Monday, January 24, 2022

ಆಕ್ಟಿವಾ-ಲಾರಿ ಭೀಕರ ಅಪಘಾತ: ಕ್ಯಾಂಪ್ಕೋ ಮಹಿಳಾ ಸಿಬ್ಬಂದಿ ಸಾವು

ಮಂಗಳೂರು:ನಗರ ಹೊರವಲಯದ ಪಡೀಲ್‌ನಲ್ಲಿ ಆಕ್ಟಿವಾ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ, ಸವಾರ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ.


ಮೃತರನ್ನು ವಿದ್ಯಾ ಕಣ್ವತೀರ್ಥ(46) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಕ್ಯಾಂಪ್ಕೋ ಚಾಕೋಲೇಟ್‍ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಆಗಿದ್ದರು.

ಇಂದು ಬೆಳಗ್ಗೆ 7.45ರ ಹೊತ್ತಿಗೆ ಪಡೀಲ್‍’ನಲ್ಲಿ ಆಕ್ಟಿವಾ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ವಿದ್ಯಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Hot Topics

ಕಾರ್ಕಳದಲ್ಲಿ ಕೊರೋನಾದಂತೆ ಹರಡುತ್ತಿದೆ ಕಾಲು ಬಾಯಿ ರೋಗ

ಕಾರ್ಕಳ: ಇಲ್ಲಿನ ಆಸುಪಾಸಿನಲ್ಲಿ ಪ್ರಾಣಿಗಳಲ್ಲಿ ಕಂಡುಬರುವ ಅದರಲ್ಲೂ ಜಾನುವಾರಿನಲ್ಲಿ ಸಾಂಕ್ರಾಮಿಕ ಕಾಲುಬಾಯಿ ರೋಗ ಹರಡುತ್ತಿದೆ.ಇದರಿಂದಾಗಿ ಈಗಾಗಲೇ ಹಲವು ಜಾನುವಾರು ಬಲಿಯಾಗಿದ್ದು, ಪಶು ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.ಕಾರ್ಕಳ ನಗರ, ತೆಳ್ಳಾರು, ಮಿಯಾರು,...

ಮಂಗಳೂರಿನ ಕುವರಿ ರೆಮೊನಾ ಇವೆಟ್ಟಾ ಪಿರೇರಾಗೆ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ

ಮಂಗಳೂರು: ಈ ಬಾರಿಯ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ ಮಂಗಳೂರಿನ ರೆಮೊನಾ ಇವೆಟ್ಟಾ ಪಿರೇರಾ ಅವರಿಗೆ ದೊರೆತಿದೆ.ಸಾಂಸ್ಕೃತಿಕ ರಂಗದಲ್ಲಿ ಮಾಡಿದ ಸಾಧನೆಗೆ ಈ ಗೌರವ ಲಭಿಸಿದ್ದು, ಪುರಸ್ಕಾರವು ಒಂದು ಲಕ್ಷ ಮೊತ್ತ,...

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...