ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತಪಟ್ಟ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕಂಬ ಸಮೀಪದ ರ್ಪಯಾ ಕೊಡಂಗೆ ಎಂಬಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಜಾವೂರು ನಿವಾಸಿಬಾಲಪ್ಪ ಎ. ಮೃತಪಟ್ಟ ವ್ಯಕ್ತಿ.
ಬಾಲಪ್ಪ ಅವರು ಇಲ್ಲಿನ ರಸ್ತೆ ಕಾಮಗಾರಿ ಗುತ್ತಿಗೆ ಸಂಸ್ಥೆಯೊಂದರಲ್ಲಿ ಕಳೆದ ಕೆಲ ವರ್ಷಗಳಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದರು.
ರಸ್ತೆ ಕಾಮಗಾರಿ ಬಳಿಕ ಬಾಲಪ್ಪ ಅವರು ಲಾರಿಯನ್ನು ಅಲ್ಲಿ ಲೋಡ್ ಮಾಡಲು ಕೊಡಂಗೆಯಲ್ಲಿ ನಿಲ್ಲಿಸಿದ್ದರು.
ಲಾರಿ ನಿಲ್ಲಿಸಿ ಅಲ್ಲೇ ಪಕ್ಕದಲ್ಲಿ ಮೊಬೈಲ್ ಫೋನ್ ತಪಾಸಣೆಯಲ್ಲಿ ತೊಡಗಿದ್ದ ಬಾಲಪ್ಪ ಅವರಿಗೆ ಲಾರಿ ನಿಧಾನವಾಗಿ ಮುಂದೆ ಚಲಿಸುತ್ತಿರುವ ಬಗ್ಗೆ ಜಲ್ಲಿ ಲೋಡ್ ಮಾಡುವ ಜೆಸಿಬಿ ಚಾಲಕ ಜೋರಾಗಿ ಹೇಳಿದ್ದು,
ಚಲಿಸುವ ಲಾರಿಯನ್ನು ತಡೆಯಲು ಚಕ್ರದಡಿ ಕಲ್ಲು ಇಡುವ ಪ್ರಯತ್ನಕ್ಕೆ ಮುಂದಾದಾಗ ಈ ಘಟನೆ ಸಂಭವಿಸಿದೆ ಎಂದು ಪೋಲಿಸರು ತಿಳಿಸಿದ್ದಾರೆ.