ಇತ್ತೀಚಿನ ದಿನಗಳಲ್ಲಿ ಈ ವೇಶ್ಯಾವಟಿಕೆ ಅನ್ನೋದು ಹೆಚ್ಚಾಗುತ್ತಿದೆ. ಅಲ್ಲದೇ ಹೆಣ್ಮಕ್ಕಳ ಕಳ್ಳ ಸಾಗಣೆಯು ಹೆಚ್ಚುತ್ತಿದೆ. ಇಂದಿನ ದಿನಗಳಲ್ಲಿ ನೋಡುವುದಾದರೆ ಈ ಸಿನಿಮಾ, ಸೀರಿಯಲ್ ಗಳಲ್ಲಿ ಅಷ್ಟು ಸುಲಭವಾಗಿ ಅವಕಾಶ ಸಿಗೋದಿಲ್ಲ. ಯಾಕಂದರೆ ಇಂದಿನ ಸಿನಿಮಾ, ಸೀರಿಯಲ್ ಗಳಲ್ಲಿ ಅವಕಾಶ ಸಿಗಬೇಕಾದರೆ ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಬೇಕು. ಅಂದರೆ ಅವಕಾಶ ಕೊಡುತ್ತಾರೆ ಅನ್ನೋದು ಕೇಳಿರುತ್ತೇವೆ. ಅಲ್ಲದೇ ಇದು ನಿಜ ಘಟನೆ, ಅದೆಷ್ಟೋ ಹೆಣ್ಣು ಮಕ್ಕಳು ಇದರಿಂದಲೇ ಹಾಳಾಗಿದ್ದಾರೆ. ಇಂತಹದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬಾಯಂದರ್ನಲ್ಲಿ ನಡೆಯುತ್ತಿದ್ದ ಐಷಾರಾಮಿ ಸೆಕ್ಸ್ ರಾಕೆಟ್ ದಂಧೆಯನ್ನು ಪೊಲೀಸರು ಬೇಧಿಸಿದ್ದಾರೆ. ಜೊತೆಗೆ ಹೆಣ್ಮಕ್ಕಳನ್ನು ಮಾಂಸ ದಂಧೆಯ ಜಾಲಕ್ಕೆ ಬೀಳಿಸುತ್ತಿದ್ದ ಇಬ್ಬರು ನಿರ್ಮಾಪಕರನ್ನು ಪೊಲೀಸರು ಬಂಧಿಸಿದ್ದಾರೆ.
ಆದರೆ ಇದು ಸಣ್ಣ ಪುಟ್ಟ ಸೆಕ್ಸ್ ರಾಕೆಟ್ ದಂಧೆಯಲ್ಲ. ಟಿವಿ ನಟಿಯರು, ಬಾಲಿವುಡ್ ಸಿನಿಮಾ ನಟಿಯರು, ವೆಬ್ ಸರಣಿಯ ಕಲಾವಿದರು ವೇಶ್ಯಾವಾಟಿಕೆಯಲ್ಲಿ ತೊಡಗಿರೋದು ಬೆಳಕಿಗೆ ಬಂದಿದೆ. ಪೊಲೀಸ್ ಇನ್ಸ್ಪೆಕ್ಟರ್ ಸಮೀರಾ ಅಹಿರಾ ನೀಡಿರುವ ಮಾಹಿತಿ ಪ್ರಕಾರ, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಐಷಾರಾಮಿ ಹೋಟೆಲ್ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರೋದು ಗೊತ್ತಾಗಿದೆ ಎಂದು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ನಿರ್ಮಾಪಕರು ಸಿಕ್ಕಿಬಿದ್ದಿದ್ದಾರೆ. ರತ್ನಮಯ್ಯ ನರಂಕತೇಲು ಹಾಗೂ ಚಂದ್ರಹಾಸ್ ಅಲಿಯಾಸ್ ಮೈಕೆಲ್ ಡೇವಿಡ್ ಎಂಬುವವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮಾತ್ರವಲ್ಲ ಇವರ ವಿರುದ್ಧ ಐಪಿಸಿ ಸೆಕ್ಷನ್ 370 (2) (3) ಮತ್ತು ಅನೈತಿಕ ಕಳ್ಳಸಾಗಣೆ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
ಹೈ-ಪ್ರೊಫೈಲ್ ಕೇಸ್ ಆಗಿರೋ ಹಿನ್ನೆಲೆಯಲ್ಲಿ ವೇಶ್ಯಾವಾಟಿಕೆಯಲ್ಲಿ ದೊಡ್ಡ ದೊಡ್ಡ ಕುಳಗಳು ಭಾಗಿಯಾಗಿರುವ ಶಂಕೆ ಇದೆ. ಸಿನಿಮಾ, ಧಾರಾವಾಹಿ, ವೆಬ್ ಸಿರೀಸ್ಗಳಲ್ಲಿ ಕಲಾವಿದರಾಗಿರುವ ಹೆಣ್ಮಕ್ಕಳಿಗೆ ಹಣದ ಆಸೆ ಹುಟ್ಟಿಸುತ್ತಿದ್ದರು. ಸಿನಿಮಾ, ಧಾರಾವಾಹಿಗಳಲ್ಲಿ ಚಾನ್ಸ್ ಕೊಡಿಸುತ್ತೇವೆ ಎಂದೇಳಿ ಮೊದಲು ಬುಟ್ಟಿಗೆ ಹಾಕಿಕೊಳ್ಳುತ್ತಿದ್ದರು. ಲಕ್ಷ ಲಕ್ಷ ಹಣ ನೀಡುವ ಆಸೆ ಹುಟ್ಟಿಸಿ ಕೊನೆಗೆ ವೇಶ್ಯಾವಾಟಿಕೆಯಲ್ಲಿ ಭಾಗಿಯಾಗುವಂತೆ ಸಲಹೆ ನೀಡುತ್ತಿದ್ದರು ಎನ್ನಲಾಗಿದೆ.
ಕೋವಿಡ್ -19 ಆರಂಭವಾದ ಬಳಿಕ ಇಂಥ ಪ್ರಕರಣಗಳು ಮುಂಬೈನಲ್ಲಿ ಹೆಚ್ಚುತ್ತಿವೆ. ಸಿನಿಮಾ ಜಗತ್ತು ಡಿಮ್ಯಾಂಡ್ ಕಳೆದುಕೊಂಡ ನಂತರ ಕೆಲವು ನಟಿಯರು ವೇಶ್ಯಾವಾಟಿಕೆಯಲ್ಲಿ ಭಾಗಿಯಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಳೆದ ನವೆಂಬರ್ನಲ್ಲೂ ಕೂಡ ಮಹಾರಾಷ್ಟ್ರ ಪೊಲೀಸರು ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿ ಹೆಣ್ಮಕ್ಕಳನ್ನು ರಕ್ಷಣೆ ಮಾಡಿದ್ದರು.
ಇಂತಹ ಘಟನೆ ಹಲವು ಪ್ರದೇಶಗಳಲ್ಲೂ ನಡೆಯುತ್ತಿದೆ. ಅಲ್ಲದೇ ಇದು ಕರ್ನಾಟಕದಲ್ಲೂ ಹೆಚ್ಚಾಗುತ್ತಿದೆ. ಆದರೆ ಯಾರಿಗೂ ಗೊತ್ತಾಗುತ್ತಿಲ್ಲ. ಈ ವೇಶ್ಯಾವಾಟಿಕೆಯಿಂದ ಅದೆಷ್ಟೋ ಹೆಣ್ಣು ಮಕ್ಕಳು ಹಾಳಾಗಿದ್ದಾರೆ. ಹಣದ ಆಸೆಯಿಂದ ತಮ್ಮ ಜೀವನವನ್ನೇ ಕಳೆದು ಕೊಳ್ಳುತ್ತಿದ್ದಾರೆ. ಆದರೆ ಈ ವೇಶ್ಯಾವಾಟಿಕೆಗಳನ್ನು ಕಡ್ಡಾಯವಾಗಿ ನಿಲ್ಲಿಸಬೇಕು. ಇಂತಹ ಘಟನೆಗಳು ಮುಂದುವರಿತಾ ಇದ್ದಾರೆ ಮತ್ತೇ ಕೂಡ ಹೆಣ್ಣು ಮಕ್ಕಳಿಗೆ ಕಷ್ಟ ಆಗುತ್ತದೆ. ಅದೆಷ್ಟೋ ಕಡೆಗಳಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ಹೆಣ್ಮಕ್ಕಳ ಕಳ್ಳ ಸಾಗಣೆ ನಡೆಯುತ್ತಿದೆ. ಇದರ ಬಗ್ಗೆ ಕ್ರಮ ತೆಗೆದುಕೊಂಡು ವೇಶ್ಯಾವಾಟಿಕೆ ನಿಲ್ಲಿಸಿ ಅಕ್ರಮ ದಂಧೆ ನಡೆಯುತ್ತಿರುವ ಸ್ಥಳಕ್ಕೆ ದಾಳಿ ನಡೆಸಿ ಹೆಣ್ಣು ಮಕ್ಕಳ ರಕ್ಷಣೆ ಮಾಡಬೇಕು.
ಮಂಗಳೂರು/ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ನಿಧ*ನ ಹೊಂದಿದ್ದಾರೆ.
ಇತ್ತೀಚೆಗಷ್ಟೇ ಇವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4 ದಿನಗಳಿಂದ ಯಶವಂತಪುರದ ಬಳಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರ ಮಧ್ಯೆ ನಟ ಸರಿಗಮ ವಿಜಿ ಆರೋಗ್ಯ ಸ್ಥಿತಿ ಗಂ*ಭೀರವಾಗಿದೆ ಎಂದು ಹೇಳಲಾಗಿತ್ತು. ಈಗ ಇವರು ಮೃ*ತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಲವು ದಿಗ್ಗಜ ನಟರ ಜೊತೆ ತೆರೆಹಂಚಿಕೊಂಡಿದ್ದರು. ಹಾಸ್ಯ ಪಾತ್ರಗಳಲ್ಲಿ ಸರಿಗಮ ವಿಜಿ ಮಿಂಚಿದ್ದರು. ಹಲವು ಧಾರವಾಹಿಗಳಲ್ಲೂ ಅವರು ಬಣ್ಣಹಚ್ಚಿದ್ದಾರೆ. 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು 100ಕ್ಕೂ ಅಧಿಕ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ತೆಲುಗು ವಿಜ್ಞಾನ ಸಮಿತಿ ನೀಡುವ ‘ಶ್ರೀ ಕೃಷ್ಣದೇವರಾಯ ಪುರಸ್ಕಾರ’, ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ.
ಮಹಾಲಕ್ಷೀ ಲೇಔಟ್ ನಲ್ಲಿರುವ ಅವರ ನಿವಾಸದಲ್ಲಿ ನಾಳೆ ಬೆಳಿಗ್ಗೆ 10 ಗಂಟೆವರೆಗೆ ಪಾರ್ಥಿ*ವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ವೇಳೆ ಅಂ*ತ್ಯಕ್ರಿಯೆ ನಡೆಯಲಿದೆ.
ಮಂಗಳೂರು/ಬೆಂಗಳೂರು : ಬೇಟೆಗಾರನನ್ನು ಬೇಟೆ ಆಡುವ ರಣ ಬೇಟೆಗಾರ ಬಂದ ಎಂಬ ಡೈಲಾಗ್ನಂತೆ ‘ಬಿಗ್ ಬಾಸ್’ ದಾಖಲೆಯನ್ನು ‘ಸರಿಗಮಪ’ ಹಿಂದಿಕ್ಕಿದೆ. ಇಷ್ಟು ದಿನಗಳ ಕಾಲ ಟಿಆರ್ಪಿಯಲ್ಲಿ ಬಿಗ್ ಬಾಸ್ ಪಾರುಪತ್ಯ ಸಾಧಿಸುತ್ತಾ ಬರುತ್ತಿತ್ತು. ಎಲ್ಲಾ ಧಾರಾವಾಹಿಗಳ ಟಿಆರ್ಪಿಯನ್ನು ಬೀಟ್ ಮಾಡಿ ಬಿಗ್ ಬಾಸ್ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆದರೆ, ಭರ್ಜರಿ ಟಿಆರ್ಪಿ ಪಡೆಯುವ ಮೂಲಕ ಈ ಶೋ ಮೊದಲ ಸ್ಥಾನ ಪಡೆದಿದೆ.
52ನೇ ವಾರದ ಟಿಆರ್ಪಿ ಪ್ರಕಾರ, ಬಿಗ್ ಬಾಸ್ಗೆ ಗ್ರಾಮಾಂತರ ಹಾಗೂ ನಗರ ಭಾಗದಲ್ಲಿ ವಾರದ ದಿನ 8 ಟಿವಿಆರ್, ಶನಿವಾರ 9.1 ಟಿವಿಆರ್ ಹಾಗೂ ಭಾನುವಾರ 10 ಟಿವಿಆರ್ ಸಿಕ್ಕಿದೆ. ವಾರಾಂತ್ಯದಲ್ಲಿ ಸುದೀಪ್ ಅವರು ಇರುವ ಕಾರಣ ಶೋಗೆ ಭರ್ಜರಿ ಟಿಆರ್ಪಿ ದೊರೆಯುತ್ತಿದೆ. ‘ಸರಿಗಮಪ’ ಆಡಿಷನ್ ಇತ್ತೀಚೆಗೆ ಪೂರ್ಣಗೊಂಡಿದೆ. ಶನಿವಾರ ಹಾಗೂ ಭಾನುವಾರ ಸಂಜೆ 7.30ರಿಂದ 9 ಗಂಟೆವರೆಗೆ ಈ ಶೋ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಆಡಿಷನ್ ಎಪಿಸೋಡ್ ಉತ್ತಮ ಟಿಆರ್ಪಿ ಪಡೆದುಕೊಂಡಿದೆ. ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ 11.1 ಟಿವಿಆರ್ ಹಾಗೂ ಗ್ರಾಮೀಣ ಭಾಗದಲ್ಲಿ 13.1 ಟಿವಿಆರ್ ಈ ಶೋಗೆ ಸಿಕ್ಕಿದೆ. ಈ ಮೂಲಕ ಬಿಗ್ ಬಾಸ್ನ ಶೋ ಹಿಂದಿಕ್ಕಿದೆ. ‘ಸರಿಗಮಪ’ ಶೋನಲ್ಲಿ ಅನುಶ್ರೀ ಅವರು ಆ್ಯಂಕರಿಂಗ್ ಮಾಡುತ್ತಿದ್ದಾರೆ. ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಹಾಗೂ ಅರ್ಜುನ್ ಜನ್ಯ ಜಡ್ಜ್ ಸ್ಥಾನದಲ್ಲಿ ಇದ್ದಾರೆ.
ಸೀರಿಯಲ್ಗಳ ಟಿಆರ್ಪಿ
ಸೀರಿಯಲ್ಗಳ ಟಿಆರ್ಪಿ ವಿಚಾರಕ್ಕೆ ಬರೋದಾದರೆ, ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಹಾಗೂ ‘ಅಣ್ಣಯ್ಯ’ ಧಾರಾವಾಹಿಗಳು ಇವೆ. ಮೂರನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’, ನಾಲ್ಕನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಹಾಗೂ ಐದನೇ ಸ್ಥಾನದಲ್ಲಿ ‘ಭಾಗ್ಯ ಲಕ್ಷ್ಮೀ’ ಧಾರಾವಾಹಿ ಇದೆ.
ಮಂಗಳೂರು/ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಸಂಗೀತ ರಿಯಾಲಿಟಿ ಶೋನಲ್ಲಿ ಜ್ಯೂರಿ ಪ್ಯಾನೆಲ್ನಲ್ಲಿ ಇರುತ್ತಿದ್ದ ಬಹುವಾದ್ಯ ಪರಿಣಿತರಾಗಿ ಎಸ್. ಬಾಲಿ ಎಂದೇ ಪ್ರಖ್ಯಾತರಾಗಿರುವ ಎಸ್ ಬಾಲಸುಬ್ರಹ್ಮಣ್ಯಂ ಅವರು ನಿಧನರಾಗಿದ್ದಾರೆ.
ಮೃದಂಗ, ತಬಲಾ, ಢೋಲಕ್ , ಢೋಲ್ಕಿ, ಖಂಜರಿ, ಕೋಲ್ ಹೀಗೆ ಹತ್ತು ಹಲವು ಲಯವಾದ್ಯಗಳನ್ನು ನುಡಿಸುವಲ್ಲಿ ಪರಿಣಿತರಾಗಿದ್ದ ಅಪರೂಪದ ವಿದ್ವಾಂಸ ಎಸ್ ಬಾಲಸುಬ್ರಹ್ಮಣ್ಯಂ ಅವರಿಗೆ 71 ವರ್ಷವಾಗಿತ್ತು.
ಕನ್ನಡ ಚಿತ್ರರಂಗದ ಅನೇಕ ಸಂಗೀತ ಸಾಧಕರು ಬಾಲಿ ಅವರನ್ನು ರಿದಂ ಕಿಂಗ್ ಎಂದೇ ಕರೆಯುತ್ತಿದ್ದರು. ಸುಗಮ ಸಂಗೀತದಲ್ಲೂ ಇವರು ಮಾಸ್ಟರ್. ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್, ಆಯೋಜಕರು ಮತ್ತು ನಿರ್ದೇಶಕರು ಎಂಬ ಹೆಗ್ಗಳಿಕೆ ಇವರದು.
ಬಯಾಲಜಿ ಸುಂದರೇಶನ್ ಎಂದೇ ಖ್ಯಾತರಾಗಿದ್ದ ಎಂ.ವಿ. ಸುಂದರೇಶನ್ ಮತ್ತು ಸಾವಿತ್ರಿ ದಂಪತಿಯ ಮಗನಾಗಿ 1953ರ ಜನವರಿ 9ರಂದು ಬೆಂಗಳೂರಿನಲ್ಲಿ ಬಾಲಿ ಅವರು ಜನಿಸಿದರು. ಮನೆಯಲ್ಲಿ ಸಂಗೀತದ ವಾತಾವರಣವಿತ್ತು. ಚಿಕ್ಕಂದಿನಿಂದಲೇ ಸಂಗೀತದತ್ತ ಒಲವು ಮೂಡಿಸಿಕೊಂಡ ಬಾಲಿ ಪಾಲಕ್ಕಾಡು ಶ್ರೀ ರವೀಂದ್ರನಾಥ ವಾರಿಯರ್ ಬಳಿ ಮೃದಂಗ ಕಲಿತರು. ಮುಂದೆ ಅವರು ಹಲವಾರು ಶಾಸ್ತ್ರೀಯ ಸಂಗೀತಗಾರರಿಗೆ ಮೃದಂಗ ಪಕ್ಕವಾದ್ಯ ಸಹಕಾರದಲ್ಲಿ ಬಾಗಿಯಾಗಿದ್ದಾರೆ.
ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್-ಅರೇಂಜರ್-ಕಂಡಕ್ಟರ್ ಎಂಬ ಹೆಗ್ಗಳಿಕೆ ಎಸ್. ಬಾಲಿ ಅವರದ್ದಾಗಿದೆ. ಶಂಕರನಾಗ್ ಅವರ ಸಂಕೇತ್ ಸ್ಟುಡಿಯೊ ಆರಂಭದ ದಿನಗಳಲ್ಲಿ ಎದುರಾದ ಸವಾಲುಗಳನ್ನು ಎದುರಿಸಲು ಬಾಲಿ ಹೆಗಲು ನೀಡಿದರು.
ಬಾಲಿ ಅವರು ಕನ್ನಡದ ಮೊಟ್ಟಮೊದಲ ಧ್ವನಿಸುರಳಿ ಕವಿ ನಿಸಾರ್ ಅಹಮ್ದರವರ ನಿತ್ಯೋತ್ಸವದಿಂದ ಮೊದಲುಗೊಂಡು ಮೈಸೂರು ಅನಂತಸ್ವಾಮಿಯವರ ಸಂಯೋಜನೆಗಳಿಗೆ ಸಹಾಯಕರಾಗಿ ವಾದ್ಯದ ನೆರವು ನೀಡಿದವರು. ಹಲವಾರು ಧ್ವನಿಸುರುಳಿಗಳು, ಕಿರುತೆರೆ, ನಾಟಕಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಶ್ವದೆಲ್ಲೆಡೆ ಬಾಲಿ ಅವರ ಲಯ ಸಂಗೀತ ಶಾಶ್ವತವಾಗಿ ಮೊಳಗುತ್ತಲೇ ಇದೆ. 1970ರ ದಶಕದಲ್ಲಿ ಬಾಲಿ ಬಹುಬೇಡಿಕೆಯ ವ್ಯಕ್ತಿಯಾಗಿದ್ದರು. ಅವರಿಗ ರಾಜ್ಯ ಸಂಗೀತ ನೃತ್ಯ ಅಕಾಡೆಮಿ ಗೌರವ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.