Tuesday, May 30, 2023

ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಆದೇಶ.!

ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರಿಗೆ ಗುಜರಾತ್‌ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ.

ಲೋಕಸಭೆಗೆ 2019ರಲ್ಲಿ ನಡೆದ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್‌ ಅವರು ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ ‘ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು.

LEAVE A REPLY

Please enter your comment!
Please enter your name here

Hot Topics