Wednesday, October 5, 2022

ಯಾದಗಿರಿಯಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ : ಮಕ್ಕಳು ಸಹಿತ ಮೂವರು ಮೃತ್ಯು- ಹಲವರು ಗಂಭೀರ

ಯಾದಗಿರಿ : ಆ ಮನೆಯಲ್ಲಿ ಸಂಭ್ರಮ ಮನೆ ಮಾಡಿತ್ತು. ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮಿಸಬೇಕಾದ ಅವರು ಈಗ ಜೀವನ್ಮರಣದ ಹೋರಾಟ ಮಾಡುತ್ತಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟದ ಪರಿಣಾಮ ಇಬ್ಬರು ಪುಟ್ಟ ಮಕ್ಕಳು ಹಾಗೂ ಓರ್ವ ವೃದ್ಧೆ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಸೀಮಂತ ಕಾರ್ಯಕ್ರಮ ನಡೆಯುತ್ತಿದ್ದ ಮನೆಯೊಂದರಲ್ಲಿ ಸಿಲಿಂಡರ್ ಸೋರಿಕೆಯಿಂದ ಸ್ಪೋಟಗೊಂಡು 20ಕ್ಕೂ ಹೆಚ್ಚಿನ ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಕಲಬುರ್ಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಚಿಕಿತ್ಸೆ ಫಲಿಸದೆ ಕಲಬುರಗಿಯ ಬಸವೇಶ್ವರ ಆಸ್ಪತ್ರೆಯಲ್ಲಿ ಪುಟ್ಟ ಮಕ್ಕಳಾದ ಆಧ್ಯಾ, ಮಹಾಂತೇಶ ಹಾಗೂ ನಿಂಗಮ್ಮ (89) ಮೃತಪಟ್ಟಿರುವುದಾಗಿ ಯಾದಗಿರಿ ಎಸ್. ಪಿ ವೇದಮೂರ್ತಿ ಅವರು ಮಾಹಿತಿ ನೀಡಿದ್ದಾರೆ.

ಸಿಲಿಂಡರ್ ಬ್ಲಾಸ್ಟ್ ನಿಂದ ಟೆಂಟ್, ಬೈಕ್ ಹಾಗೂ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ತಗುಲಿದೆ‌. ‌12 ಮಕ್ಕಳು ಸೇರಿ 17 ಜನರಿಗೆ ಗಾಯವಾಗಿದೆ. ಗಾಯಗೊಂಡವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ‌ಡಾ. ರಾಗಾಪ್ರಿಯಾ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸಿಲಿಂಡರ್ ಪೂರೈಕೆ ಮಾಡಿದ ಎಜೆನ್ಸಿ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...