Saturday, November 26, 2022

‘ವರಾಹ ರೂಪಂ’ಗೆ ಬಿಗ್ ರಿಲೀಫ್ ಕೊಟ್ಟ ಕೇರಳ ಕೋರ್ಟ್: ತಡೆಯಾಜ್ಞೆ ತೆರವಾದ್ರು ಹಾಡು ಬಳಸುವಂತಿಲ್ಲ…!

ತಿರುವನಂತಪುರಂ: ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನು ಸೃಷ್ಠಿಸಿದಂತಹ ಕಾಂತಾರ ಚಿತ್ರದ ವರಾಹರೂಪಂ ಹಾಡಿನ ವಿವಾದ ಕೊನೆಗೂ ಅಂತ್ಯ ಕಾಣುವ ಲಕ್ಷಣ ಕಾಣುತ್ತಿದೆ. ಇದೀಗ ಕೊನೆಗೂ ಚಿತ್ರ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲ್ಮ್ಸ್‌ಗೆ ಮೊದಲ ಯಶಸ್ಸು ಸಿಕ್ಕಿದ್ದು, ಈ ಹಿಂದಿನಂತೆಯೇ ವರಾಹರೂಪಂ ಹಾಡು ಬಳಕೆಗೆ ಅನುಮತಿ ಸಿಕ್ಕಿದೆ.


ಕೃತಿಚೌರ್ಯದ ಆರೋಪ ಮಾಡಿ ‘ಥೈಕ್ಕುಡಂ ಬ್ರಿಡ್ಜ್’ ಕಂಪೆನಿ ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಕೋರ್ಟ್ ವಜಾಗೊಳಿಸಿದ್ದು ಮಾತ್ರವಲ್ಲದೇ ಚಿತ್ರದಲ್ಲಿ ವರಹಾರೂಪಂ ಹಾಡು ಬಳಕೆಗೆ ಅನುಮತಿ ನೀಡಿದೆ.

ಈ ಕುರಿತು ಸ್ವತಃ ಚಿತ್ರದ ವರಹಾ ರೂಪಂ ಹಾಡು ರಚಿಸಿರುವ ಗೀತ ರಚನೆಕಾರ ಶಶಿರಾಜ್‌ ಕಾವೂರು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ.

ಈ ಬಗ್ಗೆ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಅವರು ‘ಇಂದು ಕೆಳ ನ್ಯಾಯಾಲಯವು ಎರಡೂ ಕಡೆಯವರ ವಾದ ಆಲಿಸಿದ ಬಳಿಕ ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದೆ ಮತ್ತು ವರಾಹರೂಪಂ ಹಾಡಿಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವು ಮಾಡಿದೆ. ನ್ಯಾಯ ಗೆದ್ದಿತು. ಜೈ ತುಳುನಾಡು ಎಂದು ಶಶಿರಾಜ್ ಬರೆದುಕೊಂಡಿದ್ದಾರೆ.

ಹಾಡಿಗೆ ಮತ್ತೊಂದು ಟ್ವಿಸ್ಟ್ ಕೊಟ್ಟ ನ್ಯಾಯಾಲಯ ವಜಾಗೊಳಿಸಿದ್ದು ಮಾತ್ರವಲ್ಲದೇ ಚಿತ್ರದಲ್ಲಿ ವರಹಾರೂಪಂ ಹಾಡು ಬಳಕೆಗೆ ಅನುಮತಿ ನೀಡಿದೆ. ಈ ಕುರಿತು ಸ್ವತಃ ಚಿತ್ರದ ವರಹಾ ರೂಪಂ ಹಾಡು ರಚಿಸಿರುವ ಗೀತ ರಚನೆಕಾರ ಶಶಿರಾಜ್‌ ಕಾವೂರು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ.

ಈ ಸಂಬಂಧ ಕೇರಳದ ಪಾಲಕ್ಕಾಡ್‌ ನ್ಯಾಯಾಲಯದಲ್ಲಿ ಥೈಕ್ಕುಡಂ ಬ್ರಿಡ್ಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇನ್ನೂ ನಡೆಯುತ್ತಿದೆ. ಹೀಗಾಗಿ ಸದ್ಯಕ್ಕೆ ಮೂಲ ವರಾಹರೂಪಂ ಹಾಡನ್ನು ಬಳಸಲು ಸಾಧ್ಯವಿಲ್ಲ. ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್ ಕಾಂತಾರ ಸಿನಿಮಾದ ʼವರಾಹರೂಪಂʼ ಕೃತಿಚೌರ್ಯದ ಆರೋಪ ಮಾಡಿ ಕೇಸ್‌ ದಾಖಲಿಸಿತ್ತು.

ಅರ್ಜಿಯನ್ನು ಮಾನ್ಯ ಮಾಡಿದ್ದ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯ ಮತ್ತು ಕೋಝಿಕ್ಕೋಡ್ ಪ್ರಧಾನ ಜಿಲ್ಲಾ ನ್ಯಾಯಾಲಯ ಕಾಂತಾರ ನಿರ್ಮಾಪಕರಿಗೆ ವರಾಹರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ಮುಂದಿನ ಆದೇಶದವರೆಗೆ ಸಿಂಕ್ರೊನೈಸ್ ಮಾಡಿದ ವರಾಹರೂಪಂ ಗೀತೆಯೊಂದಿಗೆ ಕಾಂತಾರ ಚಿತ್ರದ ಪ್ರದರ್ಶನ, ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ, ಸ್ಟ್ರೀಮಿಂಗ್ ಮಾಡದಂತೆ ಜಿಲ್ಲಾ ನ್ಯಾಯಾಲಯ ನಿರ್ಬಧ ವಿಧಿಸಿತ್ತು.

ಎಲ್ಲಾ ಪ್ರಕ್ರಿಯೆಗಳ ನಂತರ ಇದೀಗ ಕೇರಳ ಕೋರ್ಟ್ ಕಾಂತಾರ ಚಿತ್ರತಂಡ ನಿಟ್ಟುಸಿರು ಬಿಡುವಂತೆ ಮಾಡಿದ್ದು ಮುಂದಿನ ಬೆಳವಣಿಗೆಯನ್ನು ಕಾದು ನೋಡಬೇಕಾಗಿದೆ.

ಕಾಂತಾರ ಚಿತ್ರವನ್ನು ತುಳು ಭಾಷೆಯಲ್ಲಿ ನಿನ್ನೆ ತಾನೇ ಒಟಿಟಿಯಲ್ಲಿ ಪ್ರಸಾರ ಮಾಡಿದ್ದು ಅದರಲ್ಲಿ ವರಾಹ ರೂಪಂ ಹಾಡಿನ ಮೂಲ ಸಂಗೀತವನ್ನು ತೆಗೆದು ಹೊಸ ಸಂಗೀತದ ರೂಪ ಕೊಟ್ಟಿದ್ದು ಪ್ರೇಕ್ಷಕರಿಗೆ ಮಾತ್ರ ಇದರಿಂದ ಅಸಮಾಧಾನವಾಗಿದೆ.

ಕಾಂತಾರ ಚಿತ್ರದ ʼವರಾಹರೂಪಂʼ ಹಾಡಿನ ಬಳಕೆಗೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಬೇಕೆಂದು ಕೋರಿ ಹೊಂಬಾಳೆ ಫಿಲ್ಮ್ಸ್‌ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾಗೊಳಿಸಿತ್ತು. ನ್ಯಾಯಮೂರ್ತಿ ಸಿಎಸ್ ಡಯಾಸ್ ಅವರ ಏಕಸದಸ್ಯ ಪೀಠವು, ಅರ್ಜಿದಾರರು ಭಾರತದ ಸಂವಿಧಾನದ 227ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಹೆಜಮಾಡಿ ಟೋಲ್ ಶುಲ್ಕ ಹೆಚ್ಚಳಕ್ಕೆ ಉಡುಪಿ ಶಾಸಕ ರಘುಪತಿ ಭಟ್ ತೀವ್ರ ವಿರೋಧ..!

ಸುರತ್ಕಲ್‌ನಲ್ಲಿ ಕಾರ್ಯಾಚರಿಸುತಿದ್ದ ಟೋಲ್‌ಗೇಟ್‌ನ್ನು ಮುಚ್ಚಿ ಅದನ್ನು ಹೆಜಮಾಡಿ ಟೋಲ್‌ಗೆ ವಿಲೀನಗೊಳಿಸಿ ಟೋಲ್ ಶುಲ್ಕ ಹೆಚ್ಚಳ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ತೀವ್ರವಾಗಿ ವಿರೋಧಿಸಿದ್ದಾರೆ.ಉಡುಪಿ : ಸುರತ್ಕಲ್‌ನಲ್ಲಿ...

ಮಂಗಳೂರು ಬಲ್ಮಠ ರಸ್ತೆಯಲ್ಲಿ ಕಾರ್ ಬೆಂಕಿಗಾಹುತಿ..!

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.ಕಾರಿನ ಇಂಜಿನ್...

ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ..! 2 ದಿನದಲ್ಲಿ ಇಬ್ಬರು ಬಲಿ..!

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ 2 ದಿನದಲ್ಲಿ ಒಂದೇ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಜೀವಕಳಕೊಂಡಿದ್ದಾರೆ. ಎಳೆ ವಯಸ್ಸಿನ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ಕೊಡುವ ಪೋಷಕರಿಗೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.  ಮಡಂತ್ಯಾರು ಸೆಕ್ರೆಡ್ ಹಾರ್ಟ್...