Friday, August 19, 2022

ಮಂಗಳೂರು: ವಿದ್ಯುತ್‌ ಕಂಬಕ್ಕೆ ಕಾಂಕ್ರೀಟ್‌ ಮಿಕ್ಸರ್‌ ಲಾರಿ ಢಿಕ್ಕಿ- ಮುರಿದು ಬಿದ್ದ ಕಂಬ

ಮಂಗಳೂರು: ಕಾಂಕ್ರೀಟ್‌ ಮಿಕ್ಸರ್‌ನ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬ ತುಂಡಾಗಿ ಲಾರಿಗೆ ವಾಲಿದ ಘಟನೆ ಮಂಗಳೂರು ಮಹಾನಗರ ಪಾಲಿಕೆಯ 24ನೇ ದೇರೆಬೈಲ್‌ ದಕ್ಷಿಣ ವಾರ್ಡ್‌ನ ದಡ್ಡಲಕಾಡ್‌ನ 3ನೇ ಅಡ್ಡ ರಸ್ತೆಯ ಓಣಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಬಹುಮಹಡಿ ಕಟ್ಟಡ ಕಾಂಕ್ರೀಟೀಕರಣಕ್ಕೆ ಹೋಗುತ್ತಿದ್ದ ರೆಡಿಮಿಕ್ಸ್‌ರ್‌ ವಾಹನ ದಡ್ಡಲಕಾಡ್‌ನ 3ನೇ ಅಡ್ಡ ರಸ್ತೆಯ ಕಿರಿದಾದ ಓಣಿಯಲ್ಲಿ ಪ್ರವೇಶಿಸಿದಾಗ ರಸ್ತೆ ಬದಿ ಇದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಂಬ ಮುರಿದು ಲಾರಿ ಮೇಲೆ ವಾಲಿದೆ.

ಅದೃಷ್ಟವಶಾತ್‌ ತಂತಿಯಲ್ಲಿ ವಿದ್ಯುತ್‌ ಇದ್ದರೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ವಿದ್ಯುತ್‌ ನಿಲುಗಡೆಗೊಳಿಸಿ ಕಂಬ ತೆರವುಗೊಳಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....

ಇಂದು & ನಾಳೆ ಮಂಗಳೂರಿನಲ್ಲಿ ಮೂಡುಬಿದ್ರೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10...

ಮಂಗಳೂರು: ಆ.22ರಂದು ನಾಡದೋಣಿ ಎಂಜಿನ್ ತಪಾಸಣೆ

ಮಂಗಳೂರು: 2022-23ನೇ ಸಾಲಿಗೆ ಮೀನುಗಾರಿಕೆ ಉದ್ದೇಶಕ್ಕಾಗಿ ಬಳಸುವ ಸೀಮೆಎಣ್ಣೆಯ ಪರವಾನಿಗೆಯನ್ನು ನವೀಕರಿಸುವ ಹಿನ್ನಲೆಯಲ್ಲಿ ನಾಡದೋಣಿ ಎಂಜಿನ್ ತಪಾಸಣೆ ಆ.22ರ ಸೋಮವಾರ ನಡೆಯಲಿದೆ.ದೋಣಿ ಮಾಲಕರು ದೋಣಿಯ ನೋಂದಣಿ ಪತ್ರದ ಪ್ರತಿ, ಆಧಾರ್ ಪ್ರತಿ ಮತ್ತು...