Monday, July 4, 2022

ಬಂಟ್ವಾಳ: ರಾ.ಹೆಯಲ್ಲಿ ಕಲ್ಲಿದ್ದಲು ಸಾಗಾಟದ ಲಾರಿ ಪಲ್ಟಿ: ಸಂಚಾರಕ್ಕೆ ಅಡ್ಡಿ

ಬಂಟ್ವಾಳ: ಕಲ್ಲಿದ್ದಲು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ರಾ.ಹೆ ತುಂಬೆ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.


ಮಂಗಳೂರು ಬಂದರಿನಿಂದ ಕಲ್ಲಿದ್ದಲು ತುಂಬಿದ್ದ ಲಾರಿ ಬಳ್ಳಾರಿ ಕಡೆಗೆ ಸಾಗುತ್ತಿದ್ದ ಸಂದರ್ಭದಲ್ಲಿ ತುಂಬೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿ ಪಲ್ಟಿಯಾಗಿದೆ.

ಘಟನೆಯಿಂದ ಲಾರಿ ಚಾಲಕನಿಗೆ ಅಲ್ಪಸ್ವಲ್ಪ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಬಳಿಕ ಕೆಲ ಗಂಟೆಗಳ ಕಾಲ ರಸ್ತೆಯಲ್ಲಿ ಸಂಚಾರಕ್ಕೆ ಆಡ್ಡಿಯಾಗಿತ್ತು.


ಮೆಲ್ಕಾರ್ ಟ್ರಾಫಿಕ್ ಎಸ್.ಐ ರಾಜೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸಂಚಾರಕ್ಕೆ ಅನುವು ಮಾಡಿದರು.
ಲಾರಿ ಪಲ್ಟಿಯಾದ ಘಟನೆಯಿಂದ ಲಾರಿಯ ಡಿಸೇಲ್ ಟ್ಯಾಂಕ್‌ಗೆ ಹಾನಿಯಾಗಿದ್ದು ರಸ್ತೆಯ ತುಂಬಾ ಹರಿದಿತ್ತು. ತಕ್ಷಣ ಎಸ್.ಐ.ರಾಜೇಶ್ ಅಗ್ನಿಶಾಮಕ ದಳವನ್ನು ಕರೆಸಿ ನೀರು ಹಾಯಿಸಿ ರಸ್ತೆಯಲ್ಲಿ ಹರಿದ್ದಿದ್ದ ಡಿಸೇಲ್ ತೆರವು ಮಾಡಿದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಎಕ್ಕೂರಿನಲ್ಲಿ ಲೈಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು-ಮೂವರಿಗೆ ಗಾಯ

ಮಂಗಳೂರು: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಎಕ್ಕೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ.ನಿನ್ನೆ ಮಧ್ಯರಾತ್ರಿ...

ಮಂಗಳೂರು: ದೋಣಿ ಮೇಲೆತ್ತುವಾಗ ನೇತ್ರಾವತಿ ನದಿಗೆ ಬಿದ್ದ ಓರ್ವ ನಾಪತ್ತೆ ಮತ್ತಿಬ್ಬರ ರಕ್ಷಣೆ

ಬಂಟ್ವಾಳ: ದೋಣಿ ಮೇಲೆತ್ತುವಾಗ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದು ಓರ್ವ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ.ನಾಪತ್ತೆಯಾದ ಯುವಕನನ್ನು ರಾಜು ಸಾಹ್...

“ಮದರಸ ಬಗ್ಗೆ ಹೇಳಿಕೆಯನ್ನು ಉದುರುವಾಗ ನಾಲಗೆ ಹದ್ದು ಬಸ್ತಿನಲ್ಲಿ ಇಟ್ಟು ಮಾತನಾಡುವುದು ಒಳಿತು”

ಮಂಗಳೂರು: ಪ್ರವಾದಿ ನಿಂದನೆಗೈದ ನೂಪುರ್ ಶರ್ಮಾ ರನ್ನು ಬೆಂಬಲಿಸಿ ಹೇಳಿಕೆ ನೀಡಿದ ಕನ್ನಯ್ಯ ಲಾಲ್ ನನ್ನು ಇತ್ತೀಚೆಗೆ ರಾಜಸ್ತಾನದ ಉದಯಪುರದಲ್ಲಿ ಹತ್ಯೆ ಮಾಡಿದ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರು ಆಗಿದ್ದು,ಅಂತಹ...