Home ಮಂಗಳೂರು ಕೊಂಚಾಡಿ ಕಾಶೀ ಮಠದಲ್ಲಿ ಮಹಾ ವಿಷ್ಣು ಯಾಗ ಸಮಾಪನ

ಕೊಂಚಾಡಿ ಕಾಶೀ ಮಠದಲ್ಲಿ ಮಹಾ ವಿಷ್ಣು ಯಾಗ ಸಮಾಪನ

ಕೊಂಚಾಡಿ ಕಾಶೀ ಮಠದಲ್ಲಿ ಮಹಾ ವಿಷ್ಣು ಯಾಗ ಸಮಾಪನ 

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು : ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ ಮೂರು ದಿನಗಳ ಪರ್ಯಂತ ಲೋಕ ಕಲ್ಯಾಣಾರ್ಥವಾಗಿ ನಡೆದ ಶ್ರೀ ಮಹಾ ವಿಷ್ಣು ಯಾಗ ಇಂದು ಸಮಾಪನಗೊಂಡಿತು.

ಕೊಂಚಾಡಿ ಶ್ರೀ ಕಾಶೀಮಠದಲ್ಲಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಬುಧವಾರ ಸಮಾಪನಗೊಂಡಿದ್ದು ಶ್ರೀ ಮಹಾ ವಿಷ್ಣು ಯಾಗ ಯಜ್ಞ ಮಂಟಪದಲ್ಲಿ ಶ್ರೀಗಳವರ ದಿವ್ಯ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ನಡೆಯಿತು.

ಪ್ರಾರಂಭದಲ್ಲಿ ವೈದಿಕರಿಂದ ಪೂಜಾ ವಿಧಿ ವಿಧಾನದೊಂದಿಗೆ ಆರಂಭಗೊಂಡು ಬಳಿಕ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರನ್ನು ಸಕಲ ಬಿರುದು ಬಾವಳಿ ಗಳಿಂದ ಯಜ್ಞ ಮಂಟಪಕ್ಕೆ ಕರೆತರಲಾಯಿತು.

ಮಧ್ಯಾಹ್ನ ಮಹಾ ಪೂರ್ಣ ಆಹುತಿ ಬಳಿಕ ಸಮಾರಾಧನೆ ನಡೆಯಿತು . ರಾತ್ರಿ ಉತ್ಸವ ಶ್ರೀಗಳವರ ಉಪಸ್ಥಿತಿಯಲ್ಲಿ ಸಾವಿರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು .

ಈ ಸಂದರ್ಭದಲ್ಲಿ ಶ್ರೀ ಮಹಾಲಸಾ ನಾರಾಯಣಿ ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ಕಸ್ತೂರಿ ಸದಾಶಿವ ಪೈ , ಎಂ . ಸುರೇಶ್ ಕಾಮತ್ , ಎಚ್ . ಗೋಕುಲದಾಸ್ ನಾಯಕ್ ,ಉರ್ವಿ ರಾಧಾಕೃಷ್ಣ ಶೆಣೈ , ಮಾರೂರ್ ಶಶಿಧರ್ ಪೈ , ಕೆ . ಅಚ್ಚುತ್ ಪೈ . ಎಂ . ವಿಜಯ್ ಪೈ , ಶ್ರೀ ವೆಂಕಟರಮಣ ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ಡಿ . ವಾಸುದೇವ್ ಕಾಮತ್ , ಅರುಣ್ ಕಾಮತ್ ,ಜಿ . ರತ್ನಕರ್ ಕಾಮತ್ , ದೀಪಕ್ ಕುಡ್ವ ,ಡಿ . ವೇದವ್ಯಾಸ್ ಕಾಮತ್ , ಅನಿಲ್ ಕಾಮತ್, ಗಣೇಶ್ ಬಾಳಿಗಾ , ಗುರುಪ್ರಸಾದ್ ಕಾಮತ್ , ಪ್ರಶಾಂತ್ ಪೈ ದೀಪಕ್ಚಂದ್ರ ಬಾಳಿಗಾ , ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು .

- Advertisment -

RECENT NEWS

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ...

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...

ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ: ಸಂಸದೆ ಶೋಭಾ ಗಂಭೀರ ಆರೋಪ..!

ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು...