Tuesday, January 31, 2023

ಮಡಿಕೇರಿ: 2 ಸಾವಿರ ನಗದು ಮತ್ತು ಮದ್ಯದ ಬಾಟಲಿ ಸ್ವೀಕರಿಸುತ್ತಿದ್ದ ವೇಳೆ ಸರ್ವೇಯರ್ ಲೋಕಾಯುಕ್ತ ಬಲೆಗೆ..!

ಮಡಿಕೇರಿ : ವ್ಯಕ್ತಿಯೊಬ್ಬರಿಂದ 2 ಸಾವಿರ ರೂಪಾಯಿ ನಗದು ಮತ್ತು ಒಂದು ಬಾಟಲಿ ಮದ್ಯ ಸ್ವೀಕರಿಸುತ್ತಿದ್ದ ಸಂದರ್ಭ ಮಡಿಕೇರಿ ಸರ್ವೇ ಇಲಾಖೆ ಅಧಿಕಾರಿಯೋರ್ವ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ನಗರದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸರ್ವೇಯರ್ ಆಗಿರುವ ಮಾದಪ್ಪ ಎಂಬುವವರೇ ವಿಚಾರಣೆಗೊಳಪಟ್ಟಿರುವ ಆರೋಪಿಯಾಗಿದ್ದಾರೆ. 2 ಸಾವಿರ ನಗದು ಹಾಗೂ ಒಂದು ಮದ್ಯದ ಬಾಟಲಿಯನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ಮುಂದುವರಿದಿದೆ.

ಚೇರಂಬಾಣೆ ಬಾಡಗ ಗ್ರಾಮದ ವ್ಯಕ್ತಿಯೊಬ್ಬರು 2 ಸರ್ವೇ ನಂಬರ್ ಗಳಲ್ಲಿ ಕಾಫಿ ತೋಟ ಹೊಂದಿದ್ದು, ಮನೆ ನಿರ್ಮಿಸುವ ಸಲುವಾಗಿ ನಿವೇಶನ ಮಾಡಲು ಮುಂದಾಗಿದ್ದರು. ಈ ಸ್ಥಳದಲ್ಲಿ 3 ಬೀಟೆ ಮರಗಳಿದ್ದು, ಅದನ್ನು ತೆರವು ಮಾಡುವುದು ಮತ್ತು ನಿವೇಶನವನ್ನಾಗಿ ಪರಿವರ್ತಿಸಲು ಸ್ಥಳದ ಸರ್ವೇ ನಡೆಸಬೇಕಿತ್ತು. ಈ ಹಿನ್ನೆಲೆಯಲ್ಲಿ ಕಳೆದ 6 ತಿಂಗಳ ಹಿಂದೆ ಮಡಿಕೇರಿ ಸರ್ವೇ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಮಾತ್ರವಲ್ಲದೇ ಸರ್ವೇಗಾಗಿ ಸರಕಾರ ನಿಗದಿಪಡಿಸಿದ್ದ ಶುಲ್ಕವನ್ನೂ ಪಾವತಿ ಮಾಡಿದ್ದರು.

ಈ ವೇಳೆ ಸರ್ವೇಯರ್ ಮಾದಪ್ಪ ಅವರು ರೂ.10 ಸಾವಿರಕ್ಕೆ ಬೇಡಿಕೆ ಇಟ್ಟಿದ್ದು, ಜಾಗದ ಮಾಲೀಕರು 10 ಸಾವಿರ ರೂ. ನಗದು ನೀಡಿದ್ದರು.

ಬಳಿಕವೂ ಕೆಲಸ ನಿಧಾನಗತಿಯಲ್ಲಿ ಸಾಗಿದ್ದು ಈ ವೇಳೆ ಸರ್ವೇಯರ್ ಮಾದಪ್ಪ ಅವರನ್ನು ಸಂಪರ್ಕಿಸಿದಾಗ ಹೆಚ್ಚುವರಿ 5 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದು, ಆ ಹಣವನ್ನೂ ನೀಡಲಾಗಿತ್ತು.

ಹೀಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಕೆಲಸವಾಗಿರಲಿಲ್ಲ. ಮಾತ್ರವಲ್ಲದೇ ಹೆಚ್ಚುವರಿ 2 ಸಾವಿರ ನಗದು ಮತ್ತು 1 ಮದ್ಯದ ಬಾಟಲಿ ನೀಡುವಂತೆ ಸರ್ವೇಯರ್ ಮಾದಪ್ಪ ಅರ್ಜಿದಾರರನ್ನು ಒತ್ತಾಯಿಸಿದ್ದರು.

ಇದರಿಂದ ಮನನೊಂದ ಅರ್ಜಿದಾರರು ಲೋಕಾಯುಕ್ತಕ್ಕೆ ದೂರು ನೀಡಿದ್ದರು ಎಂದು ಆರೋಪಿಸಲಾಗಿದೆ.

ಇಂದು ಅರ್ಜಿದಾರರಿಂದ ಆರೋಪಿ ಮಾದಪ್ಪ ಅವರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ 2 ಸಾವಿರ ರೂ. ನಗದು ಮತ್ತು 1 ಮದ್ಯದ ಬಾಟಲಿಯನ್ನು ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು.

ಲೋಕಾಯುಕ್ತ ಎಸ್.ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಕೊಡಗು ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್, ವೃತ್ತನಿರೀಕ್ಷಕ ಲೋಕೇಶ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು : ಫಾರಿನ್ ಕರೆನ್ಸಿ ಕೊಡುವ ನೆಪದಲ್ಲಿ 4 ಲಕ್ಷ ಎಗರಿಸಿ  ಪರಾರಿ..!

ಮಂಗಳೂರು : ವಿದೇಶಿ ಕರೆನ್ಸಿ ಕೊಡುವ ನೆಪದಲ್ಲಿ ನಾಲ್ಕು ಲಕ್ಷ ಹಣವನ್ನು ಲಪಟಾಯಿಸಿ ವಂಚಕ ಪರಾರಿಯಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.ಸೌದಿ ಅರೇಬಿಯಾದ ಕರೆನ್ಸಿ ಕೊಡುವುದಾಗಿ ನಂಬಿಸಿ 4 ಲಕ್ಷ ರೂ. ಪಡೆದುಕೊಂಡು...

ಮಂಗಳೂರು: ಪಾಳುಬಾವಿಗೆ ಬಿದ್ದ 4 ಬೃಹತ್ ಹೆಬ್ಬಾವುಗಳ ರಕ್ಷಣೆ..!

ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ.ಮಂಗಳೂರು: ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು...

ಮಂಗಳೂರು : ಮೊಬೈಲ್ ಬಳಕೆಗೆ ಗದರಿದ ತಾಯಿ – ನೇಣಿಗೆ ಕೊರಳೊಡ್ಡಿದ ಬಾಲಕ..!

ಮಂಗಳೂರು : ಮೊಬೈಲ್ ಬಳಕೆಯ ಬಗ್ಗೆ ತಾಯಿ ಗದರಿಸಿದರು ಎಂಬ ಕಾರಣಕ್ಕೆ ಬಾಲಕ ಜೀವಾಂತ್ಯ ಮಾಡಿದ ಘಟನೆ ಮಂಗಳೂರು ನಗರದ ಕುಲಶೇಖರ ಕೋಟಿಮುರ ಅಪಾರ್ಟ್ ಒಂದಲ್ಲಿ ನಡೆದಿದೆ.ಜಗದೀಶ್ ಹಾಗೂ ವಿನಯ ದಂಪತಿಗಳ ಮಗನಾದ...