Connect with us

LATEST NEWS

ಮಡಿಕೇರಿಯಲ್ಲೊಬ್ಬ ನಾನು ಅವನಲ್ಲ – ಅವಳು..!

Published

on

ಮಡಿಕೇರಿ : ಯುವತಿಯ ಹೆಸರಿನಲ್ಲಿ ಫೇಸ್​ಬುಕ್​ನಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮೆಸೇಜ್​ ಮಾಡುತ್ತಿದ್ದ ಯುವಕನನ್ನು ಉಪಾಯವಾಗಿ ಕರೆಸಿಕೊಂಡು ಥಳಿಸಿ, ಪೊಲೀಸರ ವಶಕ್ಕೆ ನೀಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿ ಸಮೀಪದ ಹಾಕತ್ತೂರಿನ ಅಶ್ರಪ್ ಎಂಬ ಯುವಕ ಕಳೆದ 15 ದಿನಗಳಿಂದ ಯುವತಿಯ ಹೆಸರಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಚಾಟಿಂಗ್​ ಮಾಡುತ್ತಿದ್ದ.

ತನ್ನ ಹೆಸರು ಅರುಣಾ ಎಂದು ಹೇಳಿಕೊಂಡು ಹುಡುಗಿಯರ ಜೊತೆ ಆಟವಾಡ್ತಿದ್ದ ಆತನನ್ನು  ಉಪಾಯವಾಗಿ  ಮಡಿಕೇರಿಗೆ ಕರೆಸಿಕೊಳ್ಳುವ ಪ್ಲಾನ್ ಆಗಿತ್ತು.

ಈ ವೇಳೆ ಬಸ್​ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಆತನನ್ನು ಹಿಡಿದು ಚೆನ್ನಾಗಿ ಪೂಜೆ ಮಾಡಿ ಪೊಲೀಸರಿಗೆ ಒಪ್ಪಿಸಲಾಗಿದೆ.

ಸಿಕ್ಕಿಬಿದ್ದಾಗ ನನ್ನೊಟ್ಟಿಗೆ ಮತ್ತಿಬ್ಬರು ಇದ್ದಾರೆ ಎಂದು ಆರೋಪಿ ಮಾಹಿತಿ ನೀಡಿದ್ದು, ಇವನ ಹಿಂದೆ ದೊಡ್ಡ ಜಾಲ ಇರುವ ಶಂಕೆ ವ್ಯಕ್ತವಾಗಿದೆ.

ಸದ್ಯ ಪ್ರಕರಣವನ್ನು ದಾಖಲಿಸಿಕೊಂಡಿರುವ ಮಡಿಕೇರಿ ಪೊಲಿಸರು ಪ್ರಕರಣದಲ್ಲಿ ಇನ್ನು ಯಾರಾದರೂ ಭಾಗಿಯಾಗಿದ್ದಾರಾ ಎಂಬ ಆಯಾಮದಲ್ಲಿ ತನಿಖೆ ಕೈಗೊಂಡಿದ್ದಾರೆ.

LATEST NEWS

ಮರದ ತುಂಡು ಬಿದ್ದು ಶಾಲೆಯಿಂದ ಮರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು

Published

on

ಬೆಂಗಳೂರು: ಶಾಲೆಯಿಂದ ಮನೆಗೆ ತೆರಳುತ್ತಿದ್ದ 15 ವರ್ಷದ ಬಾಲಕಿಯ ಮೇಲೆ ನಿರ್ಮಾಣ ಹಂತದ ಕಟ್ಟಡದಿಂದ ಮರದ ತುಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವಿ ಪುರಂ ಮೆಟ್ರೋ ನಿಲ್ದಾಣದ ಬಳಿ ಶನಿವಾರ ನಡೆದಿದೆ.

ತೇಜಸ್ವಿನಿ ಮೃತ ಬಾಲಕಿ. ಶನಿವಾರ ಮಧ್ಯಾಹ್ನ ಶಾಲೆಯಿಂದ ಮನೆಗೆ ತೆರಳುವ ಸಂದರ್ಭದಲ್ಲಿ ವಿವಿ ಪುರಂ ಬಳಿಯ ಮೆಟ್ರೋ ನಿಲ್ದಾಣದ ಬಳಿ ನಿರ್ಮಾಣ ಹಂತದ 4ನೇ ಮಹಡಿಯಿಂದ ಮರದ ತುಂಡೊಂದು ಏಕಾಏಕಿ ಬಾಲಕಿ ತೇಜಸ್ವಿನಿ ಮೇಲೆ ಬಿದ್ದಿದ್ದು, ಸ್ಥಳದಲ್ಲೇ ಬಾಲಕಿ ಮೃತಪಟ್ಟಿದ್ದಾಳೆ. ವಿವಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇಜಸ್ವಿನಿ ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲೂ ಪಾಲ್ಗೊಂಡಿದ್ದ ಪ್ರತಿಭಾವಂತೆ.

Continue Reading

LATEST NEWS

ಆರ್ಡರ್ ಮಾಡಿದ ಪಿಜ್ಜಾದಲ್ಲಿ ಚಾಕುವಿನ ತುಂಡು ಪತ್ತೆ.!

Published

on

ಪುಣೆ: ಪುಣೆಯ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ವ್ಯಕ್ತಿಯೊಬ್ಬ ತಾನು ಆರ್ಡರ್ ಮಾಡಿದ ಪಿಜ್ಜಾದಲ್ಲಿ ಚಾಕು ತುಂಡು ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ಸ್ಥಳೀಯರಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿಯೂ ಗಮನ ಸೆಳೆದಿದ್ದು, ದೂರುದಾರ ಅರುಣ್ ಕಾಪ್ಸೆ ಅವರು ಶುಕ್ರವಾರದಂದು ಹೆಸರಾಂತ ಕಂಪನಿಯಿಂದ ಪಿಜ್ಜಾ ಆರ್ಡರ್ ಮಾಡಿದ್ದು, ಅದಕ್ಕಾಗಿ ಆನ್‌ಲೈನ್‌ನಲ್ಲಿ 596 ರೂ. ಪಾವತಿಸಿದ್ದಾರೆ. ಅರುಣ್ ಪಿಜ್ಜಾ ತಿನ್ನುತ್ತಿದ್ದಾಗ ಇದ್ದಕ್ಕಿದ್ದಂತೆ ಬಾಯಲ್ಲಿ ಏನೋ ಗಟ್ಟಿಯಾದ ಅನುಭವವಾಯಿತು. ಇದಾದ ಬಳಿಕ ಅರುಣ್ ಅದನ್ನು ಹೊರತೆಗೆದು ನೋಡಿದಾಗ ಅದು ಚಾಕುವಿನ ತುಂಡಾಗಿದ್ದು, ಅದು ಕಟ್ಟರ್ ರೀತಿಯಲ್ಲಿತ್ತು.

ಈ ಘಟನೆಯಿಂದ ಅರುಣ್‌ಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಪಿಜ್ಜಾ ಕಂಪನಿಯ ವ್ಯವಸ್ಥಾಪಕರಿಗೆ ಮಾಹಿತಿ ನೀಡಿದ್ದಾರೆ. ಮ್ಯಾನೇಜರ್ ಮೊದಲು ಘಟನೆಯನ್ನು ನಿರಾಕರಿಸಲು ಪ್ರಯತ್ನಿಸಿದರು, ಆದರೆ ಅರುಣ್ ಚಿತ್ರವನ್ನು ಕಳುಹಿಸಿದಾಗ, ಮ್ಯಾನೇಜರ್ ತಕ್ಷಣ ಅವರ ಮನೆಗೆ ತಲುಪಿದರು. ಈ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ವ್ಯವಸ್ಥಾಪಕರು ಅರುಣ್‌ಗೆ ವಿನಂತಿಸಿದ್ದಾರೆ. ಪ್ರತಿಯಾಗಿ, ಮ್ಯಾನೇಜರ್ ಪಿಜ್ಜಾಕ್ಕಾಗಿ ಹಣವನ್ನು ಹಿಂದಿರುಗಿಸಲು ಮುಂದಾದರು ಮತ್ತು ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಲು ಪ್ರಯತ್ನಿಸಿದ್ದಾರೆ.

Continue Reading

DAKSHINA KANNADA

ಸುಳ್ಯ: ಸ್ಕೂಟಿ ಸವಾರನ ಮೇಲೆ ಕಾಡಾನೆ ದಾಳಿ; ಸಣ್ಣಪುಟ್ಟ ಗಾಯಗಳೊಂದಿಗೆ ವ್ಯಕ್ತಿ ಪಾರು

Published

on

ಸುಳ್ಯ: ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಅದೃಷ್ಟವಶಾತ್ ಸವಾರ ಪ್ರಾಣಾಪಾಯದಿಂದ ಪಾರಾದ ಘಟನೆ ದೇವರ ಕೊಲ್ಲಿಯಲ್ಲಿಯ 10ನೇ ಮೈಲಿನಲ್ಲಿ ಜ.4 ರಂದು ನಡೆದಿದೆ.

ದೇವರಕೊಲ್ಲಿಯ ಸ್ಥಳೀಯ ನಿವಾಸಿ ಮುತ್ತು ಕಾಡಾನೆ ದಾಳಿಗೊಳಗಾದ ವ್ಯಕ್ತಿ.

ಮುತ್ತು ಅವರು ಎಸ್ಟೇಟ್ ನಲ್ಲಿ ರಾತ್ರಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದು, ಬೆಳಗ್ಗೆ ಸ್ಕೂಟಿಯಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಕಾಡಾನೆಯೊಂದು ದಿಡೀರ್ ದಾಳಿ ಮಾಡಿದೆ.

ಈ ಸಂದರ್ಭ ಮುತ್ತು ಓಡಿ ತಪ್ಪಿಸಿಕೊಂಡಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆಯು ಸ್ಕೂಟಿಯನ್ನು ಜಖಂಗೊಳಿಸಿದ್ದು, ಗಾಯಳುವನ್ನು ಮಡಿಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

Continue Reading

LATEST NEWS

Trending

Exit mobile version