ಆಂಧ್ರಪ್ರದೇಶ:ಲಾರಿ ಮತ್ತು ಟೆಂಪೊ ನಡುವೆ ಡಿಕ್ಕಿಯಾಗಿ 8 ಜನರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 6 ಜನರಿಗೆ ಗಾಯಗಳಾಗಿರುವ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆ ದಾಮರದುರ್ಗಂ ಬಳಿ ಇಂದು ಮುಂಜಾನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಪೊಲೀಸರ ಪ್ರಕಾರ ತಮಿಳುನಾಡಿನ ಜನರ ಗುಂಪೊಂದು ಶ್ರೀಶೈಲಂ ಮತ್ತು ಸುತ್ತಮುತ್ತಲಿನ ಪವಿತ್ರ ಧಾರ್ಮಿಕ ಸ್ಥಳಗಳಿಗೆ ಪ್ರವಾಸ ಕೈಗೊಂಡಿದ್ದರು.
ಇಂದು ಮುಂಜಾನೆ 2.30ಕ್ಕೆ ದಾಮರದುರ್ಗಂ ಬಳಿ ಅಪಘಾತ ಸಂಭವಿಸಿದೆ. ಗಾಯಾಳುಗಳಿಗೆ ನೆಲ್ಲೂರು ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.