Thursday, August 11, 2022

ಸಿಮೆಂಟ್‌ ಸಾಗಾಟದ ಲಾರಿ-ಇನೋವಾ ಕಾರು ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಾಯ

ನೆಲ್ಯಾಡಿ: ಸಿಮೆಂಟ್‌ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಿಂದಾಗಿ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ

LEAVE A REPLY

Please enter your comment!
Please enter your name here

Hot Topics

‘ಪ್ರವೀಣ್‌’ ಬೇಟೆಗೆ 6 ವೆಹಿಕಲ್‌ 10 ಹತ್ಯೆಕೋರರು..!: ಪಿನ್‌ ಟು ಪಿನ್‌ ಡಿಟೇಲ್ಸ್‌

ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ನಡೆದ 16 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಒಟ್ಟು...

ಪ್ರವೀಣ್ ಹತ್ಯೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳ ಬಂಧನ-ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಗೌಪ್ಯ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಶಿಯಾಬ್, ಬಶೀರ್, ರಿಯಾಝ್ ಎಂದು...

ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 3 ಯೋಧರು ಹುತಾತ್ಮ -ಇಬ್ಬರು ಉಗ್ರರು ಉಡೀಸ್

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.ಘಟನೆಯಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಸ್ಥಿತಿ...