BIG BOSS
ಡ್ರೋನ್ ಪ್ರತಾಪ್ ಗೆ ಮತ್ತೆ ಶಾಕ್ ನೀಡಿದ ಮಧುಗಿರಿ ಕೋರ್ಟ್ !
Published
5 days agoon
By
NEWS DESK3ಮಂಗಳೂರು/ತುಮಕೂರು: ನೀರಲ್ಲಿ ಸೋಡಿಯಂ ಸ್ಪೋಟ ಕೇಸ್ ಗೆ ಸಂಬಧಪಟ್ಟಂತೆ ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ಇದರ ಬೆನ್ನಲ್ಲೇ ಮಧುಗಿರಿ ಕೋರ್ಟ್ ಪ್ರತಾಪ್ ಗೆ ಮತ್ತೆ ಶಾಕ್ ನೀಡಿದೆ.
ಕನ್ನಡದ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿ ಡ್ರೋನ್ ಪ್ರತಾಪ್ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ. ಮಧುಗಿರಿಯ ಜೆಎಂಎಫ್ ಸಿ ಕೋರ್ಟ್ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಮಹತ್ವದ ಆದೇಶ ನೀಡಿದೆ.
ಡ್ರೋನ್ ಪ್ರತಾಪ್ನನ್ನು ಪೊಲೀಸರು ಭಾನುವಾರ ಬೆಂಗಳೂರಿನ ಕೊತ್ತನೂರು, ಜೆಪಿನಗರ ಹಾಗೂ ಅವೆನ್ಯೂ ರೋಡ್ಗೆ ಕರೆದುಕೊಂಡು ಹೋಗಿ ಮಹಜರ್ ಮಾಡಿಕೊಂಡು ಬಂದಿದ್ದಾರೆ. ಡ್ರೋನ್ ಪ್ರತಾಪ್ ವಾಸವಿದ್ದ ಮನೆ ಕಚೇರಿ ಹಾಗೂ ಜೆಪಿನಗರದಲ್ಲಿ ಬ್ಲಾಸ್ಟ್ ಬಗ್ಗೆ ಚಿತ್ರೀಕರಿಸಿದ್ದ ಕ್ಯಾಮರಾ ವಶಕ್ಕೆ ಪಡೆದಿದ್ದಾರೆ. ಜೆಪಿ ನಗರದಲ್ಲಿ ಸಂಜು ಎಂಬುವವರ ಮನೆಯಲ್ಲಿ ಕ್ಯಾಮರಾ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ; ವಿಚಾರಣೆಯಲ್ಲಿ ಪೊಲೀಸರಿಗೆ ಸಿಕ್ತು ಮಹತ್ವದ ಮಾಹಿತಿ
ವಿಚಾರಣೆ ಬಳಿಕ ಮಿಡಿಗೇಶಿ ಪೊಲೀಸರು ಇಂದು ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಾದ ಆಲಿಸಿದ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಡ್ರೋನ್ ಪ್ರತಾಪ್ ಅವರಿಗೆ 26-12-24 ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಜೆಎಂಎಫ್‌ಸಿ ಕೋರ್ಟ್ ಈ ಆದೇಶದಿಂದ ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ತಾಲೂಕು ಉಪ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಗಿದೆ. ಸೋಡಿಯಂ ಮೆಟಲ್ ಸ್ಫೋಟ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರು ಸದ್ಯ ಜೈಲು ಹಕ್ಕಿಯಾಗಿದ್ದಾರೆ.
BIG BOSS
BBK11: ಆಟದ ದಿಕ್ಕು, ದಾರಿ ತಪ್ಪಿಸಿದ್ರಾ ಚೈತ್ರಾ ಕುಂದಾಪುರ? ಕಿಚ್ಚ ಸುದೀಪ್ ಖಡಕ್ ಕ್ಲಾಸ್!
Published
9 hours agoon
21/12/2024By
NEWS DESK2ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11, 14ನೇ ವಾರಕ್ಕೆ ಕಾರಲಿಡಲು ಸಜ್ಜಾಗಿ ನಿಂತಿದೆ. ಇದೇ ಹೊತ್ತಲ್ಲಿ ಬಿಗ್ಬಾಸ್ ಮನೆಗೆ ಕಿಚ್ಚ ಸುದೀಪನ ಎಂಟ್ರಿಯಾಗಿದೆ. ಇಡೀ ವಾರ ಬಿಗ್ಬಾಸ್ ಮನೆಯಲ್ಲಿ ಏನೆಲ್ಲಾ ಆಯ್ತು, ಯಾರದ್ದು ಸರಿ, ಯಾರದ್ದು ತಪ್ಪು ಅಂತ ಕ್ಲಾಸ್ ತೆಗೆದುಕೊಳ್ಳೋದಕ್ಕೆ ಕಿಚ್ಚ ಸುದೀಪ್ ಅವರು ರೆಡಿಯಾಗಿದ್ದಾರೆ.
ಇನ್ನೂ ಈ ವಾರದಲ್ಲಿ ಬಿಗ್ಬಾಸ್ ಮನೆಯಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ. ಹೀಗಾಗಿ ಕಿಚ್ಚ ಸುದೀಪ್ ಅವರು ಬಿಗ್ಬಾಸ್ ಮನೆಗೆ ಎಂಟ್ರಿ ಕೊಡುತ್ತಲೇ ಓರ್ವ ಸ್ಪರ್ಧಿಯ ಉಸ್ತುವಾರಿ ಬಗ್ಗೆ ಮಾತಾಡುತ್ತಾ ಬಂದಿದ್ದಾರೆ. ಉಸ್ತುವಾರಿಗಳು ಜವಾಬ್ದಾರಿಗಳನ್ನು ಮರೆತು ಆಟದ ದಾರಿಯನ್ನು ತಪ್ಪುಸುತ್ತಿದ್ದಾರೆ. ಮಾತಿನ ಮಿತಿಗಳು ಮಿರುತ್ತಾ ಹೋಗುತ್ತಿವೆ ಖಡಕ್ ಡೈಲಾಂಗ್ ಹೊಡೆದಿದ್ದಾರೆ.
ಇನ್ನೂ, ಮೊನ್ನೆ ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಗಳ ನಡುವಿನ ಕಿತ್ತಾಟ ಜೋರಾಗಿತ್ತು. ತೀವ್ರ ಪೈಪೋಟಿಯಿಂದಾಗಿ ಜಿದ್ದಿಗೆ ಬಿದ್ದವರಂತೆ ಸ್ಪರ್ಧಿಗಳು ಕಚ್ಚಾಡಿಕೊಳ್ತಿದ್ದರು. ಇದರಿಂದ ಟಾಸ್ಕ್ ಪೂರ್ಣಗೊಳಿಸೋದೇ ಇಡೀ ಮನೆ ಮಂದಿ ಕೈಚಲ್ಲಿ ಕುಳಿತುಕೊಂಡಿದ್ದರು. ಇದನ್ನು ನೋಡಿದ ಬಿಗ್ಬಾಸ್ ಟಾಸ್ಕ್ ಅನ್ನು ಅರ್ಧಕ್ಕೆ ರದ್ದು ಮಾಡಿದ್ದರು.
ಇದರಿಂದ ಕೆಲವು ಸ್ಪರ್ಧಿಗಳು ಚೈತ್ರಾ ಕುಂದಾಪುರ ಮೇಲೆ ಬೇಸರ ಹೊರ ಹಾಕಿದ್ದರು. ಚೈತ್ರಾ ಕುಂದಾಪುರ ಪದೇ ಪದೇ ಆಟದ ಮಧ್ಯೆ ಫೌಲ್ ಕೊಟ್ಟಿದ್ದಕ್ಕೆ, ಹಾಗೂ ಇಬ್ಬರು ಉಸ್ತುವಾರಿಗಳು ಸರಿಯಾದ ನಿರ್ಧಾರಕ್ಕೆ ಬರದಿದ್ದ ಕಾರಣಕ್ಕೆ ಟಾಸ್ಕ್ ಅರ್ಧಕ್ಕೆ ನಿಲ್ಲುವಂತೆ ಆಗಿತ್ತು. ಇದೇ ವಿಚಾರ ಬಗ್ಗೆ ಇಂದು ಕಿಚ್ಚ ಸುದೀಪ್ ಮಾತಾಡಲಿದ್ದಾರೆ. ಚೈತ್ರಾ ಕುಂದಾಪುರಗೆ ಮತ್ತೆ ಕ್ಲಾಸ್ ತೆಗೆದುಕೊಳ್ಳಲಿದ್ದಾರೆ.
ವೀಕೆಂಡ್ ಟೆನ್ಷನ್ನಲ್ಲಿರೋ ಬಿಗ್ಬಾಸ್ ಮಂದಿ ಬೆಚ್ಚಿಬಿದ್ದ ಘಟನೆಯೊಂದು ನಡೆದಿದೆ. ಒಂದು ಕ್ಷಣ ದೊಡ್ಮನೆಯಲ್ಲಿ ದೆವ್ವ ಭೂತಗಳು ಬಂದ ರೀತಿಯಲ್ಲಿ ಸ್ಪರ್ಧಿಗಳು ಗಾಬರಿಯಾಗಿದ್ದು, ಎಲ್ಲರೂ ಕಿರುಚಾಡಿಕೊಂಡಿದ್ದಾರೆ.
ಅಷ್ಟಕ್ಕೂ ಅಲ್ಲಿ ಆಗಿದ್ದೇನು..?
ಅಡುಗೆ ಮನೆಯಲ್ಲಿ ಗೌತಮಿ ಜಾಧವ್ ಅವರು ಲಟ್ಟಣಿಗೆ ಹಿಡಿದು ಚಪಾತಿ ಮಾಡುತ್ತಿರುತ್ತಾರೆ. ಈ ವೇಳೆ ಅಲ್ಲಿ ಅಗೋಚರ ದೃಶ್ಯ ಕಾಣಿಸಿದೆ. ಇದರಿಂದ ಗಾಬರಿಯಾದ ಗೌತಮಿ ಅದೇ ಅಲ್ಲಿ ಯಾರು ಎಂದಿದ್ದಾರೆ. ಅಲ್ಲಿಂದ ಓಡಿ ಬಂದ ಗೌತಮಿ, ಭಯದಿಂದ ಮೋಕ್ಷಿತಾರನ್ನು ಹಿಡಿದುಕೊಂಡು ನಿಲ್ಲುತ್ತಾರೆ. ಆಗ ಮೋಕ್ಷಿತಾ ಕೂಡ ಬೆಚ್ಚಿಬಿದ್ದಾರೆ. ಅದೇ ವೇಳೆ ವಿಕಾರವಾದ ಮುಖವೊಂದು ಕಾಣಿಸಿಕೊಂಡಿದೆ. ಆಗ ಉಗ್ರಂ ಮಂಜು ಕೂಡ ಬೆಚ್ಚಿಬಿದ್ದು ಜೋರಾಗಿ ಕಿರುಚಿಕೊಂಡಿದ್ದಾರೆ. ನಂತರ ಅದರ ಅಸಲಿ ಕತೆ ರಿವೀಲ್ ಆಗಿದೆ.
ಅಸಲಿ ಕತೆ ಏನು..?
ದೆವ್ವನೂ ಅಲ್ಲ. ಭೂತನೂ ಅಲ್ಲ. ಕಲರ್ಸ್ ಕನ್ನಡದಲ್ಲಿ ‘ನೂರು ಜನ್ಮಕ್ಕೂ’ ಎಂಬ ಹೊಸ ಧಾರಾವಾಹಿ ಬರ್ತಿದೆ. ಆ ತಂಡ ಬಿಗ್ಬಾಸ್ ಮನೆಗೆ ಲಗ್ಗೆ ಇಟ್ಟಿದೆ. ಧಾರಾವಾಹಿಯಯಲ್ಲಿ ನಾಯಕನ ಮೇಲೆ ಆತ್ಮವೊಂದು ದ್ವೇಷ ಕಾರುತ್ತಿದೆ. ಈ ಆತ್ಮಕ್ಕೆ ನಾಯಕನ ಮೇಲೆ ಯಾಕೆ ದ್ವೇಷವಿರುತ್ತದೆ? ರಾಯರ ಅಪ್ಪಟ ಭಕ್ತೆಯಾಗಿರುವ ನಾಯಕಿ ಆ ಆತ್ಮದಿಂದ ತನ್ನ ಪ್ರೀತಿಯನ್ನು ಹೇಗೆ ರಕ್ಷಿಸಿಕೊಳ್ಳುತ್ತಾಳೆ? ಆ ಆತ್ಮಕ್ಕೂ ಹಾಗೂ ನಾಯಕನಿಗೂ ಏನು ಸಂಬಂಧ? ನಾಯಕನ ತಪ್ಪೇನು? ಅನ್ನೋದೇ ಧಾರಾವಾಹಿ ಕಥೆ ಆಗಿದೆ.
ಹೀರೋ ಆಗಿ ಗೀತಾ ಸೀರಿಯಲ್ ಖ್ಯಾತಿಯ ಧನುಷ್ ಗೌಡ ಕಂಬ್ಯಾಕ್ ಮಾಡಿದ್ದಾರೆ. ನಾಯಕಿಯಾಗಿ ಶಿಲ್ಪಾ ಕಾಮತ್ ನಟಿಸುತ್ತಿದ್ದಾರೆ. ಆತ್ಮದ ಪಾತ್ರವನ್ನು ಚಂದನಾ ಗೌಡ ಬಣ್ಣ ಹಚ್ಚಿದ್ದಾರೆ. ಅಂತೆಯೇ ಬಿಗ್ಬಾಸ್ ಮನೆಯಲ್ಲಿ ಆತ್ಮರೂಪದಲ್ಲಿ ಚಂದನಾ ಗೌಡ ಅವರ ಮುಖ ಕಾಣಿಸಿದೆ. ಇದನ್ನು ನೋಡಿ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ.
BIG BOSS
ಚೈತ್ರಾ ಕುಂದಾಪುರಗೆ ಮತ್ತೆ ಜೈಲು.. ಮುಂದಿನ ವಾರಕ್ಕೆ ಕ್ಯಾಪ್ಟನ್ ಯಾರೆಂದು ರಿವೀಲ್..!
Published
1 day agoon
20/12/2024By
NEWS DESK2ಬಿಗ್ಬಾಸ್ ಗೆಲ್ಲಲು ಸ್ಪರ್ಧಿಗಳ ನಡುವಿನ ಸರ್ಕಸ್ ಜೋರಾಗಿದೆ. ಅಂತೆಯೇ ವೀಕೆಂಡ್ ಸನಿಹದಲ್ಲಿರುವ ಸ್ಪರ್ಧಿಗಳ ಮಧ್ಯೆ ಉತ್ತಮ ಮತ್ತು ಕಳಪೆ ಚಟುವಟಿಕೆ ಕೂಡ ಮುಕ್ತಾಯವಾಗಿದೆ.
ಯಾರು ಕಳಪೆ..?
ಕಳೆದ ಬಾರಿ ಕಳಪೆ ಸ್ಥಾನದಲ್ಲಿ ಇಬ್ಬರು ಸ್ಪರ್ಧಿಗಳಿದ್ದರು. ತ್ರಿವಿಕ್ರಮ್ ಹಾಗೂ ಚೈತ್ರಾ ಕುಂದಾಪುರ ಬಿಗ್ಬಾಸ್ ಮನೆಯ ಜೈಲು ಸೇರಿದ್ದರು. ಈ ವಾರ ಕಳಪೆ ಸ್ಥಾನವನ್ನು ಚೈತ್ರಾ ಅವರೇ ಇಟ್ಟುಕೊಂಡಿದ್ದಾರೆ. ಸತತವಾಗಿ ಚೈತ್ರಾ ಅವರು ಜೈಲು ಸೇರುತ್ತಿದ್ದಾರೆ. ಬಹುತೇಕ ಸ್ಪರ್ಧಿಗಳು ಕಳಪೆಗೆ ಚೈತ್ರಾ ಕುಂದಾಪುರ ಹೆಸರನ್ನೇ ತೆಗೆದುಕೊಂಡಿದ್ದಾರೆ. ಹೀಗಾಗಿ ಚೈತ್ರಾ ಕುಂದಾಪುರ ಮತ್ತೆ ಜೈಲು ಸೇರಿದ್ದಾರೆ. ಇನ್ನು ಕಳಪೆ ನೀಡುವ ವೇಳೆ ಎಂದಿನಂತೆ ಮಾತಿನ ಸಮರಗಳು ನಡೆದಿವೆ. ವಿಶೇಷವಾಗಿ ಚೈತ್ರಾ ಕುಂದಾಪುರಗೆ ಹನಮಂತು ಟಾಂಗ್ ನೀಡಿದ್ದಾರೆ.
ಕಳಪೆ ಕೊಡಲು ನಾನು ಯಾರನ್ನೂ ಟಾರ್ಗೆಟ್ ಮಾಡಿಲ್ಲ. ನೀನು ನನ್ನ ದೊಡ್ಡಪ್ಪನ ಮಗಳು, ಅತ್ತೆ ಮಗಳು ಅಲ್ಲ ಎಂದು ಡೈಲಾಗ್ ಹೊಡೆದಿದ್ದಾರೆ. ಹನುಮಂತು ಅವರ ಈ ಡೈಲಾಗ್ ಸಖತ್ ಸೌಂಡ್ ಮಾಡ್ತಿದೆ. ಇನ್ನು, ಮುಂದಿನ ವಾರಕ್ಕೆ ಕ್ಯಾಪ್ಟನ್ ಆಯ್ಕೆ ಪ್ರಕ್ರಿಯೆ ಕೂಡ ಮುಕ್ತಾಯವಾಗಿದೆ. ಅದರಂತೆ ಭವ್ಯಗೌಡ ಅವರು ಬಿಗ್ಬಾಸ್ ನೀಡಿದ ಕ್ಯಾಪ್ಟನ್ಸಿ ಟಾಸ್ಕ್ ಗೆದ್ದು ಮುಂದಿನ ವಾರಕ್ಕೆ ನಾಯಕರಾಗಿದ್ದಾರೆ.
LATEST NEWS
3 ಮಕ್ಕಳ ತಾಯಿಗೆ, 2 ಮಕ್ಕಳ ತಂದೆ ಜೊತೆ ಅ*ಫೇರ್; ಜೋಡಿಗೆ ಭರ್ಜರಿ ಮರುವಿವಾಹ
BBK11: ಆಟದ ದಿಕ್ಕು, ದಾರಿ ತಪ್ಪಿಸಿದ್ರಾ ಚೈತ್ರಾ ಕುಂದಾಪುರ? ಕಿಚ್ಚ ಸುದೀಪ್ ಖಡಕ್ ಕ್ಲಾಸ್!
ಟಿವಿ ರಿಮೋಟ್ ಕೊಡದಿದ್ದಕ್ಕೆ ಬಾಲಕಿ ಆತ್ಮಹ*ತ್ಯೆ
ಉಡುಪಿಯ ರೆಸಾರ್ಟ್ ನಲ್ಲಿ ಭಾರಿ ಅಗ್ನಿ ಅವಘಡ : ಪ್ರಾಣಾಪಾಯದಿಂದ ಪಾರಾದ ಪ್ರವಾಸಿಗರು!
ಮೂಲ್ಕಿ: ವಿವಿಧ ರಂಗಗಳ ಸಾಧಕರಿಗೆ ‘ಅರಸು ಕಂಬಳ’ ಪ್ರಶಸ್ತಿ ಪ್ರದಾನ
ಬಿಗ್ಬಾಸ್ ಮನೆಯಲ್ಲಿ ದೆವ್ವ, ಭೂತಗಳ ಓಡಾಟ
Trending
- BIG BOSS6 days ago
ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ; ವಿಚಾರಣೆಯಲ್ಲಿ ಪೊಲೀಸರಿಗೆ ಸಿಕ್ತು ಮಹತ್ವದ ಮಾಹಿತಿ
- DAKSHINA KANNADA6 days ago
ಕ್ಯಾಟ್ಕದ ನೂತನ ಅಧ್ಯಕ್ಷರಾಗಿ ಲಂಚುಲಾಲ್ ಅವಿರೋಧವಾಗಿ ಆಯ್ಕೆ
- BIG BOSS6 days ago
ದಿಢೀರ್ ನಿರ್ಧಾರ ಕೈಗೊಂಡ ಗೋಲ್ಡ್ ಸುರೇಶ್; ಕಿಚ್ಚ ಸುದೀಪ್ ಶಾಕ್ !
- LATEST NEWS3 days ago
ದಹಿ ಪುರಿ ಚಾಟ್ಸ್ ಬದಲು ಪೂರಿ, ಮೊಸರು ಕಳುಹಿಸಿಕೊಟ್ಟ ರೆಸ್ಟೋರೆಂಟ್