DAKSHINA KANNADA
ಲೋಕಸಭಾ ಕಲಾಪದ ಅನುವಾದಕರಾಗಿ ಸುಳ್ಯದ ಡಾ| ಗೋವಿಂದ ಎನ್.ಎಸ್ ನೇಮಕ
ಪುತ್ತೂರು: ಲೋಕಸಭೆಯ ಕಲಾಪದಲ್ಲಿ ನಡೆಯುವ ಚರ್ಚೆಗಳನ್ನು ಇಂಗ್ಲಿಷ್ ಮತ್ತು ಪ್ರಾದೇಶಿಕ ಭಾಷೆಗೆ ಭಾಷಾಂತರ ಮಾಡುವ ಕನ್ಸಲ್ಟಂಟ್ ಇಂಟಪ್ರಿಟರ್ ಹುದ್ದೆಗಳಿಗೆ ಸಂಬಂಧಿಸಿ ಕನ್ನಡ ಭಾಷಾಂತರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದ ಗುಂಡಿಹಿತ್ಲು ನಿವಾಸಿ ಡಾ| ಗೋವಿಂದ ಎನ್.ಎಸ್. ಅವರು ನೇಮಕಗೊಂಡಿದ್ದಾರೆ.
ಲೋಕಸಭೆಯ ಅಧಿವೇಶನದ ಕಾರ್ಯಕಲಾಪಗಳನ್ನು ಭಾರತೀಯ ಭಾಷೆಗಳಿಗೆ ಅನುವಾದಿಸುವ ಸಲುವಾಗಿ ಹೊಸ ಸಂಸತ್ ಭವನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಅದಕ್ಕಾಗಿ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಂಡಿರುವ ಎಲ್ಲಾ ಭಾಷೆಗಳಲ್ಲೂ ತಲಾ 5 ಕನ್ಸಲ್ಟಂಟ್ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಕನ್ನಡಕ್ಕೆ ಭಾಷಾಂತರ ಹುದ್ದೆಗೆ 15 ಮಂದಿ ಅರ್ಜಿ ಸಲ್ಲಿಸಿದ್ದು, 10 ಮಂದಿಯನ್ನು ಆಯ್ಕೆ ಮಾಡಲಾಗಿತ್ತು, ನಾಲ್ವರು ನೇಮಕಗೊಂಡಿದ್ದಾರೆ. ಅವರಲ್ಲಿ ಮೂವರು ದಿಲ್ಲಿಯ ಕನ್ನಡಿಗರಾಗಿದ್ದು, ಡಾ. ಗೋವಿಂದ ಎನ್.ಎಸ್. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದಾರೆ. ಈ ಮೊದಲು ಓರ್ವರು ಪೂರ್ಣಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದರು.
DAKSHINA KANNADA
ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ.
ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.
DAKSHINA KANNADA
ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
DAKSHINA KANNADA
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್ಗಳನ್ನು ದಾಟಿ, ಹಂಪ್ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್ನ ಆನಂದ್ ಜಿಲ್ಲೆಯ ರೇಖಾಬೆನ್ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.
ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.
ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM7 days ago
ಶೈನ್ ಶೆಟ್ಟಿ, ಅಂಕಿತಾ ಜಸ್ಟ್ ಮ್ಯಾರೀಡ್..!! ಅಭಿಮಾನಿಗಳಿಗೆ ಖುಷಿ