Connect with us

International news

ಭಾರತದ ಆಟೋ ಚಾಲಕಿಗೆ ಲಂಡನ್ ನ ಪ್ರತಿಷ್ಠಿತ ಪ್ರಶಸ್ತಿ

Published

on

ಮಂಗಳೂರು / ಲಂಡನ್ : ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಹಳ್ಳಿಯೊಂದರ 18 ವರ್ಷದ ರಿಕ್ಷಾ ಚಾಲಕಿ ಆರತಿ ಬ್ರಿಟನ್​​ನ ಪ್ರತಿಷ್ಠಿತ ಮಹಿಳಾ ಸಬಲೀಕರಣ ಪ್ರಶಸ್ತಿ ಪಡೆದಿದ್ದಾರೆ. ಪ್ರಿನ್ಸ್ ಟ್ರಸ್ಟ್ ಅವಾರ್ಡ್ಸ್‌ನಲ್ಲಿ ವಿಶ್ವಪ್ರಸಿದ್ಧ ಮಾನವ ಹಕ್ಕುಗಳ ನ್ಯಾಯವಾದಿಯ ಹೆಸರಿನಲ್ಲಿ ಅಮಲ್ ಕ್ಲೂನಿ ಮಹಿಳಾ ಸಬಲೀಕರಣ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿ ಪಡೆದ ಆರತಿ ಬ್ರಿಟನ್ ರಾಜ ಕುಟುಂಬದ ಅರಮನೆ ಬಕಿಂಗ್‌ ಹ್ಯಾಮ್ ಪ್ಯಾಲೇಸ್‌ನಲ್ಲಿ ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿಯಾದರು.


ಸರ್ಕಾರದ ಪಿಂಕ್ ಇ-ರಿಕ್ಷಾ ಚಾಲನೆ ಮಾಡುವ ಮೂಲಕ ಇತರ ಯುವತಿಯರಿಗೆ ಮಾದರಿ ಮತ್ತು ಮಹಿಳಾ ಸಬಲೀಕರಣಕ್ಕೆ ಆರತಿ ಸ್ಪೂರ್ತಿಯಾಗಿದ್ದಾರೆ.
“ಇದೇ ರೀತಿಯ ಸವಾಲುಗಳನ್ನು ಎದುರಿಸುವ ಇತರ ಹುಡುಗಿಯರನ್ನು ಪ್ರೇರೇಪಿಸಲು ನಾನು ಹೆಮ್ಮೆಪಡುತ್ತೇನೆ. ಸರ್ಕಾರ ಈ ಪಿಂಕ್​​ ರಿಕ್ಷಾ ಯೋಜನೆ ಜಗತ್ತನ್ನು ವಿಭಿನ್ನ ಬೆಳಕಿನಲ್ಲಿ ನೋಡಲು ನನಗೆ ಸಹಾಯ ಮಾಡಿದೆ. ಈಗ ನಾನು ನನ್ನ ಸ್ವಂತ ಕನಸುಗಳನ್ನು ಮಾತ್ರವಲ್ಲದೆ ನನ್ನ ಮಗಳ ಕನಸುಗಳನ್ನೂ ಈಡೇರಿಸಬಲ್ಲೆ.  ಇ ರಿಕ್ಷಾ ಡಿಸೇಲ್ ಪೆಟ್ರೋಲ್‌ನಂತೆ ಪರಿಸರ ಮಾಲಿನ್ಯ ಮಾಡುವುದಿಲ್ಲ, ಇ ರಿಕ್ಷಾಗೆ ನಾನು ಮನೆಯಲ್ಲಿ ದಿನವೂ ರಾತ್ರಿ ಚಾರ್ಜ್ ಮಾಡುತ್ತೇನೆ ” ಎಂದು ಆರತಿ ಹೇಳಿಕೆ ನೀಡಿರುವ ಬಗ್ಗೆ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಪ್ರಶಸ್ತಿಯ ವಿಶೇಷತೆ ಏನು?

ಪ್ರಿನ್ಸ್ ಆಫ್ ವೇಲ್ಸ್ ಎಂದು ಕಿಂಗ್ ಚಾರ್ಲ್ಸ್ ಸ್ಥಾಪಿಸಿದ ಪ್ರಿನ್ಸ್ ಟ್ರಸ್ಟ್ ಇಂಟರ್ನ್ಯಾಷನಲ್ ಅನ್ನು ಈಗ ಕಿಂಗ್ಸ್ ಟ್ರಸ್ಟ್ ಇಂಟರ್ನ್ಯಾಷನಲ್ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ : 2 ಸಾವಿರ ರೂಪಾಯಿಗಾಗಿ ಯುವತಿಯ ಹ*ತ್ಯೆ ಮಾಡಿದ್ದ ಅಪ್ರಾಪ್ತ ಅರೆಸ್ಟ್!

ಕೆಂದರೆ ಇದು ಉದ್ಯೋಗ, ಶಿಕ್ಷಣ ಮತ್ತು ಉದ್ಯಮ ಕಾರ್ಯಕ್ರಮಗಳ ಮೂಲಕ 20 ದೇಶಗಳಲ್ಲಿನ ಯುವಜನರಿಗೆ ಬೆಂಬಲ ನೀಡುತ್ತಿದೆ. ಪ್ರಿನ್ಸ್ ಟ್ರಸ್ಟ್ ಮಹಿಳಾ ಸಬಲೀಕರಣ ಪ್ರಶಸ್ತಿಯು ಸ್ವಾಭಿಮಾನಿ ಮಹಿಳೆಯರು ಮತ್ತು ಅವರ ಸಾಧನೆಗಳನ್ನು ಗುರುತಿಸಿ ಗೌರವಿಸುವ ಪ್ರಶಸ್ತಿಯಾಗಿದೆ.

International news

ಐಪಿಎಲ್ ಹರಾಜಿನಲ್ಲಿ ಬದಲಾವಣೆ ತಂದ ಬಿಸಿಸಿಐ; ಏನು ಗೊತ್ತಾ!?

Published

on

ಬೆಂಗಳೂರು/ಮುಂಬೈ: ಐಪಿಎಲ್ ಸೀಸನ್ 18ರ ಮೆಗಾ ಹರಾಜು ಪ್ರಕ್ರಿಯೆ ನಾಳೆಯಿಂದ ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯಲಿದೆ. ಆದರೆ ಐಪಿಎಲ್ ಹರಾಜಿನ ನಡುವೆ ಬಿಸಿಸಿಐ ಹೊಸ ಟ್ವಿಸ್ಟ್ ಕೊಟ್ಟಿದೆ.

ಈ ಬಾರಿಯ ಮೆಗಾ ಹರಾಜಿನಲ್ಲಿ 577 ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. 204 ಸ್ಥಾನಗಳಿಗೆ ನಡೆಯುವ ಈ ಹರಾಜು ಪ್ರಕ್ರಿಯೆಯಲ್ಲಿ ಭಾರತದ ಹಾಗೂ ವಿದೇಶಿ ಆಟಗಾರರು ಕೋಟಿ-ಕೋಟಿ ಮೌಲ್ಯದಲ್ಲಿ ವಿವಿಧ ತಂಡಗಳಿಗೆ ಸೇರಿಕೊಳ್ಳಲಿದ್ದಾರೆ. 10 ಫ್ರಾಂಚೈಸಿಗಳು ಮುಂಬರುವ ಐಪಿಎಲ್ ಸೀಸನ್ ಗಾಗಿ ತಮ್ಮ ತಂಡಗಳನ್ನು ರೂಪಿಸಿಕೊಳ್ಳಲಿದೆ. ಆದರೆ ಬಿಸಿಸಿಐ ಮೆಗಾ ಹರಾಜಿನ ಸಮಯವನ್ನು ಸ್ವಲ್ಪ ಬದಲಾಯಿಸಿದೆ.

ಇದನ್ನೂ ಓದಿ :ಜೈಲಲ್ಲಿ ರಜತ್ ಹೊಸ ವರಸೆ.. ಕಂಬಿ ಹಿಂದೆ ಇದ್ದುಕೊಂಡೇ ಎದುರಾಳಿಗಳ ಆಟವಾಡಿಸಿದ ಸ್ಪರ್ಧಿ..!
ಈಗಗಾಲೇ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಪಂದ್ಯಾಟ ಆಸ್ಟ್ರೇಲಿಯಾದ ಪರ್ತ್ ನಲ್ಲಿ ನಡೆಯುತ್ತಿದೆ. ಅದೇ ದಿನ ಮೊದಲ ಟೆಸ್ಟ್ ನ ಮೂರನೇ ಮತ್ತು ನಾಲ್ಕನೇ ದಿನದ ಆಟ ನಡೆಯಲಿದೆ. ಟೆಸ್ಷ್ ಪಂದ್ಯವು ಮಧ್ಯಾಹ್ನ 2:50ಕ್ಕೆ ಮುಕ್ತಾಯವಾಗಲಿದೆ. ಒಂದು ವೇಳೆ ಬದಲಾದ ಸಂದರ್ಭದಲ್ಲಿ ಪಂದ್ಯ ಮುಂದುವರಿದರೆ ಮಧ್ಯಾಹ್ನ 3:20ರವರೆಗೂ ನಡೆಯಲಿದೆ. ನಿಗದಿಯಂತೆ ಹರಾಜು ಪ್ರಕ್ರಿಯೆ ನಡೆದರೆ ನೇರ ಪ್ರಸಾರಕ್ಕೆ ತೊಂದರೆಯಾಗಲಿದೆ.
ಪ್ರಸಾರಕರ ಕೋರಿಕೆ ಮೆರೆಗೆ ಬಿಸಿಸಿಐ ಐಪಿಎಲ್ ಹರಾಜಿನ ಸಮಯವನ್ನು ಮಧ್ಯಾಹ್ನ 3ರಿಂದ 3:30ಕ್ಕೆ ಬದಲಾಯಿಸಿದೆ. ಈ ಮೊದಲು ನಿಗಧಿಯಂತೆ 3:30ಕ್ಕೆ ಹರಾಜು ಪ್ರಕ್ರಿಯೆ ಆರಂಭವಾಗಬೇಕಿತ್ತು. ಇದರಿಂದ ನಾಳೆಯ ಹರಾಜು ಪ್ರಕ್ರಿಯೆ ತೀವ್ರ ಕುತೂಹಲ ಕೆರಳಿಸಿದೆ.

Continue Reading

BIG BOSS

ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

Published

on

ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.

‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ‌. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು

Continue Reading

BIG BOSS

ಮಂಗಳೂರು: ಪತಿಯ ಅ*ನೈತಿಕ ಸಂಬಂಧ; ತ್ರಿವಳಿ ತಲಾಕ್ ಮೂಲಕ ಪತ್ನಿಗೆ ವಿಚ್ಚೇದನ

Published

on

ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.

ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್‌ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.

ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

Continue Reading

LATEST NEWS

Trending

Exit mobile version