Connect with us

    LATEST NEWS

    ಶ್ರೀ ವೀರ ವೆಂಕಟೇಶ ದೇವರ ಅನ್ನಪೂರ್ಣೆ( ಪಾಕ ಶಾಲೆ)ಯ ಉದ್ಘಾಟನೆ

    Published

    on

    ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನಾ ಸಮಾರಂಭವು ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು .

    ಪ್ರಾರಂಭದಲ್ಲಿ ಶ್ರೀಗಳವರು ಬಂಟ್ವಾಳ್ ಮೊಕ್ಕಾಂ ನಿಂದ ಆಗಮಿಸಿದ್ದು ಶ್ರೀಗಳವರಿಗೆ ಮಂಗಳೂರು ಪೇಟೆಯ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು .

    ಶ್ರೀಗಳವರಿಂದ ಶ್ರೀ ವೀರ ವೆಂಕಟೇಶ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ ನಡೆಯಿತು ಇದೇ ಸಂದರ್ಭದಲ್ಲಿ ಬಳಿಕ ಬರುವ ವರ್ಷ ಜನವರಿ ೨೫ ರಂದು ನಡೆಯಲಿರುವ ಶ್ರೀ ದೇವರ ಪುನಃ ಪ್ರತಿಷ್ಠಾ ದಶಮಾನೋತ್ಸವ ಹಾಗೂ ನೂತನ ಬ್ರಹ್ಮ ರಥ ಸಮರ್ಪಣೆ ನಡೆಯಲಿರುವುದರಿಂದ ಶ್ರೀಗಳವರಿಂದ ಪ್ರರಥನೇ ನಡೆದು ಪ್ರಸಾದ ನೀಡಿದರು ,

    ಬಳಿಕ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನಾ ಸಮಾರಂಭ ಶ್ರೀಗಳವರಿಂದ ದೀಪ ಪ್ರಜ್ವಲನೆಯ ಮುಖೇನ ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿತು .

    ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಸಿ ಎಲ್ ಶೆಣೈ , ಕೆ ಪಿ ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ , ಕೊಡುಗೈ ದಾನಿ ರಾಮದಾಸ್ ಕಾಮತ್ , ವೆಂಕಟೇಶ್ ಪೈ ಹಾಗೂ ಸಾವಿರಾರು ಭಜಕರು ಉಪಸ್ಥಿತರಿದ್ದರು .

    LATEST NEWS

    ತಿರುಪತಿ ಲಡ್ಡು ಪ್ರಕರಣ: ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ

    Published

    on

    ಬೆಂಗಳೂರು: ತಿರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಶುಕ್ರವಶರ ಸುತ್ತೋಲೆ ಹೊರಡಿಸಿತ್ತು. ಇದೀಗ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ.

    ಮುಜರಾಯಿ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 34,000 ಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ, 205 ದೇಗುಲಗಳ ವಾರ್ಷಿಕ ಆದಾಯ 25 ಲಕ್ಷ ರೂ.ಗಿಂತ ಹೆಚ್ಚಿದ್ದು, ವರ್ಗ-ಎ ಎಂದು ವರ್ಗೀಕರಿಸಲ್ಪಟ್ಟಿವೆ. 193 ದೇಗುಲಗಳನ್ನು 5 ಲಕ್ಷದಿಂದ ರೂ. 25 ಆದಾಯದೊಂದಿಗೆ ವರ್ಗ-ಬಿ ಎಂದು ಗುರುತಿಸಲಾಗಿದೆ. ಉಳಿದವುಗಳನ್ನು 5 ಲಕ್ಷ ರೂ. ಆದಾಯದೊಂದಿಗೆ ವರ್ಗ-ಸಿ ಎಂದು ವರ್ಗೀಕರಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ದೇವಾಲಯಗಳು ಭಕ್ತರಿಗೆ ಪ್ರಸಾದವನ್ನು ನೀಡುತ್ತವೆ.

    Continue Reading

    bengaluru

    ಜೈಲಿನಲ್ಲೇ ಮೊಬೈಲ್‌ ಬಳಕೆ !

    Published

    on

    ಮಂಗಳೂರು/ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪ್ರಕರಣ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಸೆಂಟ್ರಲ್ ಜೈಲ್ಗೆ ಮೊಬೈಲ್ ರವಾನೆ ಮಾಡುತ್ತಿದ್ದ ಖೈದಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


    ಕೋಲಾರದ ಕೆಜಿಎಫ್ ನ ವಿಜಯ್ನನ್ನು ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಆಗ್ನೇಯ ವಿಭಾಗದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು.
    ಜೈಲಿನೊಳಗೆ ವಿಜಯ್ ಸಿಬ್ಬಂದಿಯೊಬ್ಬರ ನೆರವು ಪಡೆದು ಸ್ಮಾರ್ಟ್ ಫೋನ್ಗಳನ್ನು ಹೊರಗಿನಿಂದ ಖರೀದಿಸಿಕೊಂಡು ಅವುಗಳನ್ನು ಜೈಲಿನಲ್ಲಿರುವ ಇತರ ಖೈದಿಗಳಿಗೆ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಜಯ್ ಮೊಬೈಲ್ ಪೂರೈಸುವುದಕ್ಕೆ ಸಾಕ್ಷ್ಯಗಳು ಸಿಕ್ಕ ಬೆನ್ನಲ್ಲೇ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
    ಕಸ್ಟಡಿಯಲ್ಲಿದ್ದ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್ ಹಾಗೂ ವೇಲು ಅವರ ವಿಚಾರಣೆಯೂ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ವಿಜಯ್ ಜೈಲು ಅಧಿಕಾರಿಗಳ ಸಹಾಯದಿಂದಲೇ ಮೊಬೈಲ್ ಗಳನ್ನು ಮಾರಾಟ ಮಾಡುತ್ತಿದ್ದ. ರೌಡಿ ಶೀಟರ್ಗಳು ಸಾವಿರಾರು ಹಣ ಕೊಟ್ಟು ಈತನಿಂದ ಮೊಬೈಲ್ ಖರೀದಿಸುತ್ತಿದ್ದರು ಎಂಬ ವಿಚಾರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
    ಸೆ. 15 ರಂದು ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ 26 ಮೊಬೈಲ್ ಪತ್ತೆಯಾಗಿದ್ದವು. ಇನ್ನಷ್ಟು ತನಿಖೆ ನಡೆಸಿದಾಗ ವಿಜಯ್ ಮೊಬೈಲ್ ಪೂರೈಸುತ್ತಿದ್ದ ಎಂಬುವುದು ಖಚಿತವಾಗಿದೆ ಎಂದು ವರದಿಯಾಗಿದೆ

    Continue Reading

    LATEST NEWS

    ಬಾಲಕನ ಮರ್ಮಾಂಗದೊಂದಿಗೆ ಸಹಪಾಠಿಗಳ ಆಟ; ಆಸ್ಪತ್ರೆಗೆ ದಾಖಲಾದ ಬಾಲಕ

    Published

    on

    ಸುಳ್ಯ: ಹಾಸ್ಟೇಲ್ನಲ್ಲಿ ಉಳಿದು ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವನ ಮರ್ಮಾಂಗವೆಳೆದು ಗೆಳೆಯರು ಆಟವಾಡಿದ ಪರಿಣಾಮವಾಗಿ ಮರ್ಮಾಂಗಕ್ಕೆ ಹಾನಿಯಾಗಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ.


    ಸಂಪಾಜೆಯ ಆಲಡ್ಕ ನಿವಾಸಿಯಾಗಿರುವ 12 ವರ್ಷದ ಬಾಲಕ ಕೆಲ ಸಮಯದಿಂದ ಕೊಡಗು ಸಂಪಾಜೆಯ ಹಾಸ್ಟೇಲ್ನಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದ. ಸೆ.14 ರಂದು ಇಬ್ಬರು ಸಹಪಾಠಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು. ಬಳಿಕ ಬಾಲಕ ಮೂತ್ರ ವಿಸರ್ಜನೆ ಮಾಡುವ ವೇಳೆ ನೋವು ಬಂತೆಂದು ಮನೆಗೆ ಮರಳಿದ್ದಾನೆ.
    ತಾಯಿಯೊಡನೆ ವಿಷಯ ಹೇಳಿಕೊಂಡಾಗ ತಕ್ಷಣವೇ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಬಾಲಕ ಚೇತರಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ

    Continue Reading

    LATEST NEWS

    Trending