Wednesday, October 5, 2022

ಭಟ್ಕಳದಲ್ಲಿ ಹುಚ್ಚುನಾಯಿ ಹಾವಳಿ: ನಾಲ್ವರಿಗೆ ಗಾಯ

ಭಟ್ಕಳ: ಹುಚ್ಚು ನಾಯಿಯ ದಾಳಿಯಿಂದ ನಾಲ್ಕು ಮಂದಿ ಗಾಯಗೊಂಡ ಘಟನೆ ನಿನ್ನೆ ಭಟ್ಕಳದ ಹಳೆ ಬಸ್ ನಿಲ್ದಾಣದ ಮೀನು ಮತ್ತು ತರಕಾರಿ ಮಾರುಕಟ್ಟೆ ಮುಂಭಾಗದಲ್ಲಿ ನಡೆದಿದೆ.


ಕರಿಕಾಲ್ ನಿವಾಸಿ ಮಾದೇವ್ ಮೊಗೇರ್ (65), ಸಿದ್ದೀಕ್ ಸ್ಟ್ರೀಟ್‌ನ ಮುಹಮ್ಮದ್ ಯಾಸೀನ್ (42), ಮೌಲ್ವಿ ಅಬುಲ್ ಹಸನ್ ನದ್ವಿ (21) ಮತ್ತು ಹನೀಫಾಬಾದ್‌ನ ಮೌಲ್ವಿ ಇಸ್ಮಾಯಿಲ್ ನದ್ವಿ (29) ನಾಯಿಯ ದಾಳಿಗೊಳಗಾದವರು ಎಂದು ಗುರುತಿಸಲಾಗಿದೆ.

ಹುಚ್ಚು ನಾಯಿ ಕಡಿತದಿಂದ ಸಂಭವಿಸಬಹುದಾದ ದೊಡ್ಡ ದುಷ್ಪರಿಣಾಮವನ್ನು ಭಟ್ಕಳ ಪುರಸಭೆಯ ಸಿಬ್ಬಂದಿಗಳು ತಡೆದಿದ್ದಾರೆ.

ಗಾಯಗೊಂಡವರನ್ನು ಸಮಾಜಸೇವಕ ಹಾಗೂ ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ ಮಾಜಿ ಪ್ರಧಾನ ಕಾರ್ಯದರ್ಶಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ.

ಅಗತ್ಯ ಚುಚ್ಚುಮದ್ದು ಕೂಡಾ ನೀಡಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...