ಇಂದು ಮತ್ತೆ (ಜೂ. 28) ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ಸುರತ್ಕಲ್ ನ ಇಡ್ಯದ 31 ವರ್ಷದ ಯುವಕನ ಅಂತ್ಯಸಂಸ್ಕಾರಕ್ಕೆ,
ಬೋಳಾರದ ಮಸೀದಿಯ ಆವರಣದಲ್ಲಿರುವ ದಫನ ಭೂಮಿಯಲ್ಲಿ ನಡೆಸುವುದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ.
ನಂತರ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಅವರ ಮಧ್ಯಪ್ರವೇಶದಿಂದ ಬೋಳಾರದಲ್ಲೇ ದಫನ ಕಾರ್ಯವನ್ನು ಸಂಜೆಯ ಸುಮಾರಿಗೆ ನೆರವೇರಿಸಲಾಯಿತು.
ಇಡ್ಯಾ ಗ್ರಾಮದ 31 ವರ್ಷದ ಸೋಂಕಿತ ಮೃತಪಟ್ಟಿದ್ದು, ಇಡ್ಯಾ ಮಸೀದಿ ಕಬರ್ ಗುಂಡಿಯಲ್ಲಿ ನೀರು ತುಂಬಿದ ಕಾರಣದಿಂದ ಬೋಳಾರ ಬಳಿಯ ಮಸೀದಿಯಲ್ಲಿ ಅಧಿಕಾರಿಗಳು ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು.
ಈ ಸಂದರ್ಭದಲ್ಲಿ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸುರತ್ಕಲ್ ಇಡ್ಯಾ ಮಸೀದಿಯಲ್ಲೇ ದಫನ ಮಾಡುವಂತೆ ಒತ್ತಾಯ ಮಾಡಿದ್ದರು.
ಆ ಹಿನ್ನಲೆಯಲ್ಲಿ ಬೋಳಾರದ ಮಸೀದಿಯಲ್ಲಿ ದಫನಮಾಡುವ ಕಾರ್ಯವನ್ನು ಕೈಬಿಟ್ಟು ಮೃತದೇಹವನ್ನು ಆ್ಯಂಬುಲೆನ್ಸ್ ಮೂಲಕ ಇಡ್ಯಾಕ್ಕೆ ಕೊಂಡೊಯ್ಯಲಾಗಿತ್ತು.
ಈ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಮೃತದೇಹವನ್ನು ಮತ್ತೆ ಬೋಳಾರಕ್ಕೆ ತರುವಂತೆ ಸೂಚಿಸಿದರು.
ಅಲ್ಲದೆ ತಕ್ಷಣ ಬೋಳಾರಕ್ಕೆ ಧಾವಿಸಿ ಅಂತ್ಯಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸುವವರ ಜೊತೆ ಮಾತುಕತೆ ನಡೆಸಿ, ಮನವೊಲಿಸಿದರು.
ಬೋಳಾರ ಪರಿಸರದ ಯಾರೇ ಕೊರೊನಾಗೆ ಬಲಿಯಾದರೆ ಅವರ ಅಂತ್ಯಸಂಸ್ಕಾರಕ್ಕೆ ನಮ್ಮ ವಿರೋಧವಿಲ್ಲ.
ಕೊರೊನಾನಕ್ಕೆ ಬಲಿಯಾದ ಹೊರಗಿನ ವ್ಯಕ್ತಿಗಳನ್ನು ಇಲ್ಲಿ ಅಂತ್ಯಸಂಸ್ಕಾರ ನಡೆಸುವುದು ಸರಿಯಲ್ಲ. ಅದಕ್ಕೆ ನಮ್ಮ ಆಕ್ಷೇಪವಿದೆ ಎಂದು ಸ್ಥಳೀಯರು ತಿಳಿಸಿದ್ದರು.
ಮುಂದಿನ ಪ್ರಕರಣಗಳ ಬಗ್ಗೆ ಆಮೇಲೆ ನಿರ್ಧರಿಸೋಣ. ಇದೀಗ ಇಲ್ಲಿ ಎಲ್ಲಾ ಸಿದ್ಧತೆ ನಡೆಸಲಾಗಿದೆ. ಹಾಗಾಗಿ ವಿರೋಧ ವ್ಯಕ್ತಪಡಿಸದೆ ದಫನ ಕಾರ್ಯಕ್ಕೆ ಅವಕಾಶ ಮಾಡಿಕೊಡಿ ಎಂದು ಸಹಾಯಕ ಆಯುಕ್ತರು ಸೂಚಿಸಿದರು.
ಅಂತಿಮವಾಗಿ ವಿರೋಧ ವ್ಯಕ್ತಪಡಿಸುವವರು ಸಹಮತ ವ್ಯಕ್ತಪಡಿಸಿದರು. ಆ ಬಳಿಕ ಸಂಜೆಯ ಸುಮಾರಿಗೆ ಬೋಳಾರದ ಮಸೀದಿಯ ಆವರಣದಲ್ಲೇ ದಫನಕಾರ್ಯ ನೆರವೇರಿಸಲಾಯಿತು.
ಇನ್ನು ಸ್ಥಳೀಯರು ಇದೇ ಕೊನೆಯ ಬಾರಿ ಅವಕಾಶ ನೀಡಲಾಗುವುದು. ಇನ್ನು ಮುಂದೆ ಸ್ಥಳೀಯರು ಹೊರತುಪಡಿಸಿ ಬೇರೆ ಪ್ರದೇಶದವರ ಅಂತ್ಯ ಸಂಸ್ಕಾರವನ್ನು ಇಲ್ಲಿ ಮಾಡುವಂತಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ಮಂಗಳೂರು/ಟೆಹ್ರಾನ್ : ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳನ್ನು ಗುಂಡಿಕ್ಕಿ ಹ*ತ್ಯೆ ಮಾಡಿರುವ ಘಟನೆ ಟೆಹ್ರಾನ್‌ನಲ್ಲಿ ಇಂದು (ಶನಿವಾರ) ನಡೆದಿದೆ.
ಈ ಘಟನೆಯಲ್ಲಿ ಮತ್ತೋರ್ವ ನ್ಯಾಯಮೂರ್ತಿ ಗಾಯಗೊಂಡಿದ್ದಾರೆ ಎಂದು ನ್ಯಾಯಾಂಗದ ‘ಮಿಜಾನ್’ ಸುದ್ದಿ ವೆಬ್‌ಸೈಟ್ ವರದಿ ಮಾಡಿದೆ. ಆಯತುಲ್ಲಾ ಮೊಹಮ್ಮದ್ ಮೊಘಿಶೆ ಹಾಗೂ ಅಲಿ ರಝನಿ ಹ*ತ್ಯೆಗೀಡಾದ ನ್ಯಾಯಮೂರ್ತಿಗಳು.
ಸುಪ್ರೀಂ ಕೋರ್ಟ್‌ನ ಹೊರಗೆ ನ್ಯಾಯಮೂರ್ತಿಗಳ ಮೇಲೆ ಗುಂಡಿನ ದಾಳಿ ನಡೆಸಿದ ದಾಳಿಕೋರ ಬಳಿಕ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಘಟನೆಯಲ್ಲಿ ನ್ಯಾಯಮೂರ್ತಿಯೊಬ್ಬರ ಅಂಗರಕ್ಷಕ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಂಗಳೂರು/ಕೊಲ್ಕತ್ತಾ : ಆರ್.ಜಿ.ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾ*ಚಾರ ಹಾಗೂ ಕೊ*ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸಿಯಾಲ್ದಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಅನಿರ್ಬನ್ ದಾಸ್ ಶನಿವಾರ(ಜ.18)ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಸೋಮವಾರ(ಜ.20) ಪ್ರಕಟಿಸಲಿದ್ದಾರೆ.
2024ರ ಆಗಸ್ಟ್ 9 ರಂದು ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ನಡೆಸಿ, ಹ*ತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಇಡೀ ದೇಶದಾದ್ಯಂತ ಭಾರಿ ಆಕ್ರೋಶ ಕೇಳಿ ಬಂದಿತ್ತು. ದೇಶದ ಬಹುತೇಕ ಭಾಗಗಳಲ್ಲಿ ವೈದ್ಯರು ಮುಷ್ಕರ ನಡೆಸಿದ್ದರು. ಆಗಸ್ಟ್ 10 ರಂದು ಸಂಜಯ್ ರಾಯ್‌ನನ್ನು ಬಂಧಿಸಲಾಯಿತು.
ಕೊಲ್ಕತ್ತಾ ಹೈಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತ್ತು. ಆರೋಪಿಗೆ ಗ*ಲ್ಲು ಶಿಕ್ಷೆ ಆಗಬೇಕು ಎಂದು ಸಿಬಿಐ ವಾದಿಸಿದೆ. ಪ್ರಕರಣದ ವಿಚಾರಣೆ ನವೆಂಬರ್ 12 ರಂದು ಆರಂಭವಾಗಿತ್ತು. ಒಟ್ಟು 50 ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲಾಗಿದೆ. ಆರೋಪಿಯ ವಿಚಾರಣೆ ಜ.9ರಂದು ಕೊನೆಗೊಂಡಿತ್ತು.
ಮಂಗಳೂರು/ಮುಂಬೈ : ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿರುವ ಭಾರತದ 15 ಸದಸ್ಯರ ಕ್ರಿಕೆಟ್ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ.
ಚಾಂಪಿಯನ್ಸ್ ಟ್ರೋಫಿ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ, 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕರಾಗಿ ಶುಭ್‌ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ದದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಫಿಟ್‌ನೆಸ್ ಸಮಸ್ಯಗೆ ಒಳಗಾಗಿದ್ದ ಜಸ್‌ಪ್ರೀತ್ ಬುಮ್ರಾ ಅವರನ್ನು ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾಗಿದೆ.