LATEST NEWS
ಏರ್ ಕೂಲರ್ ನೊಳಗೆ ಅವಿತು ಸಿಕ್ಕಿಬಿದ್ದ ಪ್ರಿಯಕರ -ವಿಡಿಯೋ ವೈರಲ್ ..!
ಜೈಪುರ: ರಾತ್ರಿ ವೇಳೆ ಪ್ರಿಯತಮೆಯ ಭೇಟಿ ಮಾಡಲು ಮನೆಗೆ ಬಂದಿದ್ದ ಪ್ರಿಯಕರ ಆಕೆಯ ಮನೆಯವರ ಕೈಗೆ ಸಿಕ್ಕಿ ಬಿದ್ದಿದ್ದು, ಆತ ಏರ್ ಕೂಲರ್ ನೊಳಗೆ ಅವಿತು ಕುಳಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಾ ಇದೆ.
ತನ್ನ ಪ್ರೇಯಸಿಯ ಭೇಟಿ ಮಾಡಲು ಎಂದು ಯುವಕನೋರ್ವ ರಾತ್ರಿ ಮನೆಗೆ ಬಂದಿದ್ದ. ಈ ವೇಳೆ ಅವರಿಬ್ಬರು ರಹಸ್ಯವಾಗಿ ಮಾತನಾಡುತ್ತಿದ್ದರು. ಆದರೆ ಇವರ ಮಾತು ಆ ಯುವತಿಯ ಮನೆಯವರಿಗೆ ಕೇಳಿದ ಕಾರಣ ಅವರು ಹುಡುಕಾಟ ನಡೆಸಿದರು. ಆ ವೇಳೆ ಆತ ಮನೆಯಲ್ಲಿದ್ದ ಏರ್ ಕೂಲರ್ ನೊಳಗೆ ಅವಿತು ಕುಳಿತದ್ದು ಕಂಡು ಬಂದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಾ ಇದೆ.
Kalesh b/w a Guy and girl family over he came to meet her at night and her family caught him inside cooler in Rajasthan pic.twitter.com/bepkikh2Di
— Ghar Ke Kalesh (@gharkekalesh) November 4, 2023
LATEST NEWS
ಮೂರು ವರ್ಷದ ಮಗುವಿನ ಎದೆಗೆ ಕಾಲಿಟ್ಟು ಕೊಂ*ದ ಪಾಪಿ..! ಬೆಳಗಾವಿಯಲ್ಲೊಂದು ಅಮಾನುಷ ಘಟನೆ
ಬೆಳಗಾವಿ: ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹ*ತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿಯಲ್ಲಿ ನಡೆದಿದೆ.
ಬುರ್ಲಟ್ಟಿ ಗ್ರಾಮದ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಮೂರು ವರ್ಷದ ಮೃತಪಟ್ಟಿರುವ ಮಗು. ಜೋತಿಭಾ ತುಕಾರಾಮ ಬಾಬಾಬರ ಎಂಬವನು ಮಗುವನ್ನು ಕೊಂ*ದವರು ಎಂದು ತಿಳಿದು ಬಂದಿದೆ. ಮಗುವಿನ ತಂದೆ ಕಾಡಪ್ಪ ಕಾಳಪಾಟೀಲಗೆ ಕಳೆದ ವರ್ಷ ಜೋತಿಭಾ ಬಾಬಾಬರ ಐವತ್ತು ಸಾವಿರ ಸಾಲ ನೀಡಿದ್ದ ಎನ್ನಲಾಗಿದೆ. ಈ ಹಣವನ್ನು ವಾಪಸ್ ನೀಡುವಂತೆ ಕಾಳಪ್ಪನಿಗೆ ಕೇಳಿದಾಗ ಶನಿವಾರ ಬೆಳಗ್ಗೆ ಜೋತಿಭಾ ಕಾಳಪ್ಪನ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದರಿಂದಾಗಿ ಇಬ್ಬರ ನಡುವೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ ಎಂದು ಮೃತಪಟ್ಟ ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.
ಮುಂದೆ ಓದಿ..: ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!
ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.
ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ
ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.
DAKSHINA KANNADA
ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ.
ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM7 days ago
ಶೈನ್ ಶೆಟ್ಟಿ, ಅಂಕಿತಾ ಜಸ್ಟ್ ಮ್ಯಾರೀಡ್..!! ಅಭಿಮಾನಿಗಳಿಗೆ ಖುಷಿ