ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಇಂದು ಮಧ್ಯಾಹ್ನ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಮಧ್ಯಾಹ್ನ ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ ಮಾಣಿ ಕಡೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಇಂದು ಬೆಳಿಗ್ಗೆ ನಡೆದ ಬಸ್, ಲಾರಿ, ಕಾರು ನಡುವಿನ ಸರಣಿ ಅಪಘಾತದಲ್ಲಿ ಸುಮಾರು ಮೂರು ಗಂಟೆಗಳ ತನಕ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಮತ್ತೆ ಮಧ್ಯಾಹ್ನದ ವೇಳೆ ವಾಹನಗಳು ರಸ್ತೆಯಲ್ಲಿ ನಿಂತ ಪರಿಣಾಮ ಕೆಲ ಹೊತ್ತು ಸಂಚಾರದಲ್ಲಿ ವ್ಯತ್ಯಯವಾಗಿದೆ.