Connect with us

bangalore

ಲಾರಿ-ಕ್ಯಾಂಟರ್‌ಗಳ ಮುಖಾಮುಖಿ ಢಿಕ್ಕಿ: ಓರ್ವ ಸಾವು-6 ಗಂಭೀರ

Published

on

ಬೆಂಗಳೂರು: ಎರಡು ಕ್ಯಾಂಟರ್ ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಹೊಡೆದಿದ್ದು ಓರ್ವ ಕಾರ್ಮಿಕ ಮೃತಪಟ್ಟ ಘಟನೆ ಹೊಸಕೋಟೆ ತಾಲೂಕಿನ ದೊಡ್ಡಹುಲ್ಲೂರು ಗ್ರಾಮದಲ್ಲಿ ನಡೆದಿದೆ.


ಒಂದು ಕ್ಯಾಂಟರ್‌ಗೆ ಮತ್ತೊಂದು ಕ್ಯಾಂಟರ್‌ಗೆ ಢಿಕ್ಕಿ ಹೊಡೆದಿದ್ದು ಅದೇ ಸಂದರ್ಭದಲ್ಲಿ ಅಚಾನಕ್ ಆಗಿ ಬಂದ ಲಾರಿ ಎರಡು ಕ್ಯಾಂಟರ್‌ಗೆ ಢಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಎರಡು ಕ್ಯಾಂಟರ್‌ಗಳು ನಜ್ಜುಗುಜ್ಜಾಗಿದ್ದು ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉಳಿದ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

bangalore

ಕೂದಲೆಳೆಯ ಅಂತರದಲ್ಲಿ ತಪ್ಪಿದ ವಿಮಾನ ದುರಂತ- ಸಾವಿನಿಂದ ಪಾರಾದ ನಟ ದ್ರುವ ಸರ್ಜಾ, ಚಿತ್ರತಂಡ

Published

on

ಬೆಂಗಳೂರು: ಸ್ಯಾಂಡಲ್ ವುಡ್ ನಟ ದ್ರುವ ಸರ್ಜಾ ಮತ್ತು ಅವರ ‘ಮಾರ್ಟಿನ್’ ಚಿತ್ರತಂಡ ಸಂಭವಿಸಬಹುದಾಗಿದ್ದ ಭೀಕರ ವಿಮಾನ ಅಪಘಾತ ದುರಂತದಿಂದ ಪಾರಾಗಿದೆ.

ವಿಮಾನ ದುರಂತದಿಂದ ಪಾರಾಗಿರುವ ಕುರಿತಂತೆ ನಟ ದ್ರುವ ಸರ್ಜಾ ಮತ್ತು ಅವರ ‘ಮಾರ್ಟಿನ್​’ ಸಿನಿಮಾ ತಂಡದವರು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ. ಈ ಘಟನೆ ಸೋಮವಾರ ನಡೆದಿದೆ. ದ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಚಿತ್ರ ತಂಡ ಅಂತಿಮ ಹಂತದ ಚಿತ್ರೀಕರಣದ ಯೋಜನೆಯಲ್ಲಿದ್ದು, ನಿನ್ನೆ ಸಂಜೆ ಚಿತ್ರ ತಂಡ ಹಾಡೊಂದರ ಚಿತ್ರೀಕರಣಕ್ಕಾಗಿ ದಿಲ್ಲಿ ವಿಮಾನ ನಿಲ್ದಾಣದಿಂದ ಶ್ರೀನಗರ ವಿಮಾನ ನಿಲ್ದಾಣಕ್ಕೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ವಿಮಾನ ಹಾರಾಟದಲ್ಲಿ ವ್ಯತ್ಯಯ ಕಂಡು ಬಂದಿದ್ದು, ಹವಾಮಾನ ವೈಪರೀತ್ಯದಿಂದಾಗಿ ರಾಡಾರ್ ಕಂಟ್ರೋಲ್ ತಪ್ಪಿದ್ದ ವಿಮಾನ ಕಾರ್ಗಿಲ್ ಪ್ರದೇಶಕ್ಕೆ ಹೋಗಿ ಹಠಾತ್ತನೆ ಸಾವಿರಾರು ಅಡಿ ಕೆಳಗಿಳಿದು ಪೈಲೆಟ್ ಕಂಟ್ರೋಲ್ ತಪ್ಪಿದೆ. ಆದರೆ ಪೈಲಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಪತನವಾಗುವ ಸಾಧ್ಯತೆ ಇದ್ದ ವಿಮಾನ ಕೂದಲೆಳೆ ಅಂತರದಲ್ಲಿ ಸುರಕ್ಷಿತವಾಗಿ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಆಗಿದೆ. ಇಂಡಿಗೋ ವಿಮಾನದಲ್ಲಿಯೇ ‘ಮಾರ್ಟಿನ್​’ ಚಿತ್ರತಂಡದವರು ಘಟನೆಯ ವಿಡಿಯೋ ಮಾಡಿದ್ದಾರೆ. ‘ಇವತ್ತಿನ ರೀತಿ ಇಷ್ಟು ಕೆಟ್ಟ ಅನುಭವ ಇಡೀ ಜೀವನದಲ್ಲೇ ಆಗಿರಲಿಲ್ಲ. ಈಗ ನಾವು ಸೇಫ್​ ಆಗಿದ್ದೇವೆ. ಜೈ ಆಂಜನೇಯ, ಪೈಲಟ್​ಗೆ ಧನ್ಯವಾದ’ ಎಂದು ಧ್ರುವ ಸರ್ಜಾ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

Continue Reading

bangalore

ತಂಗಿಯ ನಿಶ್ಚಿತಾರ್ಥಕ್ಕೆ ಬಂದಿಲ್ಲವೆಂದು ಪತ್ನಿಗೆ ಚೂರಿ ಇರಿದ ಪತಿ..!

Published

on

ಬೆಂಗಳೂರು: ತಂಗಿಯ ನಿಶ್ಚಿತಾರ್ಥಕ್ಕೆ ಬಂದಿಲ್ಲವೆಂದು ಪತಿಯು ತನ್ನ ಪತ್ನಿಗೆ ಚೂರಿ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಪತ್ನಿ ದಿವ್ಯಶ್ರೀ(26) ಚಾಕು ಇರಿತಕ್ಕೊಳಗಾದವಳು. ಪತಿ ಜಯಪ್ರಕಶ್ (32) ಚಾಕು ಇರಿದ ವ್ಯಕ್ತಿ. ಸುಂಕದಕಟ್ಟೆ ಬಳಿಯ ಸೊಲ್ಲಾಪುರದಮ್ಮ ದೇವಸ್ಥಾನ ಬಳಿ ಫೆ. 15ರ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಯಪ್ರಕಾಶ್ ಹಾಗೂ ದಿವ್ಯಶ್ರೀ ಪ್ರೀತಿಸಿ 2019ರಲ್ಲಿ ಮದುವೆಯಾಗಿದ್ದರು. ಇವರ ಮದುವೆಗೆ ಪೋಷಕರ ವಿರೋಧ ಇದ್ದ ಕಾರಣ ದಂಪತಿಗಳು ಬೆಂಗಳೂರಿನಲ್ಲಿ ನೆಲೆಯಾಗಿದ್ದರು. ಮನೆಯ ಖರ್ಚಿ ಎಲ್ಲಾ ಪತ್ನಿಯೇ ನೋಡಿಕೊಳ್ಳುತ್ತಿದ್ದದರು. ಇ ದಂಪತಿಗಳು ಮೊದಲು ಮೂಡಲಪಾಳ್ಯದಲ್ಲಿ ವಾಸವಿದ್ದರು. ಈ ಸಂದರ್ಭದಲ್ಲಿ ನಿನಗೆ ಅಕ್ರಮ ಸಂಬಂಧ ಇದೆ ಎಂದು ಪತ್ನಿಯ ಜೊತೆ ಪ್ರತಿದಿನ ಪತಿ ಗಲಾಟೆ ಮಾಡುತ್ತಿದ್ದನು. ಫೋನಿನಲ್ಲಿ ಯಾರದ್ದೊ ಜೊತೆಗೆ ಮಾತನಾಡುತ್ತೀಯಾ ಎಂದು ಹಲ್ಲೆ ಮಾಡುತ್ತಿದ್ದನು. ಈ ಗಲಾಟೆಯ ನಡುವೆಯೇ ದಂಪತಿ ಸುಂಕದಕಟ್ಟೆಗೆ ಶಿಫ್ಟ್ ಆಗಿದ್ದರು. ಇದೀಗ ತಂಗಿಯ ಎಂಗೆಜ್ಮೆಂಟ್‍ಗೆ ಬರ್ಲಿಲ್ಲ ಎಂದು ಜಯಪ್ರಕಾಶ್, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಆರೋಪಿ ಜಯಪ್ರಕಾಶ್ ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ.

Continue Reading

bangalore

‘ದಂಗಲ್’ ಖ್ಯಾತಿಯ ನಟಿ ಸುಹಾನಿ 19ನೇ ವಯಸ್ಸಿಗೆ ಹಠಾತ್ ನಿಧನ..!!

Published

on

ಅಮೀರ್ ಖಾನ್ ನಟನೆಯ ‘ದಂಗಲ್’ ಚಿತ್ರದಲ್ಲಿ ಆಮೀರ್‌ ಕಿರಿ ಮಗಳು ಬಬಿತಾ ಪಾತ್ರದಲ್ಲಿ ನಟಿಸಿದ್ದ 19ನೇ ವಯಸ್ಸಿನ ಸುಹಾನಿ ಭಟ್ನಾಗರ್ ನಿಧನ ಹೊಂದಿದರು.


ಸುಹಾನಿ ಅವರು ತಮ್ಮ ಕಾಲಿನ ಮೂಳೆ ಮುರಿತದ ಸಲುವಾಗಿ ಚಿಕಿತ್ಸೆ ಪಡೆದುಕೊಂಡು, ಅದಕ್ಕೆ ಸಂಬಂಧಿಸಿದ ಔಷಧಿ ಸೇವಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ಔಷಧಿಯ ಅಡ್ಡ ಪರಿಣಾಮದಿಂದಾಗಿ ಸಾವಿ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.

ಸಾವಿನ ಕುರಿತಂತೆ ನಾನಾ ಸುದ್ದಿಗಳು ಹರಡಿದ್ದು, ಸಾವಿನ ಬಗ್ಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಆಕೆ ದೆಹಲಿಯ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನುವ ಮಾಹಿತಿ ಇದೆ. ಕಿರಿಯ ವಯಸ್ಸಿನ ನಟಿಯ ಸಾವಿಗೆ ಬಾಲಿವುಡ್ ಕಂಬನಿ ಮಿಡಿದಿದೆ.

Continue Reading

LATEST NEWS

Trending