Connect with us

LATEST NEWS

ಚುನಾವಣೆಗೆ ಮೂಹೂರ್ತ ಫಿಕ್ಸ್..! ಜೂ. 4 ರಂದು ಫಲಿತಾಂಶ

Published

on

ನವದೆಹಲಿ :  ಕರ್ನಾಟಕದಲ್ಲಿ 2 ಹಂತದಲ್ಲಿ  ಚುನಾವಣೆ ನಡೆಯಲಿದೆ. ಎಪ್ರಿಲ್ 26 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಮೇ 7 ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು.  ನಾಮಪತ್ರ ವಾಪಾಸ್ ಪಡೆಯಲು ಏಪ್ರಿಲ್ 22 ಕೊನೆಯ ದಿನಾಂಕ.  ಜೂನ್ 4 ರಂದು ಫಲಿತಾಂಶ ಹೊರಬೀಳಲಿದೆ.

ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜ ನಗರ, ಬೆಂಗಳೂರು ಉತ್ತರ,ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ,ಬೆಂಗಳೂರು ಸೆಂಟ್ರಲ್ , ಮೈಸೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಉಡುಪಿ-ಚಿಕ್ಕಮಗಳೂರಿನಲ್ಲಿ ಎಪ್ರಿಲ್ 26 ರಂದು ಮತದಾನ ನಡೆಯಲಿದೆ.

ಮೇ 7 ರಂದು ಶಿವಮೊಗ್ಗ, ಉತ್ತರ ಕನ್ನಡ, ಬಳ್ಳಾರಿ, ದಾವಣಗೆರೆ, ಬೆಳಗಾವಿ, ಚಿಕ್ಕೋಡಿ , ಬಾಗಲಕೋಟೆ, ಬಿಜಾಪುರ, ಕಲಬುರಗಿ, ಬೀದರ್, ವಿಜಯಪುರ, ಹಾವೇರಿ, ಕೊಪ್ಪಳದಲ್ಲಿ ಮತದಾನ ನಡೆಯಲಿದೆ.

 

ಮಹಿಳಾ ಮತದಾರರ ಸಂಖ್ಯೆ ಅಧಿಕ:
ಈ ಬಾರಿ 97 ಕೋಟಿ ಮತದಾರರು ದೇಶದಲ್ಲಿದ್ದು, 47 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 80 ವರ್ಷ ದಾಟಿದವರು 1.98 ಕೋಟಿ ಇದ್ದಾರೆ. 88 ಲಕ್ಷ ವಿಕಲ ಚೇತನರಿದ್ದಾರೆ. 2.18 ಶತಾಯುಷಿ ಮತದಾರರಿದ್ದಾರೆ. ಮಹಿಳಾ ಮತದಾರರ ಸಂಖ್ಯೆ ಪುರುಷ ಮತದಾರರಿಗಿಂತ ಹೆಚ್ಚಿದೆ. ಪ್ರತಿ ಸಾವಿರ ಪುರುಷರಿಗೆ 948 ಮಹಿಳಾ ಮತದಾರರಿದ್ದಾರೆ. 12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚು ಎಂದರು.

ಮನೆಯಲ್ಲೇ ಮತದಾನ ಅವಕಾಶ:

ಮತದಾನಕ್ಕೆ 10.5 ಲಕ್ಷ ಮತಗಟ್ಟೆ ಸ್ಥಾಪನೆ. ಒಟ್ಟು 55 ಲಕ್ಷ ಇವಿಎಂ ಬಳಕೆ ಮಾಡಲಾಗುವುದು. ಮತಗಟ್ಟೆಯಲ್ಲಿ ಎಲ್ಲಾ ರೀತಿಯ ಅನುಕೂಲ ಒದಗಿಸಲಾಗುವುದು. 85 ವರ್ಷ ಮೀರಿದವರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ನೀಡಲಾಗುವುದು. ಜೊತೆಗೆ, ಶೇ.40ಕ್ಕಿಂತ ಹೆಚ್ಚು ವಿಶೇಷ ಚೇತರರಿಗೂ ಮನೆಯಲ್ಲಿ ಮತದಾನ ಮಾಡಲು ಅವಕಾಶ ನೀಡಲಾಗುವುದು.ಮೊಟ್ಟ ಮೊದಲ ಬಾರಿಗೆ ದೇಶದಲ್ಲಿ ಈ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು.

ಕ್ರಿಮಿನಲ್ ಕೇಸ್ ಬಗ್ಗೆ ಜಾಹೀರಾತು ಕಡ್ಡಾಯ :

ಕ್ರಿಮಿನಲ್ ಹಿನ್ನೆಲೆ ಇರುವ ಅಭ್ಯರ್ಥಿ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದರೆ, ಕೇಸಿನ ಬಗ್ಗೆ ಜಾಹೀರಾತು ನೀಡಬೇಕು. ದಿನಪತ್ರಿಕೆಯಲ್ಲಿ 3 ಬಾರಿ, ಟಿವಿ ಚಾನೆನಲ್ಲಿ 3 ಬಾರಿ ಜಾಹೀರಾತು ನೀಡುವುದು ಕಡ್ಡಾಯವಾಗಿ. ಅಲ್ಲದೇ ಯಾರಾದರೂ ಅಭ್ಯರ್ಥಿ ಹಣ ಹಂಚುವುದು, ಆಮಿಷವೊಡ್ಡುವುದು ಕಂಡರೆ ದೂರು ನೀಡಲು ಅವಕಾಶವೂ ಇದೆ. ಫೋಟೋ ತೆಗೆದುಕಳಿಸಿದರೆ 100 ನಿಮಿಷದಲ್ಲಿ ದಂಡ ವಿಧಿಸಲಾಗುವುದು. ಪ್ರತಿ ಜಿಲ್ಲೆಗಳಲ್ಲಿ ಕಂಟ್ರೋಲ್ ರೂಂ ತೆರೆಯಲಾಗುವುದು. ಪ್ರತಿ ಮತದಾರರಿಗೂ ಅಭ್ಯರ್ಥಿಗಳ ಬಗ್ಗೆ ತಿಳಿದುಕೊಳ್ಳುವ ಅವಕಾಶ ಇದೆ ಎಂದರು.

ಸುಳ್ಳು ಸುದ್ದಿ ಹರಡಿದರೆ ಕ್ರಮ : 

ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದರೆ ಕ್ರಮ ಕೈಗೊಳ್ಳಲಾಗುವುದು. ಟೀಕಿಸುವ ಹೆಸರಿನಲ್ಲಿ ಸುಳ್ಳು ಸುದ್ದಿ ಹರಡಿಸುವುದನ್ನು ಸಹಿಸುವುದಿಲ್ಲ. ಖಾಸಗಿ ಬದುಕಿನ ಮೇಲೆ ವಾಗ್ದಾಳಿ ನಡೆಸುವುದು ಜಾತಿ, ಧರ್ಮ ಆಧಾರಿತ ಪ್ರಚಾರ ಮಾಡುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ.ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸುವಂತಿಲ್ಲ. ದೇಶಾದ್ಯಂತ 2100 ವೀಕ್ಷಕರ ನೇಮಕ ಮಾಡಲಾಗುವುದು ಎಂದರು.

Click to comment

Leave a Reply

Your email address will not be published. Required fields are marked *

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Published

on

ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ ಕೀರ್ತಿ ಮೃತ ಯುವತಿ. ಘಟನೆಯಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ..; ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

ಧರ್ಮಸ್ಥಳದಿಂದ ಮುರುಡೇಶ್ವರಕ್ಕೆ ಹೊರಟಿದ್ದ ಇನೋವಾ ಕಾರು ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಟ್ಟಾಗಿ ಮುರ್ಡೇಶ್ವರ, ಗೋಕರ್ಣಕ್ಕೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

accident

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

LATEST NEWS

Trending