Connect with us

DAKSHINA KANNADA

ಮೂಡಬಿದಿರೆ: ಲವ್ ಜಿಹಾದ್ ಯತ್ನ; ಬಜರಂಗದಳದ ಮಿಂಚಿನ ಕಾರ್ಯಾಚರಣೆ …!!

Published

on

ಮೂಡುಬಿದಿರೆ : ಅನ್ಯಕೋಮಿನ ಯುವಕನ ಜೊತೆ ಜೈನ ವಿದ್ಯಾರ್ಥಿನಿಯ ಸುತ್ತಾಟ, ಚೆಲ್ಲಾಟಗಳನ್ನು ಮೂಡುಬಿದಿರೆ ಬಜರಂಗದಳ ಬೆಳಕಿಗೆ ಬಂದಿದೆ, ಬಳಿಕ, ಲವ್ ಜಿಹಾದ್‌ಗೆ ಜೈನ ಯುವತಿಯರನ್ನು ಟಾರ್ಗೆಟ್ ಮಾಡುತ್ತಿರುವ ಗಂಭೀರ ವಿಚಾರ ತಿಳಿದು ಬಂದಿದೆ.

ಮೊದಲಿಗೆ ಯುವತಿಯನ್ನು ಬಲೆಗೆ ಬೀಳಿಸಲು ಯುವಕ ಸ್ಕೇಚ್ ಹಾಕುತ್ತಿದ್ದವನ ಹೆಸರು ಸೀನಾನ್ ಎಂದು ತಿಳಿದುಬಂದಿದೆ. ಯುವತಿಯನ್ನು ತೋಡಾರಿನಲ್ಲಿರುವ ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ, ಮೂಡುಬಿದಿರೆ ನಿವಾಸಿ ಎಂದು ಗುರುತಿಸಲಾಗಿದೆ.

ಮೂಡುಬಿದಿರೆಯ ವಿದ್ಯಾಗಿರಿಯ ಕೆಫೆಯೊಂದರಲ್ಲಿ ಜೈನ ವಿದ್ಯಾರ್ಥಿನಿ ಜೊತೆ ಅನ್ಯಕೋಮಿನ ಯುವಕ ಚೆಲ್ಲಾಟವಾಡುತ್ತಿರುವ ವೇಳೆ ಬಜರಂಗದಳದ ಮಿಂಚಿನ ಕಾರ್ಯಾಚರಣೆ ನಡೆಸಿದೆ. ಈ ಸಮಯ ಸೀನಾನ್ ಸ್ಥಳದಿಂದ ಪರಾರಿಯಾಗಿದ್ದಾನೆ. ಇಬ್ಬರು ಕೆಫೆಯಲ್ಲಿ ಗ್ಲಾಸ್ ಅಳವಡಿಸಲಾಗಿರುವ ಸ್ಥಳದಲ್ಲಿ ಕೂತು ಮೈ-ಕೈಮುಟ್ಟಿಕೊಂಡು, ಚಕ್ಕಂದವಾಡುತ್ತಿದ್ದರು. ಸದ್ಯ ಇದೂ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದ್ದು, ಸಾರ್ವಜನಿಕವಾಗಿ ಆಕ್ರೋಶ ಕೇಳಿಬಂದಿದೆ.

ಈ ಸೀನಾನ್ ಡ್ರಗ್ ಪೆಡ್ಲರ್ ಮತ್ತು ಇತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾನೆ, ಮುಂದಿನ ದಿನಗಳಲ್ಲಿ ಮೂಡುಬಿದಿರೆ ಭಾಗದ ಯುವತಿಯರು ಸ್ವಲ್ಪ ಜಾಗರೂಕರಾಗಿರಬೇಕು. ತಪ್ಪಿದಲ್ಲಿ ಲವ್ ಜಿಹಾದಿಗೆ ಬಲಿಯಾಗಿ ತಮ್ಮ ಜೀವನವನ್ನು ಸರ್ವನಾಶ ಮಾಡಿಕೊಳ್ಳಬಾರದು ಎಂದು ಬಜರಂಗದಳ ಪ್ರಮುಖರು ಕರೆ ನೀಡಿರುತ್ತಾರೆ.

ಈಗಾಗಲೇ ಹಿಂದೂ ಸಮಾಜದ ಯುವತಿಯರು ಅನ್ಯಕೋಮಿನ ಯುವಕರ ನಾನಾ ವಿಧದ ಆಮಿಷಗಳಿಗೆ ಒಳಗಾಗಿ ಲವ್ ಜಿಹಾದ್ ಬಲೆಗೆ ಬಿದ್ದು, ಜೀವನ ಹಾಳು ಮಾಡಿಕೊಂಡಿರುವುದು ನಾವು ಪ್ರತಿದಿನ ಬೇರೆ ಬೇರೆ ಊರುಗಳಲ್ಲಿ ಕೇಳುತ್ತಿರುವ ವಿಚಾರವಾದರೂ ಇನ್ನೂ ಇತಂಹ ಜಿಗಾದ್ ಗೆ ಯುವತಿಯರು ಬಲಿಯಾಗುತ್ತಿರುವುದು ವಿಷಾದನೀಯವಾಗಿದೆ.

DAKSHINA KANNADA

ಮಂಗಳೂರು: ನಕಲಿ ಇ-ಚಲನ್‌ ಕಳುಹಿಸಿ ವ್ಯಕ್ತಿಗೆ 1.31 ಲಕ್ಷ ರೂಪಾಯಿ ವಂಚನೆ

Published

on

ಮಂಗಳೂರು:  ಸಂಚಾರ ನಿಯಮ ಉಲ್ಲಂಘನೆಯ ಬಗ್ಗೆ ನಕಲಿ ಇ-ಚಲನ್ ಕಳುಹಿಸಿ ವ್ಯಕ್ತಿಯೊಬ್ಬರ ಖಾತೆಯಿಂದ 1.31 ಲಕ್ಷ ರೂಪಾಯಿ ಹಣವನ್ನು ವರ್ಗಾಯಿಸಿಕೊಂಡ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ :

ನವೆಂಬರ್ 24ರಂದು ತನಗೆ ವಾಟ್ಸ್‌ಆ್ಯಪ್ ನಂಬರ್‌ವೊಂದರಿಂದ ಮೆಸೇಜ್ ಬಂದಿದ್ದು, ಅದನ್ನು ಡೌನ್‌ಲೋಡ್ ಮಾಡಿದ ಬಳಿಕ ಮೊಬೈಲ್‌ಗೆ 16 ಒಟಿಪಿಗಳು ಬಂದಿದೆ. ಬಳಿಕ ಫ್ಲಿಪ್‌ಕಾರ್ಟ್ ಹಾಗೂ ಅಮೆಜಾನ್‌ನಲ್ಲಿ ಕ್ರೆಡಿಟ್ ಕಾರ್ಡ್ ಮೂಲಕ 30,400 ರೂ., ಡೆಬಿಟ್ ಕಾರ್ಡ್ ಮೂಲಕ 16,700 ರೂ. ಮತ್ತು ಪೇ ಲೇಟರ್‌ನಲ್ಲಿ 71,496 ರೂ. ಹಣ ವರ್ಗಾವಣೆಯಾದ ಬಗ್ಗೆ ಮೊಬೈಲ್‌ಗೆ ಮೆಸೇಜ್ ಬಂದಿತ್ತು. ತಕ್ಷಣ ಮೊಬೈಲ್ ಮೂಲಕ ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್‌ನ್ನು ದೂರುದಾರರು ಬ್ಲಾಕ್ ಮಾಡಿದ್ದಾರೆ.

ಯಾರೋ ಅಪರಿಚಿತರು ಎಪಿಕೆ ಫೈಲ್ ಮೂಲಕ ತನ್ನ ಡೆಬಿಟ್, ಕ್ರೆಡಿಟ್ ಕಾರ್ಡ್‌ನ ಮಾಹಿತಿ ಪಡೆದು ಫ್ಲಿಪ್‌ಕಾರ್ಟ್‌ನಲ್ಲಿ 39,398 ರೂ. ಮೌಲ್ಯದ ವನ್‌ಪ್ಲಸ್ ಮೊಬೈಲ್, 32,398 ರೂ. ಮೌಲ್ಯದ ಮೊಟೊರೊಲಾ ಎಜ್ ಮೊಬೈಲ್, 12,800 ರೂ. ಮೌಲ್ಯದ ಏರ್ ಪೋಡ್, 14,700 ರೂ., 29,400 ರೂ., 3,000 ರೂ. ಮೌಲ್ಯದ ಫ್ಲಿಪ್‌ಕಾರ್ಟ್ ವೋಚರ್‌ಗಳನ್ನು ಹೊಸದಿಲ್ಲಿಯ ವಿಳಾಸದಲ್ಲಿರುವ ವ್ಯಕ್ತಿಗೆ ಆರ್ಡರ್ ಮಾಡಿ 1,31,396 ರೂ. ವಂಚಿಸಿರುವುದಾಗಿ ಹಣ ಕಳೆದುಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.

 

Continue Reading

DAKSHINA KANNADA

ಮಂಗಳೂರು : ಮತ್ತೆ ಡ್ರಗ್ ಸೀಜ್; ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಬಂಧನ

Published

on

ಮಂಗಳೂರು: ನಗರವನ್ನು ಡ್ರಗ್ ಮುಕ್ತ ನಗರ ಮಾಡುವ ನಿಟ್ಟಿನಲ್ಲಿ ಪೊಲೀಸ್ ಕಾರ್ಯಾಚರಣೆ ಆರಂಭವಾಗಿ ವರ್ಷಗಳ ಕಳೆದಿದೆ. ಮಾದಕ ವ್ಯಸನ ಹಾಗೂ ಮಾರಾಟದ ವಿಚಾರವಾಗಿ ಹಲವಾರು ಜನಜಾಗೃತಿ ಕಾರ್ಯಕ್ರಮಗಳನ್ನು ಇಲಾಖೆಯಿಂದ ಮಾಡಲಾಗಿದೆ. ಆದ್ರೆ ಈ ಡ್ರಗ್ ಜಾಲವನ್ನು ಬುಡ ಸಮೇತ ಕಿತ್ತು ಹಾಕಲು ಪೊಲೀಸ್ ಇಲಾಖೆಯಿಂದ ಸಾದ್ಯವಾಗುತ್ತಿಲ್ಲ.

ಮಂಗಳೂರಿನಲ್ಲಿ ಮಾದಕ ವಸ್ತುವಿಗೆ ಡಿಮ್ಯಾಂಡ್ ಇರುವ ಹಿನ್ನೆಲೆಯಲ್ಲಿ ಡ್ರಗ್ ಮಾಫಿಯಾ ದಿನಕ್ಕೊಂದು ಹೊಸ ತಂತ್ರದ ಮೂಲಕ ಡ್ರಗ್ಸ್‌ ಮಂಗಳೂರಿಗೆ ತಲುಪಿಸುತ್ತಿದೆ. ಹಾಗಂತ ಪೊಲೀಸರು ಇಂತಹ ಆಸಾಮಿಗಳನ್ನು ಹಿಡಿದು ಜೈಲಿಗಟ್ಟುವುದು ಕೂಡಾ ನಿಂತಿಲ್ಲ. ಇದೀಗ ಪಜೀರು ಗ್ರಾಮದ ಕಂಬಳ ಪದವು ಎಂಬಲ್ಲಿ ಮತ್ತೆ ಮೂವರು ಡ್ರಗ್ ಸೆಲ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ಒಂದುವರೆ ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ತಲಪಾಡಿಯ ಗೌತಮ್, ಕುಂಪಲದ ಕಾರ್ತಿಕ್ ಹಾಗೂ ತೊಕ್ಕೊಟ್ಟಿನ ನಿಖಿಲ್ ಎಂದು ಗುರುತಿಸಲಾಗಿದೆ.

Continue Reading

DAKSHINA KANNADA

ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಮಾರಾಟವಾಗಿಲ್ಲ; ಅಧೀಕ್ಷಕರಿಂದ ಸ್ಪಷ್ಟನೆ

Published

on

ಮಂಗಳೂರು: ಮಂಗಳೂರಿನ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಮಗು ಮಾರಾಟವಾಗಿದೆ ಎಂದು ಭವ್ಯಾ ಎಂಬಾಕೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿರುವುದು. ಆಕೆಯ ಈ ಆರೋಪವು ಸಂಪೂರ್ಣ ನಿರಾಧಾರವಾಗಿದೆ ಎಂದು ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಸ್ಪಷ್ಟಪಡಿಸಿದ್ದಾರೆ.

ಆಗಸ್ಟ್‌ 18ರಂದು ಬೆಳಗ್ಗೆ 9.58ಕ್ಕೆ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಭವ್ಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಮಗುವಿಗೆ ಒಂದು ಕಣ್ಣು ಗುಡ್ಡೆ ಇಲ್ಲದಿರುವುದನ್ನು ತಜ್ಞರು ಆಕೆಗೆ ತಿಳಿಸಿದ ಸಂದರ್ಭ ಆ ಶಿಶು ತನ್ನದಲ್ಲವೆಂದು ಆಕೆ ನಿರಾಕರಿಸಿದ್ದರು. ತನ್ನ ಮಗುವನ್ನು ಆಸ್ಪತ್ರೆಯ ಸಿಬ್ಬಂದಿ ಅದಲು ಬದಲು ಮಾಡಿದ್ದಾರೆ ಎಂದು ಸುಳ್ಳು ಆರೋಪವನ್ನು ಹೊರಿಸಿದ್ದರು. ಈ ವಿಚಾರದಲ್ಲಿ ಪೊಲೀಸ್ ತನಿಖೆ ನಡೆದು ನ್ಯಾಯಾಧೀಶರ ಉಪಸ್ಥಿತಿಯಲ್ಲಿ ಡಿಎನ್‌ಎ ಪರೀಕ್ಷೆ ಮಾಡುವ ಸಲುವಾಗಿ ಪ್ರಕ್ರಿಯೆಯನ್ನು ನಡೆಸಲಾಗಿದೆ.

ಡಿಎನ್‌ಎ ಪರೀಕ್ಷೆಯ ವರದಿಯನ್ನು ನೇರವಾಗಿ ತನಿಖಾಧಿಕಾರಿಗಳ ಮೂಲಕ ನ್ಯಾಯಾಲಯಕ್ಕೆ ಸಂಬಂಧಿತರು ನೀಡಿದ್ದರು. ಈ ಮಧ್ಯೆ ಭವ್ಯಾ ಅವರ ಮಗು ದ.ಕ.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸುಪರ್ದಿಯಲ್ಲಿದೆ. ಇತ್ತೀಚಿನ ಎರಡು ದಿನಗಳಲ್ಲಿ ಭವ್ಯಾ ತನ್ನ ಶಿಶುವನ್ನು ಸರಕಾರಿ ಲೇಡಿಗೋಶನ್ ಆಸ್ಪತ್ರೆಯ ಸಿಬ್ಬಂದಿ ಮಾರಾಟ ಮಾಡಿರುತ್ತಾರೆ ಎಂದು ಮಾನಹಾನಿಕರ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿತ್ತರಿಸುತ್ತಾ, ಸಮಾಜದಲ್ಲಿ ಗೊಂದಲದ ವಾತಾವರಣವನ್ನು ಸೃಷ್ಟಿ ಮಾಡುತ್ತಿದ್ದಾರೆ. ಅಲ್ಲದೆ ಹೆರಿಗೆ ಮತ್ತು ಸ್ತ್ರೀರೋಗ ಸಂಬಂಧ ವಿಚಾರದಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸುತ್ತಾ ಬಂದಿರುವ ಸರಕಾರಿ ಸ್ವಾಮ್ಯದ ಸರಕಾರಿ ಲೇಡಿಗೋಶನ್ ಆಸ್ಪತ್ರೆಗೆ ಕಳಂಕವನ್ನು ತರುವ ವಿಚಾರಗಳು ಖೇದಕರ. ಈ ಪ್ರಕರಣವು ನ್ಯಾಯಾಲಯದ ಪರಾಮರ್ಶೆಯ ಹಂತದಲ್ಲಿರುವ ಕಾರಣ ನ್ಯಾಯಾಲಯದ ತೀರ್ಪನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Continue Reading

LATEST NEWS

Trending

Exit mobile version