Connect with us

    MANGALORE

    ಮಂಗಳೂರು ನ.22ರಂದು ‘MAAM ಇನ್‌ಸ್ಪೈರ್ ಅವಾರ್ಡ್’

    Published

    on

    ಮಂಗಳೂರು: ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಪದವಿ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್(ಮಾಮ್)

    ಆಫ್ ಮಂಗಳಗಂಗೋತ್ರಿ ಸಂಘಟನೆ ವತಿಯಿಂದ ಪ್ರತಿವರ್ಷದಂತೆ ನೀಡಲಾಗುವ ‘ಮಾಮ್ ಇನ್‌ಸ್ಪೈರ್ ಅವಾರ್ಡ್’ ಕಾರ್ಯಕ್ರಮ ನ. 22ರಂದು ಬೆಳಗ್ಗೆ 10.30ಕ್ಕೆ ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆಯಲಿದೆ.


    ಪ್ರಶಸ್ತಿ ಪ್ರದಾನವನ್ನು ಅಕ್ಷರಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ನೆರವೇರಿಸಲಿದ್ದು, ಮುಖ್ಯ ಅತಿಥಿಯಾಗಿ ಹೊಸ ದಿಗಂತ ದಿನಪತ್ರಿಕೆಯ ಹಿರಿಯ ವರದಿಗಾರ ಗುರುವಪ್ಪ ಎನ್.ಟಿ.ಬಾಳೇಪುಣಿ ಭಾಗವಹಿಸುವರು.

     

    ಪ್ರಶಸ್ತಿ ವಿಜೇತರು
    ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗ: ಶ್ರೀರಕ್ಷಾ ರಾವ್ ಪುನರೂರು, ಆಳ್ವಾಸ್ ಕಾಲೇಜು ಮೂಡಬಿದ್ರಿ. ಶ್ರೀರಕ್ಷಾ ಅವರು ಮೂಲ್ಕಿ ಸಮೀಪ ಪುನರೂರಿನವರು.

    ಸ್ನಾತಕೋತ್ತರ ಪದವಿ ಅಧ್ಯಯನದ ವೇಳೆ ಉತ್ತಮ ಬರಹಗಾರಿಕೆ ಮೂಲಕ ಗುರುತಿಸಿಕೊಂಡವರು. ಆಳ್ವಾಸ್ ಸಂಸ್ಥೆಯಲ್ಲಿ ಸಾಂಸ್ಕೃತಿಕ ದತ್ತು ಸ್ವೀಕಾರ ಯೋಜನೆ ಅಡಿ ಪತ್ರಿಕೋದ್ಯಮ ಕೋರ್ಸ್‌ಗೆ ಆಯ್ಕೆಯಾದ ಪ್ರತಿಭಾನ್ವಿತೆ.

    ಆಳ್ವಾಸ್ ರಂಗ ಅಧ್ಯಯನದ ವಿದ್ಯಾರ್ಥಿನಿ. ಚಂಡೀಘಡದಲ್ಲಿ 2019ರಲ್ಲಿ ನಡೆದ ರಾಷ್ಟ್ರ ಮಟ್ಟದ ಯವಜನೋತ್ಸವದಲ್ಲಿ ಭಾಗವಹಿಸಿ ನಾಟಕದಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ಬೀದಿ ನಾಟಕ , ತುಳು, ಕನ್ನಡ ನಾಟಕಗಳಲ್ಲಿ ಅಭಿನಯಿಸಿದವರು. ಇದೀಗ ಬೆಂಗಳೂರಿನ ಮಸ್ತ್ ಮಗಾ ಡಾಟ್ ಕಾಂ ಡಿಜಿಟಲ್ ಮಾಧ್ಯಮದಲ್ಲಿ ನಿರೂಪಕಿಯಾಗಿದ್ದಾರೆ.
    ಪದವಿ ವಿಭಾಗ: ದುರ್ಗಾ ಪ್ರಸನ್ನ, ಆಳ್ವಾಸ್ ಕಾಲೇಜು ಮೂಡಬಿದಿರೆ. ಮೂಲತಃ ಕಾಸರಗೋಡು ಜಿಯ ಪೆರ್ಲದವರು. ತಂದೆ ಶ್ರೀಪತಿ ಭಟ್ ಬೊಳ್ಳುರೋಡಿ ಹಾಗೂ ತಾಯಿ ಇಂದಿರಾ.

    ಪ್ರಸ್ತುತ ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿ. ಪದವಿ ವಿದ್ಯಾಭ್ಯಾಸವನ್ನು ಕೂಡ ಆಳ್ವಾಸ್ ನಲ್ಲಿಯೇ ಪೂರೈಸಿದ್ದಾರೆ.ವಿವಿಧ ಪತ್ರಿಕೆಗಳಲ್ಲಿ ೬೦ಕ್ಕೂ ಅಧಿಕ ಲೇಖನ ಬರೆದಿದ್ದಾರೆ.

    ಕನ್ನಡ ಹಾಗೂ ತುಳು ವಿಕಿಪೀಡಿಯದ ಸಕ್ರಿಯ ಸಂಪಾದಕಿ ಹಾಗೂ ತರಬೇತುದಾರರಾಗಿದ್ದಾರೆ. ಸುದ್ದಿವಾಣಿ ವೆಬ್‌ಸೈಟ್‌ನ ಸಂಪಾದಕಿಯಾಗಿದ್ದಾರೆ.
    ಪ್ರಜ್ಞಾ ಓಡಿಲ್ನಾಳ (ದ್ವಿತೀಯ): ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದರು. ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿನಿ. ಪ್ರಸ್ತುತ ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಸ್ನಾತಕೋತ್ತರ ಪದವಿ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿನಿ.

    ಪುತ್ತೂರಿನ ಸ್ಥಳೀಯ ವಾಹಿನಿ ಝೂಮ್ ಇನ್ ಟಿವಿಯಲ್ಲಿ ನಿರೂಪಕಿ ಹಾಗೂ ವರದಿಗಾರ್ತಿ. ನಿರೂಪಕಿ, ಬರಹಗಾರ್ತಿಯಾಗಿ ಗುರುತಿಸಿಕೊಂಡವರು.
    ಮಾಮ್ ಕುರಿತು: ಮೀಡಿಯಾ ಅಲ್ಯೂಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘಟನೆಯಾಗಿದ್ದು ೨೦೧೫ರಲ್ಲಿ ಸ್ಥಾಪನೆಗೊಂಡಿದೆ.

    ಪತ್ರಿಕೋದ್ಯಮ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದೊಂದಿಗೆ ಶಿಕ್ಷಣ ವ್ಯವಸ್ಥೆ, ವಿದ್ಯಾರ್ಥಿಗಳನ್ನು ಬೆಸೆಯುವ ಸೇತುವಾಗಿ ಕೆಲಸ ಮಾಡುತ್ತಿದೆ.

    ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದ ಕೊಡುಗೆ ನೀಡಿದವರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮದ ಭಾಗವಾಗಿ ‘ಮಾಮ್ ಇನ್‌ಸ್ಪೈರ್ ಅವಾರ್ಡ್’ನ್ನು ಪ್ರತಿ ವರ್ಷ ನೀಡುತ್ತಾ ಬಂದಿದೆ.

    ಹಲವು ಸಾಮಾಜಿಕ, ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದೆ. ಪತ್ರಿಕೋದ್ಯಮ ಶಿಕ್ಷಣದಲ್ಲಾಗಬೇಕಾದ ಸುಧಾರಣೆಗಳ ಕುರಿತು ಇತ್ತೀಚೆಗೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಮಗ್ರ ಸಲಹೆ ಒಳಗೊಂಡ ಪ್ರಸ್ತಾವ ಸಲ್ಲಿಸಿದೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending