಡ್ನಾಪ್ ಮಾಡಿ ಕಾರು ನಿಲ್ಲಿಸಿ ರಾಡ್ನಿಂದ ಹಲ್ಲೆ ಮಾಡಿ ಬಿಟ್ಟು ಹೋಗಿದ್ದಾರೆ. ಬೈಲಹೊಂಗಲ ಖಾಸಗಿ ಆಸ್ಪತ್ರೆಯಲ್ಲಿ ಫೋಟೋಗ್ರಾಫರ್ ಉಮೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೇಸ್ ದಾಖಲಾಗ್ತಿದ್ದಂತೆ ಇಬ್ಬರು ಮಹಿಳೆಯರು ಸೇರಿ ಎಂಟು ಜನರನ್ನು ಬಂಧಿಸಲಾಗಿದೆ. ವೃತ್ತಿ ವೈಷಮ್ಯದಿಂದ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳಾದ ವಿಕ್ಕಿ, ಪ್ರವೀಣ್ ಉಮರಾಣಿ, ಬಸವರಾಜ ನರಟ್ಟಿ ಸೇರಿ ಎಂಟು ಜನರ ಬಂಧನವಾಗಿದೆ.
FILM
ಉಡುಪಿ: ಕಾಲಿವುಡ್ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ
Published
1 hour agoon
26/11/2024By
NEWS DESK2ಉಡುಪಿ: ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಕೇವಲ ಸಾಮಾನ್ಯರು ಮಾತ್ರವಲ್ಲದೆ, ಸೆಲೆಬ್ರಿಟಿಗಳು ಕೂಡ ಇಲ್ಲಿಗೆ ಆಗಮಿಸಿ ದರ್ಶನ ಪಡೆಯುತ್ತಾರೆ. ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ಪತ್ನಿ ನಟಿ ಜ್ಯೋತಿಕಾ ಜೊತೆ ಭಾಗಿಯಾದರು. ನಿನ್ನೆ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಕಾಲಿವುಡ್ ದಂಪತಿ ಇಂದು ಪೂರ್ಣಾಹುತಿಯಲ್ಲಿ ಭಾಗಿಯಾದರು.
ನಟ ಸೂರ್ಯ ಹಾಗೂ ಜ್ಯೋತಿಕಾ ಸೆಲೆಬ್ರಿಟಿ ದಂಪತಿಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದರು. ಕರ್ನಾಟಕದಲ್ಲೂ ಸಹ ಸೂರ್ಯ ಹಾಗೂ ಜ್ಯೋತಿಕಾಗೆ ಸಾಕಷ್ಟು ಅಭಿಮಾನಿಗಳಿದ್ದಾರೆ.
BELTHANGADY
ಇಂದಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ
Published
1 hour agoon
26/11/2024By
NEWS DESK2ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ಇಂದಿನಿಂದ ಆರಂಭಗೊಳ್ಳಲಿದೆ. ಬೆಳಿಗ್ಗೆ 10.30 ಗಂಟೆಗೆ ಎಸ್ ಪಿ ಯತೀಶ್ ಎನ್. ಧರ್ಮಸ್ಥಳ ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಧರ್ಮಸ್ಥಳದಲ್ಲಿ ನ. 26ರಂದು ಹೊಸ ಕಟ್ಟೆ ಉತ್ಸವ, 27ರಂದು ಕೆರೆಕಟ್ಟೆ ಉತ್ಸವ, 28ರಂದು ಲಲಿತೋದ್ಯಾನ ಉತ್ಸವ, 29ರಂದು ಕಂಚಿ ಮಾರುಕಟ್ಟೆ ಉತ್ಸವ, 30ರಂದು ಗೌರಿ ಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ) ನಡೆಯಲಿದೆ.
ಡಿ.1ರಂದು ಸಂಜೆ 6.30ಕ್ಕೆ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣಪೂಜೆ ನಡೆಯಲಿದೆ. ನ. 28 ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 5:30 ರಿಂದ ನಾಗಸ್ವರ ವಾದನ, 7 ಗಂಟೆಯಿಂದ ಸಾತ್ವಿಕ ಸಂಗೀತ, ನೃತ್ಯಾರ್ಚನೆ, ನೃತ್ಯ ರೂಪಕ ಇತ್ಯಾದಿ ಕಾರ್ಯಕ್ರಮಗಳು ಜರುಗಲಿವೆ.
ಸರ್ವಧರ್ಮ ಸಮ್ಮೇಳನ
ಅಮೃತವರ್ಷಿಣಿ ಸಭಾಭವನದಲ್ಲಿ ನ. 29ರಂದು ಸಂಜೆ 5ಗಂಟೆಯಿಂದ ಸರ್ವ ಧರ್ಮ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಉದ್ಘಾಟಿಸುವರು. ಬೆಂಗಳೂರು ರಾಜರಾಜೇಶ್ವರಿ ನಗರದ ಶ್ರೀ ಕೈಲಾಸ ಆಶ್ರಮ ಮಹಾ ಸಂಸ್ಥಾನದ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಸಂಶೋಧಕ ಡಾ. ಜಿ. ಬಿ. ಹರೀಶ, ಡಾಕ್ಟರ್ ಜೋಸೆಫ್ ಎನ್ ಎಂ, ಮೆಹತಾಬ ಇಬ್ರಾಹಿಂ ಸಾಬ ಕಾಗವಾಡ ಅವರಿಂದ ಉಪನ್ಯಾಸ ಬಳಿಕ ಭರತನಾಟ್ಯ ಕಾರ್ಯಕ್ರಮ ಇರಲಿದೆ.
ಸಾಹಿತ್ಯ ಸಮ್ಮೇಳನ
ನ. 30ರಂದು ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು, ಬೆಂಗಳೂರು ಬಹುಶ್ರುತ ವಿದ್ವಾಂಸ ಶತಾವಧಾನಿ ಡಾ.ರಾ. ಗಣೇಶ ಉದ್ಘಾಟಿಸುವರು. ಲೇಖಕ ಸಂಶೋಧಕ ಡಾ. ಪಾದೆಕಲ್ಲು ವಿಷ್ಣುಭಟ್ಟ ಅಧ್ಯಕ್ಷತೆ ವಹಿಸುವರು. ಬಳಿಕ ಡಾ. ಪ್ರಮೀಳಾ ಮಾಧವ, ಡಾ.ಬಿ.ವಿ. ವಸಂತ ಕುಮಾರ್ ಪ್ರೊ. ಮೊರಬದ ಮಲ್ಲಿಕಾರ್ಜುನ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8.30 ರಿಂದ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮವಿದೆ. ಪ್ರತಿದಿನ ಸಂಜೆ 6:30 ರಿಂದ ರಾತ್ರಿ 11 ಗಂಟೆವರೆಗೆ ವಸ್ತು ಪ್ರದರ್ಶನ ಮಂಟಪ ಹಾಗೂ ಅಮೃತವರ್ಷಿಣಿ ವೇದಿಕೆಯಲ್ಲಿ ಸಾಂಸ್ಕೃತಿಕ, ಸಂಗೀತ ಹಬ್ಬ ನಡೆಯಲಿದೆ.
LATEST NEWS
ಏಲಿಯನ್ಗಳು ನಿಜಕ್ಕೂ ಇದೆಯಾ? ಡಾ.ಸೋಮನಾಥ್ರಿಂದ ಅಚ್ಚರಿಯ ಮಾಹಿತಿ !!
ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ: ಮುಂದಿನ ಸಿಎಂ ಇವರೇ ?
ಮಧ್ಯಪ್ರದೇಶದಲ್ಲಿ ಸ್ಫೋಟ – 3 ಮನೆಗಳು ಕುಸಿದು ಇಬ್ಬರು ಸಾ*ವು
BBK 11: ಮೋಕ್ಷಿತಾ ಎರಡು ತಲೆ ನಾಗರಹಾವು: ಗುಡುಗಿದ ತ್ರಿವಿಕ್ರಮ್
14 ಬಾರಿಯ ಒಲಿಂಪಿಕ್ ಪದಕ ವಿಜೇತೆ ವಿದಾಯ !
Trending
- LATEST NEWS6 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru4 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION5 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS3 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!