Home ಪ್ರಮುಖ ಸುದ್ದಿ ಸುನಿತಾ ಪ್ರಭು ಮೂರ್ಜೆಯ ಸಂಶೋಧನೆಗೆ ರಾಷ್ಟ್ರಪತಿ ಮೆಚ್ಚುಗೆ

ಸುನಿತಾ ಪ್ರಭು ಮೂರ್ಜೆಯ ಸಂಶೋಧನೆಗೆ ರಾಷ್ಟ್ರಪತಿ ಮೆಚ್ಚುಗೆ

ಸುನಿತಾ ಪ್ರಭು ಮೂರ್ಜೆಯ ಸಂಶೋಧನೆಗೆ ರಾಷ್ಟ್ರಪತಿ ಮೆಚ್ಚುಗೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗೆ ಜ್ವರ ಪ್ರತಿವರ್ಷನೂ ತೀವ್ರಗೊಂಡು ಹಲವು ಮಂದಿ ಮೃತಪಟ್ಟಿದ್ದಾರೆ. ಇದೇ ಒಂದು ವಿಚಾರದಿಂದ ತುಳುನಾಡಿನ ಬೆಳ್ತಂಗಡಿಯ ವಿದ್ಯಾರ್ಥಿನಿ ಸುನಿತಾ ಪ್ರಭು ಮೂರ್ಜೆ ಇದಕ್ಕೊಂದು ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಿದರು.

ಪುಣೆಯ ಸಂಜೀವ ಹೋತ ಎನ್ನುವವರು ಜತೆಯಾಗಿಕೊಂಡು ಇಬ್ಬರು ಸೇರಿ ಸೊಳ್ಳೆ ನಿರೋಧಕ ಬಟ್ಟೆ ತಯಾರಿಸುವ ಪರಿಕಲ್ಪನೆಗೆ ಚಾಲನೆ ನೀಡಿದ್ದರು. ಅದರ ಫಲವೇ ಈ ಸಂಶೋಧನೆ.

ಈ ಹೊಸ ವಿಧಾನವನ್ನು ಪುಣೆಯ ಐಐಎಸ್‍ಇಆರ್ ಸಹಕಾರದೊಂದಿಗೆ ಅನ್ವೇಷಣೆ ಮಾಡಿದ್ದು, ಅಲ್ಲೇ ಅಭಿವೃದ್ಧಿ ಪಡಿಸಿಕೊಂಡು ಅಲ್ಲೇ ಪರೀಕ್ಷೆಗೆ ಒಳಪಡಿಸಿದ್ದು, ಬಟ್ಟೆಯನ್ನು 36 ಬಾರಿ ತೊಳೆದರೂ ಶೇ.90ರಷ್ಟು ನಿರೋಧಕ ಸಾಮಥ್ರ್ಯ ಉಳಿದುಕೊಳ್ಳುವುದು ಸಂಶೋಧನೆಯಲ್ಲಿ ಸಾಬೀತಾಗಿದೆ. ಇದಕ್ಕೆ ತಗಲುವ ವೆಚ್ಚ 14 ರೂಪಾಯಿ ಮಾತ್ರ ಎನ್ನುವುದು ವಿಶೇಷ.

ವಿಜ್ಞಾನ ಸಂಶೋಧನಾ ಕ್ಷೇತ್ರದಲ್ಲಿ ನಡೆಸಿದ ಅಮೋಘ ಸಾಧನೆಗಾಗಿ ಸುನೀತಾ ಪ್ರಭು ಅವರು ಭಾರತ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವಾಲಯದಿಂದ ಕೊಡ ಮಾಡುವ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಬುಧವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ಅವರಿಂದ ಸ್ವೀಕರಿಸಿದರು.

ಸುನೀತಾ ಪ್ರಭು ಅವರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಕೊಂಡಾಟಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ವಿಡಿಯೋಗಾಗಿ..

- Advertisment -

RECENT NEWS

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಬಂಧಿಸಿದ ಪೋಲಿಸರು...