Sunday, November 27, 2022

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು ಸಹಸ್ರಾರು ಮಂದಿ ಭಕ್ತಾದಿಗಳು ಭಕ್ತಿ ಭಾವಪರವಶರಾಗಿ ಕಣ್ತುಂಬಿಕೊಂಡರು.

ವಾದ್ಯ ಬ್ಯಾಂಡು ಚೆಂಡೆ ಜಾಗಟೆಗಳ ವೈಭವದೊಂದಿಗೆ ನಡೆದ ಮಹಾಪೂಜೆಯ ಬಳಿಕ ಮೂಡೆ ಪ್ರಸಾದ ವಿತರಿಸಲಾಯಿತು. ಸಾವಿರದ ನಾಲ್ಕು ನೂರಕ್ಕೂ ಹೆಚ್ಚು ವಾಹನ ಪೂಜೆ ನಡೆಯಿತು.

ಭೋಜನ ಶಾಲೆಯಲ್ಲಿ ಮಧ್ಯಾಹ್ನ 10 ಸಾವಿರ ಹೆಚ್ಚು ಮಂದಿ ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದ್ದು, ರಾತ್ರಿ ಕೂಡ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನ್ನ ಪ್ರಸಾದ ಸೇವೆಯನ್ನು ಏರ್ಪಾಟು ಮಾಡಲಾಗಿತ್ತು. ರಾತ್ರಿ ಊಟಕ್ಕೆ ಭಕ್ತರಿಗಾಗಿ 3 ಕ್ವಿಂಟಾಲ್ ಅಕ್ಕಿ ಮತ್ತು 1.50 ಕ್ವಿಂಟಾಲ್ ಉದ್ದು ಹಿಟ್ಟುನಿಂದ ಕಡುಬು ತಯಾರು ಮಾಡಲಾಗಿತ್ತು.

ಇನ್ನು ರಂಗಪೂಜೆಯ ಸಂದರ್ಭದಲ್ಲಿ ಉಡುಪಿ ಕಾಣಿಯೂರು ಮಠದ ಶ್ರೀಗಳು, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್ ಕಟೀಲು ಸಹಿತ ಹಲವು ಮಂದಿ ಗಣ್ಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

Hot Topics

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...

ಕುಕ್ಕೆ ಕ್ಷೇತ್ರದಲ್ಲಿ 116 ಮಂದಿ ಭಕ್ತರಿಂದ ಎಡೆಮಡೆ ಸ್ನಾನ..

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116 ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು.ದೇವರ ನೈವೇದ್ಯದ ಮೇಲೆ...

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...