Connect with us

  LATEST NEWS

  Madikeri: ಇಲಿ ಜ್ವರಕ್ಕೆ ಯುವಕ ಬಲಿ..!

  Published

  on

  ಯುವಕನೋರ್ವ ಇಲಿ ಜ್ಚರಕ್ಕೆ ಬಲಿಯಾದ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ.

  ಮಡಿಕೇರಿ: ಯುವಕನೋರ್ವ ಇಲಿ ಜ್ಚರಕ್ಕೆ ಬಲಿಯಾದ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ.

  ಕರಿಕೆ ಸಮೀಪದ ಚೆಂಬೇರಿ ಆನೆಪಾರೆಯ ನಿವಾಸಿ ಲಿಬೀನ್ ಇಲಿ ಜ್ವರಕ್ಕೆ ಬಲಿಯಾದ ವ್ಯಕ್ತಿಯಾಗಿದ್ದಾರೆ.

  ಕೂಲಿ ಕಾರ್ಮಿಕ ಬಾಲನ್ ಅವರ ಪುತ್ರ ಲಿಬೀನ್ ಜ್ವರ ಪೀಡಿತನಾಗಿ ಕೇರಳದ ಪೆರಿಯಾರಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಜಾಂಡೀಸ್ ಕಾಯಿಲೆ ಇದೆ ಎಂದು ವೈದ್ಯರು ತಿಳಿಸಿದ್ದರು.

  ಬಳಿಕ ಇದರೊಂದಿಗೆ ಇಲಿ ಜ್ವರ ಕೂಡ ಬಾಧಿಸಿದ್ದು, ಇದೀಗ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

  ಇಲಿ ಜ್ವರದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸದ್ಯ ಘಟನೆಯಿಂದ ಗ್ರಾಮಸ್ಥರಲ್ಲಿ‌ ಆತಂಕ ಸೃಷ್ಟಿಯಾಗಿದೆ.

  ತಜ್ಞ ವೈದ್ಯರು ಹೇಳುವಂತೆ ಇದೊಂದು ರೀತಿಯ ಬ್ಯಾಕ್ಟೀರಿಯಾ ಸೋಂಕು. ಇಲಿ ಕಚ್ಚಿ ಮಾತ್ರ ಜ್ವರ ಬರಬೇಕು ಎಂದೇನಿಲ್ಲ.

  ಇಲಿಯ ಎಂಜಲು, ಮೂತ್ರ, ಮಲ ಅಥವಾ ಇಲಿಯ ದೇಹದ ಯಾವುದೇ ದ್ರವ ನಿಮ್ಮ ಚರ್ಮಕ್ಕೆ ತಾಗಿದರೆ ನಿಮಗೆ ಸೋಂಕು ಉಂಟಾಗಬಹುದು.

  ಇದರ ಜೊತೆಗೆ ಇಲ್ಲಿಯ ಬಾಯಿಂದ, ಕಣ್ಣಿನಿಂದ ಅಥವಾ ಮೂಗಿನಿಂದ ಬರುವಂತಹ ದ್ರವಗಳು ಕೂಡ ಹಾನಿಕಾರಕವಾಗಬಹುದು.

  ಕೆಲವರಿಗೆ ಇಲಿಗಳು ಉಗುರುನಿಂದ ಪರಚಿ ಹೋದರೆ ಅಥವಾ ಹಲ್ಲಿನಿಂದ ಸಣ್ಣದಾಗಿ ಕಚ್ಚಿದರೆ ಕೂಡ ಜ್ವರ ಬರಬಹುದು.

  ಇಲಿ, ಹಸು, ನಾಯಿ, ಹಂದಿ ಮೂಲಕವೂ ಇಲಿ ಜ್ವರ ಹಬ್ಬುತ್ತದೆ.

  ಪರಿಸರ ನೈರ್ಮಲ್ಯದ ಕೊರತೆ, ನೆರೆಹಾವಳಿ ಇಲಿ ಜ್ವರ ಹರಡಲು ಮುಖ್ಯ ಕಾರಣವಾಗಿದೆ.

  ರೋಗಾಣು ಪ್ರವೇಶಿಸಿದ 2 ರಿಂದ 25 ದಿನಗಳಲ್ಲಿ ತೀವ್ರತರದ ಜ್ವರ ಕಾಡುತ್ತದೆ.

  ಮೈ-ಕೈ ನೋವು, ತಲೆನೋವು , ಕೆಲವೊಮ್ಮೆ ವಾಂತಿ ಹೊಟ್ಟೆ ನೋವು ಬರುವುದು, ಇಲಿ ಜ್ವರದ ಲಕ್ಷಣವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

  Click to comment

  Leave a Reply

  Your email address will not be published. Required fields are marked *

  DAKSHINA KANNADA

  ಕಂಬಳ ಕ್ಷೇತ್ರದಲ್ಲಿ ಹಲವು ಮೆಡಲ್‌ಗಳನ್ನು ಗಳಿಸಿದ “ಲಕ್ಕಿ” ಇನ್ನಿಲ್ಲ..

  Published

  on

  ಕಿನ್ನಿಗೋಳಿ: ಕಂಬಳ ಕ್ಷೇತ್ರದ ಸಾಧಕ, ಹಲವಾರು ಮೆಡಲ್ ಗಳನ್ನು ತನ್ನದಾಗಿಸಿದ ಕೋಣ  ಲಕ್ಕಿ ಸಾವನ್ನಪ್ಪಿದೆ. ಐಕಳ ದಿವಾಕರ ಚೌಟ ಮಾಲಕತ್ವದ ಕೋಣ ಲಕ್ಕಿ ಕಳೆದ ಏಳೆಂಟು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳವಾರ(ಜು.16) ಕಾರ್ಕಳದಲ್ಲಿ ಲಕ್ಕಿಗೆ ಅಪರೇಷನ್ ಕೂಡ ನಡೆದಿತ್ತು.

  ಮಳೆ ಸೃಷ್ಟಿಸಿದ ಅವಾಂತರ.. ಲಾರಿ ಏರಿ ಜಿಲ್ಲಾಧಿಕಾರಿ ಪ್ರಯಾಣ..!!

  ಖ್ಯಾತ ವೈದ್ಯ ವಾಸುದೇವ ಪೈ ಅಪರೇಷನ್ ನಡೆಸಿದ್ದು, ಮತ್ತೆ ಇಂದು ಚಿಕಿತ್ಸೆಗಾಗಿ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ. ವೈದ್ಯರನ್ನು ನೋಡಿದ ಲಕ್ಕಿ ಹೆದರಿ ಅತ್ತಿಂದಿತ್ತ ಓಡತೊಡಗಿತ್ತು. ಲಕ್ಕಿಯ ಮಾಲಕರು ಮತ್ತು ಒಡನಾಡಿಗಳಿಗೂ ನಿಯಂತ್ರಣಕ್ಕೆ ಸಿಗದಾಯಿತು. ಕೊನೆಗೆ ಮರಕ್ಕೆ ಕಟ್ಟಿ ಹಾಕಿದ್ದು ಸ್ವಲ್ಪ ಹೊತ್ತಿನಲ್ಲೇ ಅಸು ನೀಗಿದೆ. ಲಕ್ಕಿ ಒಬ್ಬಂಟಿ ಕೋಣವಾಗಿದ್ದು ಕಂಬಳ ಸಂದರ್ಭ ಅದಕ್ಕೆ ಸರಿಯಾದ ಜೊತೆ ಹುಡುಕಿ ಕಂಬಳದಲ್ಲಿ ಓಡಿಸಲಾಗುತ್ತಿತ್ತು. ಈ ಬಾರಿ 5 ಮತ್ತು ಕಳೆದ ವರ್ಷ 5 ಮೆಡಲ್ ಗಳನ್ನು ತನ್ನದಾಗಿಸಿದ್ದ ಲಕ್ಕಿ ಹಲವಾರು ಮೆಡಲ್ ಗಳನ್ನು ಪಡೆದುಕೊಂಡಿತ್ತು.

  Continue Reading

  LATEST NEWS

  ಮಳೆ ಸೃಷ್ಟಿಸಿದ ಅವಾಂತರ.. ಲಾರಿ ಏರಿ ಜಿಲ್ಲಾಧಿಕಾರಿ ಪ್ರಯಾಣ..!!

  Published

  on

  ಉತ್ತರ ಕನ್ನಡ/ಮಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಅಂಕೋಲ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತವಾಗಿತ್ತು. ಆರು ಜನರನ್ನು ಬಲಿ ತೆಗೆದುಕೊಂಡಿದ್ದ ಗುಡ್ಡ ಕುಸಿತದ ಜಾಗಕ್ಕೆ ರಕ್ಷಣಾ ತಂಡ ತಲುಪಲು ಕೂಡಾ ಸಾಧ್ಯವಾಗದ ರೀತಿಯಲ್ಲಿ ಮಳೆ ಸುರಿದಿತ್ತು. ರಸ್ತೆಯಲ್ಲಿ ನೀರು ತುಂಬಿದ್ದ ಕಾರಣ ಸಣ್ಣ ವಾಹನಗಳು ರಸ್ತೆಯಲ್ಲಿ ಸಂಚರಿಸಲು ಅಸಾಧ್ಯವಾಗಿ ರಸ್ತೆಯಲ್ಲೇ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿತ್ತು.

  ದೇವಸ್ಥಾನದಲ್ಲಿ ಜಾರಿ ಬಿದ್ದ ಹೆಚ್.ಡಿ ರೇವಣ್ಣ..!

  ಈ ಸಂದರ್ಭದಲ್ಲಿ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ , ಜಿಲ್ಲಾ ಪಂಚಾಯತ್ ಸಿಸಿಒ ಈಶ್ವರ್‌ ಕಾಂದೂ ಹಾಗೂ ಎಸ್‌ಪಿ ಎಂ ನಾರಾಯಣ್ ಅವರು ಲಾರಿಯಲ್ಲಿ ಪ್ರಯಾಣಿಸಿ ಘಟನಾ ಸ್ಥಳವನ್ನು ತಲುಪಿದ್ದಾರೆ. ಶಿರೂರು ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಐದು ಜನ ಮಣ್ಣಿನ ಅಡಿಯಲ್ಲಿ ಸಿಲುಕಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಎರಡು ಗ್ಯಾಸ್‌ ಟ್ಯಾಂಕರ್‌ಗಳು, ಮೂರು ಮನೆ ಮತ್ತು ಒಂದು ಕಾರು ಮಣ್ಣಿನೊಂದಿಗೆ ಕೊಚ್ಚಿ ಹೋಗಿ ನದಿ ಪಾಲಾಗಿತ್ತು. ಘೋರ ದುರಂತ ನಡೆದ ಸ್ಥಳಕ್ಕೆ ತೆರಳುತ್ತಿದ್ದ ಅಧಿಕಾರಿಗಳ ವಾಹನಗಳೂ ಕೂಡಾ ರಸ್ತೆಯಲ್ಲಿ ಹರಿಯುತ್ತಿದ್ದ ನೀರಿನಲ್ಲಿ ಸಂಚರಿಸಲು ಆಗದೆ ನಿಂತಿತ್ತು. ಈ ವೇಳೆ ದುರ್ಘಟನೆ ನಡೆದ ಸ್ಥಳಕ್ಕೆ ತೆರಳಲು ಅಧಿಕಾರಿಗಳು ಲಾರಿಯೊಂದರ ಸಹಾಯ ಪಡೆದುಕೊಂಡಿದ್ದಾರೆ.

  Continue Reading

  FILM

  ‘ಬಿಗ್ ಬಾಸ್ ಕನ್ನಡ ಸೀಸನ್ 11′ ಶುರು ಆಗೋದು ಯಾವಾಗ? ಸ್ಪರ್ಧಿಗಳು ಇವರೇನಾ?

  Published

  on

  ‘ಬಿಗ್ ಬಾಸ್ ಕನ್ನಡ ಸೀಸನ್ 10’ ಯಶಸ್ವಿಯಾಗಿ ಮುಗಿದಿದೆ. ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶುರುವಾಗುವ ಸಮಯ ಹತ್ತಿರ ಬಂದಿದೆ. ಹೌದು, ಅಕ್ಟೋಬರ್ 3ನೇ ವಾರದಿಂದ ಹೊಸ ಸೀಸನ್ ಆರಂಭವಾಗಲಿದೆಯಂತೆ.

  ತಯಾರಿ ಶುರು ಆಗಿದೆ!

  ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋ ಅಕ್ಟೋಬರ್‌ನಲ್ಲಿ ಆರಂಭವಾಗುವುದು ಎಂಬ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ವಾಹಿನಿ ಯಾವುದೇ ಅಧಿಕೃತ ಮಾಹಿತಿ ಕೊಟ್ಟಿಲ್ಲ. ಹಾಗೆಯೇ ಒಂದಷ್ಟು ಸ್ಪರ್ಧಿಗಳ ಹೆಸರು ಕೂಡ ಕೇಳಿ ಬರುತ್ತಿದೆ. ಈಗಾಗಲೇ ವಾಹಿನಿಯು ಇದಕ್ಕೆ ಸಂಬಂಧಪಟ್ಟಂತೆ ತಯಾರಿಯನ್ನು ಶುರು ಮಾಡಿದೆ. ಈ ಮನೆಗೋಸ್ಕರ 300 ಜನರು ಕೆಲಸ ಮಾಡುತ್ತಿರುತ್ತಾರೆ. ದೊಡ್ಡ ಮನೆ, ಅದಕ್ಕೆ ಬೇಕಾದ ಸಾಮಗ್ರಿಗಳು, ಸ್ಪರ್ಧಿಗಳಿಗೋಸ್ಕರ ವ್ಯವಸ್ಥೆ ಹೀಗೆ ದೊಡ್ಡ ಮಟ್ಟದಲ್ಲಿ ತಯಾರಿ ಮಾಡಲು ತಿಂಗಳಾನುಗಟ್ಟಲೇ ಸಮಯ ಬೇಕು.

  ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ

  ಸ್ಪರ್ಧಿಗಳ ಆಯ್ಕೆ ಮಾಡೋದು ಕೂಡ ದೊಡ್ಡ ಟಾಸ್ಕ್. ಇಲ್ಲಿ ವಿಭಿನ್ನ ಕಾರ್ಯಕ್ಷೇತ್ರಗಳಿಂದ ಬರುವ ಸ್ಪರ್ಧಿಗಳ ಹೊರತಾಗಿ, ವಿಭಿನ್ನ ಮನಸ್ಥಿತಿಯುಳ್ಳವರು ಬೇಕು. ಹಾಗಾಗಿ ಸ್ಪರ್ಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯೇ ದೊಡ್ಡದು ಎನ್ನಬಹುದು.

  ಸ್ಪರ್ಧಿಗಳು ಯಾರು ಯಾರು?

  ‘ಬೃಂದಾವನ’ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ‘ತುಕಾಲಿ ಸ್ಟಾರ್’ ಸಂತು ಪತ್ನಿ ಮಾನಸಾ, ‘ಮಜಾಭಾರತ’ ಖ್ಯಾತಿಯ ರಾಘವೇಂದ್ರ, ಸುನೀಲ್ ರಾವ್, ಭವ್ಯಾ ಗೌಡ, ಮೋಕ್ಷಿತಾ ಪೈ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ. ‘ಬಿಗ್ ಬಾಸ್’ ಮನೆಗೆ ಹೋಗುವವರು ಯಾರೂ ಕೂಡ ತಾವು ದೊಡ್ಮನೆಗೆ ಹೋಗ್ತೀವಿ ಅಂತ ಹೇಳೋದಿಲ್ಲ. ‘ಬಿಗ್ ಬಾಸ್’ ಪ್ರಸಾರ ಆದಮೇಲೆ ಯಾರು ಸ್ಪರ್ಧಿಗಳು ಎನ್ನೋದು ಗೊತ್ತಾಗುವುದು.

  Continue Reading

  LATEST NEWS

  Trending