Friday, July 1, 2022

ಬಂಟ್ವಾಳ: ಸ್ಕೂಟರ್‌-ಲಾರಿ ಢಿಕ್ಕಿ, ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ: ಸ್ಕೂಟರ್‌ಗೆ ಲಾರಿ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.


ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಾಡ ಅವರ ಪುತ್ರ ಗಣೇಶ್ ಬಂಗೇರ (54) ಮೃತಪಟ್ಟ ವ್ಯಕ್ತಿ. ಉಪ್ಪಿನಂಗಡಿ ಕಡೆಗೆ ಕೆಲಸದ ನಿಮಿತ್ತ ದ್ವಿಚಕ್ರ ವಾಹನದ ಮೂಲಕ ಸಂಚರಿಸುವ ವೇಳೆ ಬುಡೋಳಿ ಎಂಬಲ್ಲಿ ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಸ್ಕೂಟರ್‌ ಲಾರಿಯ ಅಡಿಯಲ್ಲಿ ಸಿಲುಕಿ ಕೊಂಡಿತ್ತು. ಸ್ಕೂಟರ್ ಸವಾರ ಲಾರಿಯ ಅಡಿಯಲ್ಲಿ ಸಿಲುಕಿಕೊಂಡಿದ್ದು , ಮಾಣಿ ಸೋಶಿಯಲ್ ಇಕ್ವಾ ಫೆಡರೇಶನ್ ಇದರ ಕಾರ್ಯಕರ್ತರಾದ ಶರೀಫ್, ಸಂಶೀರ್ ಬುಡೋಳಿ ಹಾಗೂ ಅಟೋ ಚಾಲಕ ಇಕ್ಬಾಲ್ ಅವರು ಕೂಡಲೇ ಸ್ಥಳ ಕ್ಕೆ ಧಾವಿಸಿ ಇಕ್ವಾ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆ ಗೆ ಕರೆತರಲಾಯಿತಾದರೂ ಫಲ ನೀಡಿಲ್ಲ. ಅದಾಗಲೇ ಅವರು ಮೃತಪಟ್ಟ ಬಗ್ಗೆ ವೈದ್ಯ ರು ದೃಢಪಡಿಸಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಹೆಚ್‌ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ: ನಟಿ ಪವಿತ್ರ ಲೋಕೇಶ್‌

ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್‌ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್‌ ಹೇಳಿಕೆ ನೀಡಿದ್ದಾರೆ.ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...

ಬಂಟ್ವಾಳ: ರಸ್ತೆ ಬದಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ಬದಿಯಲ್ಲಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದಲ್ಲದೆ ಅರ್ಧ ತಾಸಿಗಿಂತಲೂ ಹೆಚ್ಚು ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ನಾವೂರ,...

ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರಕಾರ: ಪುತ್ತೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಪುತ್ತೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಮೈತ್ರಿ ಸರಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ...