ಶಿವಮೊಗ್ಗ: ಸಾಗರ ಪಟ್ಟಣದ ಸಣ್ಣಮನೆ ಸೇತುವೆ ಬಳಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಜಲ್ಲಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿಕಾರಿಪುರ ತಾಲೂಕಿನ ಚಿಕ್ಕಯಲವಟ್ಟಿ ಗ್ರಾಮದ ಪ್ರತಿಮಾ (18) ಮೃತ ವಿದ್ಯಾರ್ಥಿನಿ.
ಪ್ರತಿಮಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಶಿಕಾರಿಪುರದ ಚಿಕ್ಕಲವತ್ತಿಯ ಅಂಕಿತಾ, ಸೊರಬದ ಪುಕ್ಕನಹಳ್ಳಿಯ ಐಶ್ವರ್ಯ ಗಂಭೀರವಾಗಿ ಗಾಯಗೊಂಡು ಸಾಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂವರು ವಿದ್ಯಾರ್ಥಿನಿಯರು ಸಾಗರದಲ್ಲಿನ ಹಾಸ್ಟೆಲ್ನಿಂದ ಸರ್ಕಾರಿ ಕಾಲೇಜಿಗೆ ನಡೆದು ಹೋಗುತ್ತಿದ್ರು. ಈ ವೇಳೆ ಹಿಂದೆನಿಂದ ಜಲ್ಲಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದೆ.
ಇದರಲ್ಲಿ ಪ್ರತಿಮಾ ಸ್ಥಿತಿ ಚಿಂತಾಜನಕವಾಗಿತ್ತು. ಈ ವೇಳೆ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿಯಲ್ಲೇ ಮೃತಪಟ್ಟಿದ್ದಾರೆ.
ಘಟನೆಗೆ ಚಾಲಕನ ಅಜಾಗರೂಕತೆ ಹಾಗೂ ಅತೀ ವೇಗವೇ ಕಾರಣ ಎನ್ನಲಾಗಿದೆ. ಈ ಸಂಬಂಧ ಸಾಗರ ನಗರದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.