Saturday, August 20, 2022

ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಲಾರಿ; ಸ್ಥಳದಲ್ಲೇ ಮೃತಪಟ್ಟ ಸೈಕಲ್ ಸವಾರ ..!

ಮಂಗಳೂರು: ಬೈಕಂಪಾಡಿಯಲ್ಲಿ ಲಾರಿಯೊಂದು ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮಧು ಕೆ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.ಮಧು ಅವರು ಹೈ ರೇಂಜ್ ಸೆಕ್ಯುರಿಟಿ ಸರ್ವೀಸಸ್‌ನ ಉದ್ಯೋಗಿಯಾಗಿದ್ದು, ಕೆಲಸ ಮುಗಿಸಿಕೊಂಡು ಮನೆ ಕಡೆಗೆ ಸೈಕಲ್‌ನಲ್ಲಿ ಹೋಗುತ್ತಿದ್ದಾಗ ಲಾರಿಯೊಂದು ಡಿಕ್ಕಿ ಹೊಡೆದಿದೆ.

ಅತೀವೇಗ ಹಾಗೂ ಅಜಾಗರೂಕತೆ ಚಾಲನೆಯಿಂದ ಬಂದ ಪಣಂಬೂರು ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದ ಮೆಷಿನ್ ಹೊತ್ತೊಯ್ಯತ್ತಿದ್ದ  ಲಾರಿ ಚಾಲಕ  ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಿರುವುದಾಗಿ  ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.ಲಾರಿ ಚಾಲಕನನ್ನು ಸ್ಥಳೀಯರೇ ಹಿಡಿದು ಥಳಿಸಿದ್ದಾರೆ. ಮಂಗಳೂರು ಉತ್ತರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಈ ಪುಟ್ಟ ಹುಡುಗನಿಗಿರುವಷ್ಟು ಕಾಳಜಿಯೂ ಜನಪ್ರತಿನಿಧಿ, ಅಧಿಕಾರಿಗಳಿಗೆ ಇಲ್ವಾಲ್ಲಾ ಛೇ..!

ಮಂಗಳೂರು: ಸ್ಮಾರ್ಟ್‌ ಸಿಟಿ ಹೆಸರಿನಲ್ಲಿ ಕೋಟಿ ಗಟ್ಟಲೆ ಹಣವನ್ನು ತಂದು ಮಂಗಳೂರು ನಗರವನ್ನು ಸುಂದರೀಕರಣಗೊಳಿಸಲಾಗುತ್ತಿದೆ. ಆದರೆ ಹೊಂಡಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸುವ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ.ಕಾರಿನಲ್ಲಿ ಸಂಚಾರ ಮಾಡುವವರಿಗೆ ಬೈಕಿನ ಸವಾರರ ಕಷ್ಟ...

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳು NIA ವಶಕ್ಕೆ

ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ...

ಇಂದು & ನಾಳೆ ಮಂಗಳೂರಿನಲ್ಲಿ ಮೂಡುಬಿದ್ರೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10...