Friday, July 1, 2022

ವಿಧಾನಸಭೆ ವಿಸರ್ಜನೆಯತ್ತ “ಮಹಾ” ರಾಜಕೀಯ..!

ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಸರಕಾರದಲ್ಲಿ ಶಿವಸೇನೆಯ ಶಾಸಕರು ಬಂಡಾಯವೆದ್ದಿದ್ದು, ಸರ್ಕಾರ ಪತನವಾಗುವ ಲಕ್ಷಣ ಏರ್ಪಟ್ಟಿದೆ.

ಇದರ ಬೆನ್ನಲ್ಲೇ ಶಿವಸೇನೆ ಸಂಸದ ಸಂಜಯ್‌ ರಾವತ್‌ ‘ವಿಧಾನಸಭೆಯ ವಿಸರ್ಜನೆಯತ್ತ ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಪಯಣ’ ಎಂದು ಮರಾಠಿಯಲ್ಲಿ ಒಂದೇ ಸಾಲಿನಲ್ಲಿ ಟ್ವೀಟ್ ಮಾಡುವ ಮೂಲಕ ಸರ್ಕಾರ ಪತನದ ಸುಳಿವು ನೀಡಿದ್ದಾರೆ.


ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾವುತ್, ಬಂಡಾಯ ಶಾಸಕರ ಜತೆ ಮಾತುಕತೆ ನಡೆಯುತ್ತಿದ್ದು, ಅವರೆಲ್ಲ ಶಿವಸೇನಾದಲ್ಲೇ ಇರಲಿದ್ದಾರೆ ಎಂದು ಹೇಳಿದ್ದರು. ನಮ್ಮ ಪಕ್ಷವು ಹೋರಾಟದ ಹಿನ್ನೆಲೆಯಲ್ಲಿ ರಚನೆಯಾಗಿದೆ.

ನಾವು ಸತತ ಹೋರಾಟ ಮಾಡಲಿದ್ದೇವೆ. ಹೆಚ್ಚೆಂದರೆ ಅಧಿಕಾರ ಕಳೆದುಕೊಳ್ಳಬಹುದು. ಆದರೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಏಕನಾಥ್ ಶಿಂಧೆ ನಮ್ಮ ಪಕ್ಷದ ಅತಿ ಹಳೆಯ ಸದಸ್ಯ. ಅವರು ನಮ್ಮ ಸ್ನೇಹಿತರು.

ನಾವು ದಶಕಗಳಿಂದ ಜತೆಯಾಗಿ ಕೆಲಸ ಮಾಡಿದ್ದೇವೆ. ಅಷ್ಟು ಸುಲಭವಾಗಿ ಬೇರೆಯಾಗುವುದು ಅವರಿಗೂ ನಮಗೂ ಸುಲಭವಲ್ಲ. ಅವರ ಜತೆ ಇಂದು ಬೆಳಿಗ್ಗೆ ಸುಮಾರು ಒಂದು ಗಂಟೆ ಮಾತುಕತೆ ನಡೆಸಿದ್ದೇನೆ. ಪಕ್ಷದ ಅಧ್ಯಕ್ಷರಿಗೂ ಈ ಬಗ್ಗೆ ತಿಳಿಸಲಾಗಿದೆ ಎಂದು ರಾವುತ್ ತಿಳಿಸಿದ್ದಾರೆ.

ಈ ಮಧ್ಯೆ, ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ನಿವಾಸಕ್ಕೆ ಮಹಾರಾಷ್ಟ್ರ ಸಚಿವ ಬಾಳಾಸಾಹೇಬ್ ಪಾಟೀಲ್ ಭೇಟಿ ನೀಡಿದ್ದಾರೆ.
ಈಗಾಗಲೇ ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆದಿದ್ದು, ಇಂದು ಮಧ್ಯಾಹ್ನ ಸಿಎಂ ಠಾಕ್ರೆ ಅವರು ರಾಜ್ಯ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸಚಿವ ಏಕನಾಥ್ ಶಿಂಧೆ ಅವರು ತಮಗೆ 40 ಶಾಸಕರ ಬೆಂಬಲ ಇದೆ ಎಂದು ತಿಳಿಸಿದ್ದಾರೆ. ಸೂರತ್‌ನಿಂದ ಶಿಂಧೆ ಮತ್ತು ಬೆಂಬಲಿಗ ಶಾಸಕರು, ಚಾರ್ಟರ್ಡ್ ವಿಮಾನದಲ್ಲಿ ಗುವಾಹಟಿಗೆ ತೆರಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಬೀದಿ ಬದಿ ಅಂಗಡಿ ತೆರವು ಪ್ರಕರಣದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್‌ ವ್ಯಾಪ್ತಿಯ ಪಾರ್ಪಿಕಲ್‌ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ...

ಬಂಟ್ವಾಳ: ರಸ್ತೆ ಬದಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ಬದಿಯಲ್ಲಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದಲ್ಲದೆ ಅರ್ಧ ತಾಸಿಗಿಂತಲೂ ಹೆಚ್ಚು ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ನಾವೂರ,...

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...