ಸುನಿತಾ ಪ್ರಭು ಮೂರ್ಜೆಯ ಸಂಶೋಧನೆಗೆ ರಾಷ್ಟ್ರಪತಿ ಮೆಚ್ಚುಗೆ
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗೆ ಜ್ವರ ಪ್ರತಿವರ್ಷನೂ ತೀವ್ರಗೊಂಡು ಹಲವು ಮಂದಿ ಮೃತಪಟ್ಟಿದ್ದಾರೆ. ಇದೇ ಒಂದು ವಿಚಾರದಿಂದ ತುಳುನಾಡಿನ ಬೆಳ್ತಂಗಡಿಯ ವಿದ್ಯಾರ್ಥಿನಿ ಸುನಿತಾ ಪ್ರಭು ಮೂರ್ಜೆ ಇದಕ್ಕೊಂದು ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಿದರು.
ಪುಣೆಯ ಸಂಜೀವ ಹೋತ ಎನ್ನುವವರು ಜತೆಯಾಗಿಕೊಂಡು ಇಬ್ಬರು ಸೇರಿ ಸೊಳ್ಳೆ ನಿರೋಧಕ ಬಟ್ಟೆ ತಯಾರಿಸುವ ಪರಿಕಲ್ಪನೆಗೆ ಚಾಲನೆ ನೀಡಿದ್ದರು. ಅದರ ಫಲವೇ ಈ ಸಂಶೋಧನೆ.
ಈ ಹೊಸ ವಿಧಾನವನ್ನು ಪುಣೆಯ ಐಐಎಸ್‍ಇಆರ್ ಸಹಕಾರದೊಂದಿಗೆ ಅನ್ವೇಷಣೆ ಮಾಡಿದ್ದು, ಅಲ್ಲೇ ಅಭಿವೃದ್ಧಿ ಪಡಿಸಿಕೊಂಡು ಅಲ್ಲೇ ಪರೀಕ್ಷೆಗೆ ಒಳಪಡಿಸಿದ್ದು, ಬಟ್ಟೆಯನ್ನು 36 ಬಾರಿ ತೊಳೆದರೂ ಶೇ.90ರಷ್ಟು ನಿರೋಧಕ ಸಾಮಥ್ರ್ಯ ಉಳಿದುಕೊಳ್ಳುವುದು ಸಂಶೋಧನೆಯಲ್ಲಿ ಸಾಬೀತಾಗಿದೆ. ಇದಕ್ಕೆ ತಗಲುವ ವೆಚ್ಚ 14 ರೂಪಾಯಿ ಮಾತ್ರ ಎನ್ನುವುದು ವಿಶೇಷ.
ವಿಜ್ಞಾನ ಸಂಶೋಧನಾ ಕ್ಷೇತ್ರದಲ್ಲಿ ನಡೆಸಿದ ಅಮೋಘ ಸಾಧನೆಗಾಗಿ ಸುನೀತಾ ಪ್ರಭು ಅವರು ಭಾರತ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವಾಲಯದಿಂದ ಕೊಡ ಮಾಡುವ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಬುಧವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ಅವರಿಂದ ಸ್ವೀಕರಿಸಿದರು.
ಸುನೀತಾ ಪ್ರಭು ಅವರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಕೊಂಡಾಟಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.
ಸಮಯ ಅನ್ನೋದು ಬೆಲೆ ಕಟ್ಟಲಾಗದ್ದು. ಆದ್ರೆ ಅದೇ ಸಮಯವನ್ನು ತಿಳಿಸುವ ವಾಚ್ಗೆ ಲಕ್ಷ ಲಕ್ಷ ಕೋಟಿ ಕೋಟಿ ಬೆಲೆಯಿದೆ. ಅಂಬಾನಿಯ ಅಂಟಿಲಿಯಾ ಬಂಗಲೆಯಲ್ಲಿರುವ ಕಾರ್ಗಳ ಮೌಲ್ಯದ ವಾಚ್ಗಳು ಕೂಡ ಬಜಾರ್ನಲ್ಲಿ ಬಂದಿವೆ.ವಾಚ್ಗಳು ಈಗ ಕೇವಲ ಟೈಮ್ಪೀಸ್ ಆಗಿ ಉಳಿದಕೊಂಡಿಲ್ಲ. ಐಷಾರಾಮಿತನದ ಗುರುತಾಗಿ ಉಳಿದಕೊಂಡಿವೆ. ಹೀಗಾಗಿಯೇ ಎಲಾನ್ ಮಸ್ಕ್, ಮಾರ್ಕ್ ಜುಕರ್ ಬರ್ಗ್ ಇವರು ಸಂದರ್ಶನದಲ್ಲಿ, ವಿಡಿಯೋದಲ್ಲಿ ಕಾಣಿಸಿಕೊಂಡಾಗ ಅವರು ಒಂದು ವೇಳೆ ವಾಚ್ ಧರಿಸಿದ್ದರೆ ಆ ವಾಚ್ನ ಬ್ರ್ಯಾಂಡ್ ಯಾವುದು, ಅದರ ಬೆಲೆ ಎಷ್ಟು ಇವೆಲ್ಲ ಮಾತುಗಳು ಮುನ್ನೆಲೆಗೆ ಬರುತ್ತವೆ. ಈಗ ಅದೇ ರೀತಿ ವಿಶ್ವದ ಅತ್ಯಂತ ದುಬಾರಿ ವಾಚ್ನ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆಗಳು ಆಗುತ್ತಿವೆ.
ಸುಪ್ರೀಮ್ ಲಕ್ಸುರಿ ಗುರುತಾಗಿ, ಐಷಾರಾಮಿತನದ ಕಟ್ಟ ಕಡೆಯ ಎತ್ತರವಾಗಿ ಗುರುತಿಸಿಕೊಂಡಿದೆ ಹ್ಯಾಲುಸಿನೇಷನ್ ಎಂಬ ಈ ಡೈಮಂಡ್ ವಾಚ್. ಈ ವಾಚ್ನ ಬೆಲೆ ಕೇಳಿದ್ರೆ ಎಂತವರ ತಲೆಯೂ ಕೂಡ ಒಮ್ಮೆ ಗಿರ್ ಅನ್ನದೇ ಇರಲ್ಲ. ಈ ವಾಚ್ನ ಬೆಲೆ ಬರೋಬ್ಬರಿ 500 ಮಿಲಿಯನ್ ಡಾಲರ್, ಅಂದ್ರೆ ಭಾರತೀಯ ರೂಪಾಯಿಗಳಲ್ಲಿ 466 ಕೋಟಿ ರೂಪಾಯಿ ಎಂದರೆ ನೀವು ನಂಬಲೇಬೇಕು.
ಇದನ್ನು ಅಪ್ಪಟ ವಜ್ರಗಳ ಹರುಳಿನಿಂದಲೇ ತಯಾರಿಸಲಾಗಿದೆ. ಲಾರೆನ್ಸ್ ಗ್ರಾಫ್ ಎಂಬ ಉದ್ಯಮಿ 2014ರಲ್ಲಿ ಈ ಒಂದು ಬಾಸಲ್ವರ್ಲ್ಡ್ಗೆ ಕಾಲಿಟ್ಟಿದ್ದರು. ವಿಶೇಷವಾದದ್ದು ಹಾಗೆ ಅಷ್ಟೇ ಐಶಾರಾಮಿ ಹಾಗೂ ಆಕರ್ಷಕ ವಾಚ್ ಸಿದ್ಧಪಡಿಸುವ ಗುರಿ ಅವರದ್ದಿತ್ತು. ಹೀಗಾಗಿ ಹಲವು ಬಣ್ಣದ ವಜ್ರಗಳಿಂದ ಕೂಡಿದ 110 ಕ್ಯಾರೆಟ್ನ ಈ ವಾಚ್ನ್ನು ಸಿದ್ಧಪಡಿಸಿದ್ದಾರೆ. ಈ ಹ್ಯಾಲುಸಿನೇಷನ್ ವಾಚ್ ಜಗತ್ತಿನಲ್ಲಿ ಅತ್ಯಂತ ವಿರಳವಾದ ಹಾಗೂ ದುಬಾರಿಯಾದ ವಾಚ್ನ ಪಟ್ಟಿಯಲ್ಲಿದೆ. ಹಲವು ಬಣ್ಣಗಳಲ್ಲಿ ಬರುವ ಈ ವಾಚ್ ತಿಳಿ ಗುಲಾಬಿ, ನೀಲಿ, ಹಸಿರು, ಆರೆಂಜ್ ಹಾಗೂ ಹಳದಿ ಬಣ್ಣಗಳಲ್ಲಿ ಈ ವಾಚ್ಗಳನ್ನು ಸಿದ್ಧಪಡಿಸಲಾಗಿದೆ.
ಇನ್ನು ಅನೇಕ ವಿನ್ಯಾಸಗಳಲ್ಲಿಯೂ ಕೂಡ ಈ ವಾಚ್ ಲಭ್ಯವಿದೆ. ಹೃದಯದ ವಿನ್ಯಾಸ, ಪೇರಳೆ ವಿನ್ಯಾಸ ಹೀಗೆ ಒಟ್ಟು ನಾಲ್ಕು ವಿನ್ಯಾಸಗಳಲ್ಲಿ ಇದು ಲಭ್ಯವಿದೆ. ಯುನಿಕ್ ಆಗಿರುವ ಶೇಪ್ ಹಾಗೂ ಕಲರ್ನಲ್ಲಿ ಲಭ್ಯವಿದ್ದು. ನಮ್ಮ ನಿಮ್ಮಂತವರ ಕೈಗೆ ನಿಲುಕದ ಎತ್ತರದಲ್ಲಿ ಇದೆ.
ಬೆಂಗಳೂರು: ಸ್ನೇಹಿತನನ್ನೇ ವ್ಯಕ್ತಿಯೊಬ್ಬ ವಾಟರ್ ಹೀಟರ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಶ್ರೀನಿವಾಸಪುರದಲ್ಲಿ ನಡೆದಿದೆ.
ನಾಗರಾಜ್ ಎಂಬಾತ ಶ್ರೀನಿವಾಸ್ ನನ್ನು ವಾಟರ್ ಹೀಟರ್ ನಿಂದ ಹೊಡೆದ ಕೊಲೆ ಮಾಡಿದ್ದಾನೆ.
ಶ್ರೀನಿವಾಸ್ ಹಾಗೂ ನಾಗರಾಜ್ ಇಬ್ಬರು ಗಾರೆ ಕೆಲಸ ಮಾಡಿಕೊಂಡಿದ್ದರು. ಶ್ರೀನಿವಾಸ್ ಮದುವೆಯಾಗಿದ್ದರೂ ಪತ್ನಿಯನ್ನು ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದ. ಕೊಲೆ ಆರೋಪಿ ನಾಗರಾಜ್ ಗೆ ಇನ್ನೂ ಮದುವೆಯಾಗಿರಲಿಲ್ಲ.ಇಬ್ಬರೂ ಶ್ರೀನಿವಾಸಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಶ್ರೀನಿವಾಸ್ ಹಾಗೂ ನಾಗರಾಜ್ ಜಗಳವಾಗಿದ್ದು, ಈ ವೇಳೆ ನಾಗರಾಜ್ ಕೋಪದ ಬರದಲ್ಲಿ ವಾಟರ್ ಹೀಟರ್ ನಿಂದ ಶ್ರೀನಿವಾಸ್ ಮೇಲೆ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಅರಂತೋಡು: ಈಚರ್ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಕೊಡಗು ಜಿಲ್ಲೆಯ ಜೋಡುಪಾಲ ಸಮೀಪ ಡಿ. 28ರ ತಡರಾತ್ರಿಯಲ್ಲಿ ನಡೆದಿದೆ.
ಹೆಚ್.ಡಿ. ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಲಾರಿಗೆ ದಿಢೀರ್ ಬೆಂಕಿ ಹೊತ್ತಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು ರಸ್ತೆ ಪಕ್ಕ ನಿಲ್ಲಿಸಿ, ಕೆಳಗಿಳಿದಿದ್ದಾರೆ ಎನ್ನಲಾಗಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.