ಬಂಟ್ವಾಳ: ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತವಾದ ಘಟನೆ ಭಾನುವಾರ ನಸುಕಿನ ವೇಳೆಗೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯ ಪೂರ್ಲಿಪ್ಪಾಡಿಯಲ್ಲಿ ನಡೆದಿದೆ.
ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಬೈಕ್ ನಜ್ಜುಗುಜ್ಜಾಗಿದೆ. ಕಲ್ಲಡ್ಕದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಅಲ್ಲಲ್ಲಿ ರಸ್ತೆಯಂಚಿನಲ್ಲಿ ಅಪಾಯ ಎದುರಿಸುವ ಸಂದರ್ಭ ಸೃಷ್ಠಿಯಾಗಿದೆ.
ಮುಂಜಾಣೆ ವೇಳೆ ಪ್ರಖರ ಲೈಟ್‌ನೊಂದಿಗೆ ವಾಹನಗಳು ಸಾಗುವ ವೇಳೆ ದ್ವಿಚಕ್ರ ವಾಹನ ಸವಾರರೂ ಭಯಭೀತರಾಗುವಂತಾಗಿದ್ದು ಈ ಭಾಗದಲ್ಲಿ ಎಚ್ಚರಿಕೆಯಿಂದ ವಾಹನ ಸಂಚರಿಸಬೇಕಾಗುತ್ತದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.