Monday, January 24, 2022

ಲಾರಿ ಕಾರು ಭೀಕರ ಅಪಘಾತ: ಪುತ್ತೂರು-ವಿಟ್ಲ ಮೂಲದ ಇಬ್ಬರು ಬಲಿ

ಪುತ್ತೂರು: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಪುತ್ತೂರು ಹಾಗೂ ವಿಟ್ಲ ಮೂಲದ ನಿವಾಸಿಗಳಿಬ್ಬರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನರಾಯಪಟ್ಟಣ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

 

ಮೃತರನ್ನು ಬೆಂಗಳೂರಿನ ಇನ್ಫೋಸಿಸ್‌ನಲ್ಲಿ ಉದ್ಯೋಗಿಯಾಗಿರುವ ಈಶ್ವರಮಂಗಲ ನಿವಾಸಿ ದೇವಿಪ್ರಸಾದ್ ಶೆಟ್ಟಿ ಹಾಗೂ ವಿಟ್ಲದ ಕುಡ್ತಮುಗೇರು ನಿವಾಸಿ ಸುದರ್ಶನ್ ಎಂದು ಗುರುತಿಸಲಾಗಿದೆ.

ಇವರು ಬೆಂಗಳೂರಿನಿಂದ ಊರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

Hot Topics

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...

ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1ಕೆ.ಜಿ, 300ಗ್ರಾಂ ಚಿನ್ನ ವಶಕ್ಕೆ

ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ...

‘ಪುಷ್ಪ’ ಸಿನಿಮಾ ನೋಡಿ ಅಪ್ರಾಪ್ತರಿಂದ ಯುವಕನ ಬರ್ಬರ ಹತ್ಯೆ- ಕೃತ್ಯದ ವೀಡಿಯೋ ಚಿತ್ರೀಕರಣ

ನವದೆಹಲಿ: ಟಾಲಿವುಡ್‌ನ ಅಲ್ಲು ಅರ್ಜುನ್‌ ನಟನೆಯ ಸೂಪರ್‌ ಹಿಟ್‌ 'ಪುಷ್ಪ' ಸಿನಿಮಾ ನೋಡಿ ಅದರಿಂದ ಪ್ರಭಾವಿತರಾಗಿ ಯುವಕನನ್ನು ಮೂವರು ಆರೋಪಿಗಳು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.ಕೊಲೆಗೀಡಾದ ಯುವಕ...