Connect with us

    LATEST NEWS

    ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರಿಕೆ : ಆದ್ರೆ ಕೆಲ ವಿನಾಯಿತಿ ನೀಡಲು ಸರ್ಕಾರ ಚಿಂತನೆ..!

    Published

    on

    ಬೆಂಗಳೂರು : ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ‌ ಘೋಷಣೆ ಮಾಡಿರುವ ಲಾಕ್‌ಡೌನ್ ಅವಧಿಯನ್ನು ಜೂನ್ 7 ರಿಂದ ಮತ್ತೆ ಮುಂದುವರೆಸಲು ಸರ್ಕಾರ ಒಲವು ತೋರಿದೆ ಎಂದು ತಿಳಿದು ಬಂದಿದೆ. ಆದರೆ ಆರ್ಥಿಕ ಹಿತದೃಷ್ಟಿಯಿಂದ ಕೆಲ ವಿನಾಯಿತಿ ನೀಡಲು ಚಿಂತನೆ ನಡೆಸಿದೆ.

    ರಾಜಧಾನಿ ಬೆಂಗಳೂರಲ್ಲಿ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದೆ. ಬೆಂಗಳೂರು ಒಂದರಲ್ಲೇ ಆಸ್ಪತ್ರೆಗೆ ದಾಖಲಾಗಿರುವ ಶೇ.70 ರಷ್ಟು ರೋಗಿಗಗಳು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ. ಆದರೆ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿರುವುದು ಸರ್ಕಾರಕ್ಕೆ ತಲೆ ನೋವು ತಂದಿದೆ. ಹಳ್ಳಿಗಳಲ್ಲಿ ಸೋಂಕು, ಸಾವಿನ ಪ್ರಮಾಣ ಎರಡೂ ಏರಿಕೆಯಾಗುತ್ತಿದೆ.ಐಸಿಯು ಬೆಡ್‍ನಲ್ಲಿದ್ದರೂ ಗುಣಮುಖರಾಗಲು ಹೆಚ್ಚು ಸಮಯ ತೆಗೆದುಕೊಳ್ಳುವ ಸಾದ್ಯತೆ ಇದೆ. ಸರಿಯಾದ ಸಮಯಕ್ಕೆ ಆಕ್ಸಿಜನ್ ಬೆಡ್‍ಗಳು ಸಿಗುತ್ತಿಲ್ಲ.ಪರಿಣಾಮ ಕೊರೋನಾದಿಂದ ಸಾವನ್ನಪ್ಪುವವರ ಸಂಖ್ಯೆಯೂ ಕೂಡ ಹೆಚ್ಚಿದೆ. ಇದೆಲ್ಲಾ ಗಮನಿಸಿಯೇ ತಜ್ಞರು ಯಾವಾಗ ಲಾಕ್‍ಡೌನ್ ತೆರವು ಮಾಡಬಹುದು ಎನ್ನುವುದರ ಬಗ್ಗೆ ಸರ್ಕಾರಕ್ಕೆ ವರದಿ ಕೊಟ್ಟಿದ್ದಾರೆ. ಈಗಲೇ ಲಾಕ್‍ಡೌನ್‍ನಿಂದ ಏಕಾಏಕಿ ವಿನಾಯಿತಿ ಕೊಡುವುದು ಬೇಡ. ಏಕಾಏಕಿ ಕೊಟ್ಟರೆ ಜನರ ಓಡಾಟ ಹೆಚ್ಚಳದ ಆತಂಕ ಇದೆ. ಹೀಗಾಗಿ ಲಾಕ್ ಡೌನ್ ಸಡಿಲಿಕೆಯೂ ಬೇಡ ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

    ಕೇಂದ್ರ ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ಸೋಂಕಿನ ಪ್ರಮಾಣ ಶೇ.10ರಷ್ಟಿದ್ದರೆ ರಾಜ್ಯ ಸರ್ಕಾರ ಲಾಕ್‍ಡೌನ್  ಮುಂದುವರಿಸಬಹುದು. ಸೋಂಕಿನ ಪ್ರಮಾಣ ಶೇ 10ಕ್ಕಿಂತ ಕಡಿಮೆಯಾದರೆ ಒಂದಿಷ್ಟು ಸಡಿಲಿಕೆ ನೀಡಬಹುದಾಗಿದ್ದು ಇದನ್ನೇ ಮುಂದಿಟ್ಟು ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

    ಇನ್ನು ರಾಜ್ಯದ ಇತರ ಇತರ ಜಿಲ್ಲೆಗಳಲ್ಲಿ ಸೋಂಕಿತರು ಮತ್ತು ಸಾವಿನ ಪ್ರಮಾಣ ಎರಡರಲ್ಲೂ ಹೆಚ್ಚಳವಾಗುತ್ತಿದೆ. ಏಕೆಂದರೆ ಕೊರೊನಾ ಸೋಂಕು ಏನೋ ತಗ್ಗುತ್ತಿದ್ದರೂ ಸಾವಿನ ಸಂಖ್ಯೆ ಏರುತ್ತಲೇ ಇದೆ.  ಅನ್‍ಲಾಕ್ ಮಾಡುವುದಾದರೂ ಯಾವುದೇ ಕಾರಣಕ್ಕೂ ಏಕಕಾಲಕ್ಕೆ ಮಾಡುವುದು ಸರಿಯಲ್ಲ. ಹಾಗೇನಾದರೂ ಮಾಡಿದ ಇಷ್ಟು ದಿನ ಪಟ್ಟ ಕಷ್ಟವೆಲ್ಲಾ ವ್ಯರ್ಥ ಆಗಲಿದೆ. ಲಾಕ್‍ಡೌನ್ ಫಲಿತಾಂಶ ಈಗಷ್ಟೇ ಸಿಗುತ್ತಿದೆ. ಹೀಗಿರುವಾಗ ಜೂನ್ 7ರ ಬಳಿಕ ಒಟ್ಟಿಗೇ ಅನ್‍ಲಾಕ್ ಮಾಡಿದರೆ ಮತ್ತೆ ಒಂದೇ ಸಮನೆ ಕೊರೋನಾ ಪ್ರಕರಣಗಳು ಹೆಚ್ಚಾಗಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

    ಜೂನ್ 7ರ ಬಳಿಕ 14 ದಿನ ಅರ್ಧ ಲಾಕ್‍ಡೌನ್ ಜಾರಿಗೆ ತನ್ನಿ. ಜೂನ್ 7ರ ಬಳಿಕ ಬೆರಳೆಣಿಕೆಯಷ್ಟು ವಿನಾಯ್ತಿಯಷ್ಟೇ ಇರಲಿ. ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನದವರೆಗಷ್ಟೇ ವಿನಾಯ್ತಿ ಕೊಡಿ. ಹೋಟೆಲ್‍ಗಳಲ್ಲಿ ಪಾರ್ಸೆಲ್‍ಗಷ್ಟೇ ಅವಕಾಶ ಮುಂದುವರಿಯಲಿ.ಜೂನ್ 7ರ ಬಳಿಕ 14 ದಿನ ನೈಟ್‍ಕಫ್ರ್ಯೂ ಜಾರಿಗೆ ತನ್ನಿ. ಮದುವೆಗಳ ಮೇಲಿನ ನಿರ್ಬಂಧ ತೆಗೆಯುವುದು ಬೇಡ ಎಂದು ತಜ್ಞರು ಸಲಹೆ ನೀಡಿದ್ದಾರೆ.

    ರಾಜ್ಯದ ಆರ್ಥಿಕತೆಗೆ ಲಾಕ್ ಡೌನ್ ಹೊಡೆತ : ಜನತಾ ಕರ್ಫ್ಯೂ, ಲಾಕ್‌ಡೌನ್‌ಗಳಿಂದಾಗಿ ಆರ್ಥಿಕ ಚಟುವಟಿಕೆಗಳಿಗೆ ಭಾರಿ ಹೊಡೆತ ಬಿದ್ದಿದೆ. ಜೂನ್ 7ರ ತನಕ ಲಾಕ್‌ಡೌನ್ ಜಾರಿಯಲ್ಲಿದ್ದರೂ ಕೆಲವು ವಿನಾಯಿತಿಗಳನ್ನು ನೀಡಲು ಸರ್ಕಾರ ಮುಂದಾಗಿದೆ. ಈ ಕುರಿತು ಈಗಾಗಲೇ ಚರ್ಚೆಗಳು ನಡೆದಿವೆ. ರಾಜ್ಯದ ಅರ್ಥಿಕ ಪರಿಸ್ಥಿತಿ, ಉದ್ಯಮಗಳ ಪರಿಸ್ಥಿತಿಯನ್ನು ನೋಡಿಕೊಂಡು ಜೂನ್ 1ರಿಂದ ಕೆಲವು ವಿನಾಯಿತಿಗಳನ್ನು ನೀಡಲಾಗುತ್ತದೆ. ಈ ಕುರಿತು ಸಚಿವರ ಜೊತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ.

    ಜೂನ್‌ 1ರಿಂದ ಕೆಲವು ಕೈಗಾರಿಕೆಗಳಿಗೆ ಲಾಕ್‌ಡೌನ್‌ನಿಂದ ವಿನಾಯಿತಿ ನೀಡುವ ಕುರಿತು ಚರ್ಚೆ ನಡೆದಿದೆ. ಇವುಗಳಲ್ಲಿ ವಿದೇಶಗಳಿಗೆ ರಫ್ತು ಮಾಡುವ ಉತ್ಪನ್ನಗಳು ಸೇರಿವೆ. ಉಳಿದ ಕ್ಷೇತ್ರಗಳಿಗೆ ಕಠಿಣ ನಿಯಮಗಳು ಮುಂದುವರೆಯಲಿವೆ.

    ಲಾಕ್‌ಡೌನ್ ಪರಿಣಾಮ ಬಹುತೇಕ ಕೈಗಾರಿಕೆಗಳಿಗೆ ಬೀಗ ಬಿದ್ದಿದೆ. ಕರ್ನಾಟಕದಲ್ಲಿ ಲಾಕ್‌ಡೌನ್ ಪರಿಣಾಮದಿಂದ ರಫ್ತಿನ ಮೇಲೆ ಹೊಡೆತ ಬಿದ್ದಿದೆ. ಕಂಪನಿಗಳು ಒಂದು ವೇಳೆ ಬೇರೆ ರಾಜ್ಯಕ್ಕೆ ಸ್ಥಳಾಂತರವಾದರೆ ರಾಜ್ಯಕ್ಕೆ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆದಿದೆ. ಇಂದು ಅಥವಾ ನಾಳೆ ಮುಖ್ಯಂಂತ್ರಿಗಳು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

    Click to comment

    Leave a Reply

    Your email address will not be published. Required fields are marked *

    BIG BOSS

    ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಆಡಳಿತ !

    Published

    on

    ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ ಈಗ, 9ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದ ಹೊಸ ಟಾಸ್ಕ್ ಗೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ. ಅದುವೇ ಬಿಗ್ ಬಾಸ್ ಸಾಮ್ರಾಜ್ಯ. ಈ ಸಾಮ್ರಾಜ್ಯದಲ್ಲಿ ಉಗ್ರಂ ಮಂಜು ಅವತಾರಕ್ಕೆ, ಇನ್ನುಳಿದ ಸ್ಪರ್ಧಿಗಳು ಸುಸ್ತಾಗಿದ್ದಾರೆ.


    ಮಹಾರಾಜನಾಗಿರುವ ಉಗ್ರಂ ಮಂಜು ಆಸ್ಥಾನದಲ್ಲಿ, ಪ್ರಜೆಗಳೆಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಾರ ಮಂಜು ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಾಗೀ ಮಹಾರಾಜನಾಗಿ ಮೆರೆಯುವ ಅವಕಾಶ ಸಿಕ್ಕಿದೆ. ಮಂಜು ಅವರ ಸಾಮ್ರಾಜ್ಯದಲ್ಲಿ ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯನ್ನು ನೀಡುತ್ತಿದ್ದಾರೆ.

    ಇದನ್ನೂ ಓದಿ: ಮಹಿಳೆಯರಿಗೆ ಮಾತ್ರ ಎಂಟ್ರಿ ; ಪುರುಷರು ಈ ಪಬ್‌ಗೆ ಬರುವಂತಿಲ್ಲ  !! 
    ಇನ್ನೂ ದೊಡ್ಮನೆಯಲ್ಲಿ ಯಾವಾಗಲೂ ಸೌಂಡ್ ಮಾಡುತ್ತಿದ್ದ ಚೈತ್ರಾ ಅವರ ಬಾಯಿಗೆ ಆಲೂಗಡ್ಡೆ ತುರುಕುವಂತೆ ಮಹಾರಾಜರು ಆದೇಶಿಸಿದ್ದಾರೆ. ಮಹಾರಾಜರ ಅಪ್ಪನೆಯಂತೆ ಬಾಯಲ್ಲಿ ಆಲೂಗಡ್ಡೆ ಇಟ್ಟುಕೊಂಡಿದ್ದ ಚೈತ್ರಾ ಕೆಲಹೊತ್ತು ಸುಮ್ಮನೆ ಕೂತಿದ್ದರು. ನಂತರ ಇದನ್ನು ನಾನು ಖಂಡಿಸುತ್ತೇನೆ ಎಂದು ಸೌಂಡ್ ಮಾಡೋಕೆ ಪ್ರಾರಂಭಿಸಿದರು.
    ಒಟ್ಟಿನಲ್ಲಿ ಮಂಜು ಅವರ ಆಡಳಿತಕ್ಕೆ ಪ್ರಜೆಗಳು ಉಸಿರಾಡುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟಕ್ಕೂ ಮಂಜು ಆಡಳಿತ ಇಂದಿನ ಸಂಚಿಕೆಯಲ್ಲಿ ನೋಡಬಹುದು.

    Continue Reading

    DAKSHINA KANNADA

    ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

    Published

    on

    ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

    ಪ್ರಶಸ್ತಿ ವಿವರ :

    ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

    ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

    ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

    ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

    Continue Reading

    LATEST NEWS

    ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ

    Published

    on

    ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.

    ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.

    ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ  ಸೆರೆ ಹಿಡಿಯುವಲ್ಲಿ ಅರಣ್ಯ  ಇಲಾಖೆ  ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

     

    Continue Reading

    LATEST NEWS

    Trending