Connect with us

    DAKSHINA KANNADA

    ಬಾಳ ಟ್ಯಾಂಕರ್ ಯಾರ್ಡ್ ವಿರುದ್ಧ ರೊಚ್ಚಿಗೆದ್ದ ಸ್ಥಳೀಯರು : ಅನಧಿಕೃತ ಬೋರ್ಡ್, ವಿದ್ಯುತ್ ಸಂಪರ್ಕ ಕಿತ್ತೆಸೆದ ಗ್ರಾಮಸ್ಥರು..!

    Published

    on

    ಮಂಗಳೂರು : ಸುರತ್ಕಲ್ ಬಾಳ ಗ್ರಾಮದ ಎಂ ಆರ್ ಪಿಎಲ್ ರಸ್ತೆಯಲ್ಲಿ ಸರ್ವೇ ನಂಬರ್ 185ರಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣ ಮಾಡಲು ಕಂಪೆನಿ ಸ್ಥಳೀಯ ವ್ಯಕ್ತಿಗೆ ಗುತ್ತಿಗೆ ನೀಡಿದ್ದು ಗ್ರಾಮಸ್ಥರ ವಿರೋಧದ ಮಧ್ಯೆಯೂ ಅನಧಿಕೃತವಾಗಿ ಬೋರ್ಡ್ ಅಳವಡಿಸಿ ಶೆಡ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದರ ವಿರುದ್ಧ ಗ್ರಾಮಸ್ಥರು ರೊಚ್ಚಿಗೆದ್ದು ಗುರುವಾರ ಬೆಳಗ್ಗೆ ಹಠಾತ್ ಧರಣಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

    ನೂರಾರು ಸಂಖ್ಯೆಯಲ್ಲಿದ್ದ ಗ್ರಾಮಸ್ಥರು ಸಾಮಾಜಿಕ ಹೋರಾಟಗಾರ್ತಿ ರೇಖಾ ಶೆಟ್ಟಿ ಬಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಪಿಡಿಒ ಮತ್ತು ಅಧಿಕಾರಿಗಳ ಸಮಕ್ಷಮ ಬೋರ್ಡ್ ತೆಗೆಸಿದ್ದಲ್ಲದೆ ವಿದ್ಯುತ್ ಸಂಪರ್ಕವನ್ನು ತೆರವುಗೊಳಿಸಿದ್ದಾರೆ.
    ಒಟ್ಟೆಕಾಯರ್ ಪರಿಸರದಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣವಾದರೆ ಪರಿಸರದ ನಿವಾಸಿಗಳಿಗೆ ತೊಂದರೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ಈಗಾಗಲೇ ಅನೇಕ ಬಾರಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

    ಆದರೆ ಕಂಪೆನಿ ಪ್ರತಿಭಟನೆಗೆ ಮಣಿಯದೆ ಟ್ಯಾಂಕರ್ ಯಾರ್ಡ್ ನಿರ್ಮಾಣಕ್ಕೆ ಗುತ್ತಿಗೆ ನೀಡಿದೆ. ಗುರುವಾರ ಮುಂಜಾನೆ ಇಲ್ಲಿನ ರಸ್ತೆ ಪಕ್ಕ ಬೋರ್ಡ್ ಅಳವಡಿಸಿದ್ದು ಶೆಡ್ ಗೆ ವಿದ್ಯುತ್ ಸಂಪರ್ಕವನ್ನೂ ಅನಧಿಕೃತವಾಗಿ ನೀಡಿದ್ದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಬಸ್ ಯಾರ್ಡ್ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

    ಕುಂಬ್ಳಕೆರೆ, ಒಟ್ಟೆಕಾಯರ್ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಪ್ರದೇಶದಲ್ಲಿ 200ರಷ್ಟು ಕುಟುಂಬಗಳು ವಾಸ ಮಾಡುತ್ತಿವೆ. ರಸ್ತೆಯ ಅಗಲ ಕಿರಿದಾಗಿದ್ದು ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ.

    ಇಲ್ಲಿ ಬುಲೆಟ್ ಗ್ಯಾಸ್ ಟ್ಯಾಂಕರ್ ನಿಲುಗಡೆಗೆ ಯಾರ್ಡ್ ನಿರ್ಮಾಣ ಮಾಡಿದಲ್ಲಿ ಜನಜೀವನಕ್ಕೆ ಮಾರಕವಾಗಲಿದೆ. ಗ್ಯಾಸ್ ಲೀಕೇಜ್ ಉಂಟಾದರೆ ಪ್ರಾಣಾಪಾಯ ಉಂಟಾಗಲಿದೆ.

    ಆದ್ದರಿಂದ ಇಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಈಗಾಗಲೇ ಬಾಳ ಗ್ರಾಮ ಪಂಚಾಯತ್ ಗೆ ಮನವಿ ನೀಡಲಾಗಿತ್ತು. ಪಂಚಾಯತ್ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರೂ ತೆರೆಮರೆಯಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣಕ್ಕೆ ಕೆಲವು ಅಧಿಕಾರಿಗಳು ಅನುಮತಿ ನೀಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಗ್ರಾಮದ ನಿವಾಸಿಗಳು ಹೆಚ್ಚಿನವರು ಉದ್ಯೋಗ ನಿಮಿತ್ತ ಹಗಲು ವೇಳೆ ಮನೆಯಲ್ಲಿ ಇಲ್ಲದೆ ಇದ್ದು ಟ್ಯಾಂಕರ್ ನಿಲ್ಲಿಸುವುದರಿಂದ ಸ್ಥಳೀಯವಾಗಿ ಅಭದ್ರತೆ ನಿರ್ಮಾಣವಾಗಲಿದೆ.

    ಟ್ಯಾಂಕರ್ ಚಾಲಕ, ಕ್ಲೀನರ್ ಗಳು ಪರಿಸರವನ್ನು ಅಂದಗೆಡಿಸುತ್ತಿದ್ದು ಮನೆಯಲ್ಲಿ ಹೆಣ್ಣುಮಕ್ಕಳನ್ನು ಬಿಡಲು ಭಯದ ವಾತಾವರಣ ನಿರ್ಮಾಣವಾಗಲಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

    ತೋಡು ನಿರ್ಮಾಣಕ್ಕೆ ಪಟ್ಟುಹಿಡಿದ ಗ್ರಾಮಸ್ಥರು:
    ಪ್ರತಿಭಟನೆಗೆ ಮಣಿದ ಬಾಳ ಪಂಚಾಯತ್ ಆಡಳಿತ ಮೆಸ್ಕಾಂ ಅಧಿಕಾರಿಗಳ ಜೊತೆ ಮಾತಾಡಿ ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ.

    ಈ ವೇಳೆ ಯಾರ್ಡ್ ಪ್ರದೇಶದ ಎದುರು ಭಾಗದಲ್ಲಿ ಹಲವು ವರ್ಷಗಳಿಂದ ಇದ್ದ ತೋಡನ್ನು ಮುಚ್ಚಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಲ್ಲದೆ ಈಗಲೇ ತೋಡು ನಿರ್ಮಾಣ ಮಾಡಿ ಎಂದು ಪಟ್ಟುಹಿಡಿದರು.

    ಅಷ್ಟೇ ಅಲ್ಲದೆ ಕೂಡಲೇ ಜೆಸಿಬಿ ತರಿಸಿ ತೋಡು ನಿರ್ಮಾಣ ಮಾಡಿದರು. ಇಲ್ಲಿದ್ದ ತೋಡನ್ನು ಮುಚ್ಚಿದ್ದರಿಂದ ರಸ್ತೆಯಲ್ಲೇ ನೀರು ಹರಿಯುತ್ತಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತದೆ. ಹೀಗಾಗಿ ತೋಡು ನಿರ್ಮಾಣ ಮಾಡಬೇಕು ಎಂದು ಧರಣಿ ಕೂತವರು ಪಂಚಾಯತ್ ಅಧಿಕಾರಿಗಳನ್ನು ಒತ್ತಾಯಿಸಿದರು.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending