Connect with us

    ಲಾಕ್ ಡೌನ್ 3.0: ಯಾವುದಕ್ಕೆ, ಎಲ್ಲೆಲ್ಲಿ ವಿನಾಯಿತಿ? ಕಂಪ್ಲೀಟ್ ಮಾಹಿತಿ..

    Published

    on

    ಲಾಕ್ ಡೌನ್ 3.0: ಯಾವುದಕ್ಕೆ, ಎಲ್ಲೆಲ್ಲಿ ವಿನಾಯಿತಿ? ಕಂಪ್ಲೀಟ್ ಮಾಹಿತಿ..

    ನವದೆಹಲಿ: ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ದೇಶದ್ಯಾಂತ ಮೂರನೇ ಹಂತದ ಲಾಕ್ ಡೌನ್ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.

    ಮೇ 3ರಿಂದ ಮತ್ತೆ ಎರಡು ವಾರ ಕಾಲ ಲಾಕ್ ಡೌನ್ ವಿಸ್ತರಿಸಿ, ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ಈ ಲಾಕ್ ಡೌನ್ ಮೇ 17ರ ವರೆಗೂ ಮುಂದುವರಿಯಲಿದೆ.

    ಆದರೆ ಈ ಬಾರಿಯ ಮೂರನೇ ಹಂತದ ಲಾಕ್ ಡೌನ್ ಅವಧಿಯಲ್ಲಿ ಕೆಲ ಮಾರ್ಗಸೂಚಿಗಳನ್ನು ಮತ್ತು ನಿಯಮಾವಳಿಗಳನ್ನು ಜಾರಿಗೆ ತರಲು ಉದ್ದೇಶಿಸಿದೆ.

    ಮುಖ್ಯವಾಗಿ ಹಸಿರು ವಲಯದ ಪಟ್ಟಿಯಲ್ಲಿರುವ ಪ್ರದೇಶಗಳಲ್ಲಿದ್ದ ನಿರ್ಬಂಧಗಳನ್ನು ಸಡಿಲಿಸಲಾಗಿದೆ.

    ಕಿತ್ತಳೆ ವಲಯದ ಪಟ್ಟಿಯಲ್ಲಿರುವ ಪ್ರದೇಶಗಳಿಗೂ ಕೆಲ ವಿನಾಯಿತಿಗಳನ್ನು ಕಲ್ಪಿಸಲಾಗಿದೆ.

    ಆದರೆ ಕೆಂಪು ವಲಯದಲ್ಲಿರುವ ಪ್ರದೇಶಗಳಲ್ಲಿ ಇನ್ನೂ ಕಠಿಣ ನಿಯಮಗಳು ಜಾರಿಯಾಗಲಿವೆ.

    ಕೊರೊನಾ ಸೋಂಕು ಹೆಚ್ಚು ವ್ಯಾಪಿಸುವ ಅಪಾಯದಲ್ಲಿರುವ ಸೂಕ್ಷ್ಮ ಪ್ರದೇಶಗಳನ್ನು ಕಂಟೈನ್ಮೆಂಟ್ ಜೋನ್ ಎಂದು ಪರಿಗಣಿಸಲಾಗಿದೆ.

    ಇಂತಹ ಕಂಟೈನ್ಮೆಂಟ್ ವಲಯಗಳನ್ನು ಆಯಾ ನಗರ ಅಥವಾ ಜಿಲ್ಲಾಡಳಿತಗಳು ಗುರುತಿಸಬೇಕೆಂದು ಕೇಂದ್ರ ಗೃಹ ಸಚಿವಾಲಯ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.

    ಈ ಕಂಟೈನ್ಮೆಂಟ್ ಜೋನ್ ನಲ್ಲಿ ಆರೋಗ್ಯ ಸೇತು ಮೊಬೈಲ್ ಆ್ಯಪ್ ಸಂಪೂರ್ಣವಾಗಿ ಅಳವಡಿಕೆಯಾಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.

    ಪ್ರತೀ ಮನೆಗೂ ಹೋಗಿ ಪರಿಶೀಲನೆ ನಡೆಸಬೇಕು. ಈ ಸೂಕ್ಷ್ಮ ವಲಯದಲ್ಲಿ ಜನ ಸಂಚಾರಕ್ಕೆ ಕಡಿವಾಣ ಹಾಕಬೇಕು.

    ಹೊರಗಿನಿಂದ ಯಾರೂ ಒಳಗೆ ಬರದಂತೆ, ಅಥವಾ ಒಳಗಿಂದ ಯಾರೂ ಹೊರ ಹೋಗದಂತೆ ಎಚ್ಚರ ವಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

    ದೇಶವ್ಯಾಪಿ ವಿಮಾನ, ರೈಲು, ಮೆಟ್ರೋ, ಅಂತಾರಾಜ್ಯ ರಸ್ತೆ ಇತ್ಯಾದಿ ಸಂಚಾರ ಸ್ಥಗಿತ ನಿರ್ಧಾರ ಮುಂದುವರಿಯಲಿದೆ.

    ಹಾಗೆಯೇ, ಶಾಲೆ ಕಾಲೇಜು ಇತ್ಯಾದಿ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಣೆ ಮಾಡಲಾಗಿದೆ.

    ಸಿನಿಮಾ ಹಾಲ್, ಮಾಲ್ ಗಳು, ಹೋಟೆಲ್, ರೆಸ್ಟೋರೆಂಟ್ ಗಳ ಬಂದ್ ಯಥಾ ಸ್ಥಿತಿಯಲ್ಲಿ ಮುಂದುವರಿಯಲಿದೆ.

    ಜನಜಾತ್ರೆ ಸೇರುವ ಕಾರ್ಯಕ್ರಮಗಳು ನಿಷಿದ್ಧ. ಪೂಜಾ ಮಂದಿರಗಳಿಗೂ ಅವಕಾಶ ಇರುವುದಿಲ್ಲ.

    ಮೊದಲಿದ್ದ ಇವೆಲ್ಲ ನಿರ್ಬಂಧಗಳು ಮೇ 17ರವರೆಗೂ ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ.

    ಎಲ್ಲಾ ವಲಯಗಳಲ್ಲೂ ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಅನಗತ್ಯ ಜನಸಂಚಾರವನ್ನು ನಿಷೇಧಿಸಬೆಕು.

    ಸ್ಥಳೀಯ ಆಡಳಿತಗಳು ಸಿಆರ್ಪಿಸಿ ಸೆಕ್ಷನ್ 144 ಬಳಸಿ ನಿಷೇಧಾಜ್ಞೆ ಜಾರಿಗೊಳಿಸಬೇಕು.

    65 ವರ್ಷಕ್ಕಿಂತ ಮೇಲ್ಪಟ್ಟವರು, ಗರ್ಭಿಣಿಯರು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಇವರುಗಳು ಮನೆಯಿಂದ ಹೊರಗೆ ಬರದಂತೆ ಎಚ್ಚರ ವಹಿಸಬೇಕೆಂದು ಕೆಂದ್ರ ಸರ್ಕಾರ ಹೊಸ ಅದೇಶದಲ್ಲಿ ಸ್ಪಷ್ಟಪಡಿಸಿದೆ.

    ಯಾವ ವಲಯದಲ್ಲೂ ಇವುಗಳಿಗೆ ವಿನಾಯಿತಿ ಇಲ್ಲ.!

     * ವಿಮಾನ, ರೈಲು, ಮೆಟ್ರೋ

    * ಅಂತರಾಜ್ಯ ರಸ್ತೆ ಸಾರಿಗೆ

    * ಎಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು

    * ಶಾಪಿಂಗ್ ಮಾಲ್, ಸಿನಿಮಾ ಹಾಲ್, ಹೋಟೆಲ್

    * ದೇವಸ್ಥಾನ, ಪ್ರಾರ್ಥನಾ ಮಂದಿರಗಳು, ಜಾತ್ರೆ

    * ರಾತ್ರಿ 7 ರಿಂದ ಬೆಳಗ್ಗೆ 7 ರವರೆಗೆ ಸಂಚಾರಕ್ಕೆ ನಿರ್ಬಂಧ

    * 65 ವರ್ಷಕ್ಕಿಂತ ಮೇಲ್ಪಟ್ಟವರು, 10 ವರ್ಷ ವಯಸ್ಸಿನೊಳಗಿನ ಮಕ್ಕಳು ಮತ್ತು ಗರ್ಭಿಣಿಯರು ಹೊರಗೆ ಬರುವಂತಿಲ್ಲ.

    ಹಸಿರು ಮತ್ತು ಆರೆಂಜ್ ವಲಯದಲ್ಲಿ ಯಾವುದಕ್ಕೆ ವಿನಾಯಿತಿ.?

     * ಸಲೂನ್, ಬ್ಯೂಟಿ ಪಾರ್ಲರ್, ಸ್ಪಾ

    * ಮೆಡಿಕಲ್ ಕ್ಲಿನಿಕ್, ಒಪಿಡಿ

    * ಈ-ಕಾಮರ್ಸ್

    * ಸೀಮಿತ ಸಿಬ್ಬಂದಿಯೊಂದಿಗೆ ಕೃಷಿ, ಕೈಗಾರಿಕೆ

    * ಬ್ಯಾಂಕ್ ಚಟುವಟಿಕೆ

    * ಕೊರಿಯರ್ ಮತ್ತು ಪೋಸ್ಟ್

    * ಸರಕು ಸಾಗಣೆ

    ಕೆಂಪು ವಲಯ ಹಾಗೂ ಕಂಟೇನ್ಮೆಂಟ್ ಝೋನ್ ನಲ್ಲಿ ಯಾವುದಕ್ಕೂ ವಿನಾಯಿತಿ ಇಲ್ಲ.!

    ಕೋವಿಡ್-19 ಸೋಂಕಿತರನ್ನು ಹೊಂದಿರುವ ಕಂಟೇನ್ಮೆಂಟ್ ಝೋನ್ ಗಳಲ್ಲಿ ಯಾವುದೇ ಚಟುವಟಿಕೆಗಳಿಗೂ ವಿನಾಯಿತಿ ಇಲ್ಲ.

    ಇಲ್ಲಿ ಲಾಕ್ ಡೌನ್ ನಿಯಮಗಳು ಕಟ್ಟುನಿಟ್ಟಾಗಿ ಮುಂದುವರೆಯಲಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ

    Published

    on

    ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.


    ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್‌ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್‌, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ‌. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್​​ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
    ಇತ್ತ ಸುಮಿತ್‌ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
    ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.

    Continue Reading

    LATEST NEWS

    ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಕೆ

    Published

    on

    ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ.  ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.

    ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್‌ಎಫ್‌ ಹೈ ಅಲರ್ಟ್‌:
    “ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.

    ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

    Continue Reading

    LATEST NEWS

    ಪಂಚೆ ಉಟ್ಟು ದೇಸೀ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ..! ಫಿದಾ ಆದ ನೆಟ್ಟಿಗರು

    Published

    on

    ಹೆಲ್ಸ್ ಕಿಚನ್ ಹಾಗೂ ಮಾಸ್ಟರ್ ಚೆಫ್ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕ ಗಾರ್ಡನ್ ರಾಮ್ಸೆ ಇದೀಗ ತನ್ನ ವೇಷಭೂಷಣದ ಮೂಲಕ ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ಅವತಾರದಲ್ಲಿ ಅಡುಗೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸ್ಟೈಲ್‌ಆಗಿ ಪಂಚೆ ತೊಟ್ಟು ದಕ್ಷಿಣ ಕನ್ನಡ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ

    ಈ ಕುರಿತ ವಿಡಿಯೋವನ್ನು historyinmemes(ಹಿಸ್ಟೋರಿ ಇನ್‌ ಮೀಮ್ಸ್) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೆ.20ರದು ಹಂಚಿಕೊಂಡಿದ್ದ ವೀಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.

    Continue Reading

    LATEST NEWS

    Trending