Monday, May 23, 2022

ಕೆಂಪು ಕಲ್ಲು ತುಂಬಿದ್ದ ಲಾರಿ ಪಲ್ಟಿ: ಓರ್ವ ಸಾವು-ಇಬ್ಬರಿಗೆ ಗಾಯ

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಕೆಂಪು ಕಲ್ಲು ತುಂಬಿದ ಲಾರಿಯೊಂದು ಉರುಳಿಬಿದ್ದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಮುಂಡಿತ್ತಡ್ಕ-ಪಳ್ಳಂ ರಸ್ತೆಯ ಬೊಳ್ಕನಡ್ಕ ಎಂಬಲ್ಲಿ ನಡೆದಿದೆ.


ಮೃತರನ್ನು ಜಾರ್ಖಂಡ್ ಮೂಲದ ಸುಧೀರ್ (30) ಎಂದು ಗುರುತಿಸಲಾಗಿದೆ. ಚಾಲಕ ಸೇರಿದಂತೆ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅವರನ್ನು ಅರ್ಜುನ್ ಮತ್ತು ಅಜಯ್ ಎಂದು ಗುರುತಿಸಲಾಗಿದೆ.


ಬೊಳ್ಕನಡ್ಕ ಅಂಗನವಾಡಿ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ವಾಹನ ರಸ್ತೆ ಬದಿಯ ಗೋಡೆಗೆ ಡಿಕ್ಕಿ ಹೊಡೆದು ಉರುಳಿದೆ.


ಲಾರಿಯಡಿ ಸಿಲುಕಿದ್ದ ಸುಧೀರ್‌ನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಸಂಬಂಧ ಬದಿಯಡ್ಕ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics