Connect with us

DAKSHINA KANNADA

ರಾಷ್ಟ್ರ ಧ್ವಜ ಹಿಡಿದು ಧ್ವಜ ವಂದನೆಗೈದ ಕಟೀಲು ದೇವಾಲಯದ ಮಹಾಲಕ್ಷ್ಮಿ ಆನೆ

Published

on

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಳದ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಳದ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ನಿವೃತ್ತ ಸೈನಿಕರಾದ ಲಕ್ಷ್ಮೀನಾರಾಯಣ ರಾವ್ ಧ್ವಜಾರೋಹಣಗೈದರು.

ನಿವೃತ್ತ ಸೈನಿಕರಾದ ನವಾನಂದ ಎಕ್ಕಾರು ದಿಕ್ಸೂಚಿ ಮಾತುಗಳನ್ನಾಡಿದರು. ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರು, ಅರ್ಚಕರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಇನ್ನು ಈ ಹಿಂದೆ ಪುಟ್ ಬಾಲ್ ಆಡಿ, ಕ್ರಿಕೇಟ್ ಆಡಿ, ತಾನೇ ನೀರಿನ ಪೈಪ್ ಹಿಡಿದು ಸ್ಥಾನ ಮಾಡಿದ ದೇವಳದ ಆನೆ ಮಹಾಲಕ್ಷೀ ರಾಷ್ಟ್ರ ಧ್ವಜವನ್ನು ಹಿಡಿದು ಭಾಗವಹಿಸಿದ್ದು ಮಾತ್ರವಲ್ಲದೆ, ಧ್ವಜ ವಂದನೆ ಗೈದಿರುದು ವಿಶೇಷವಾಗಿತ್ತು.

ಕಟೀಲು ದೇವರಿಗೂ ಕೇಸರಿ ಬಿಳಿ ಹಸುರು, ಬಣ್ಣದ ಹೂವುಗಳಿಂದ ವಿಶೇಷ ವಾಗಿ ಅಲಂಕಾರ ಮಾಡಲಾಗಿದ್ದು ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಗಮನ ಸೆಳೆಯಿತು.

Click to comment

Leave a Reply

Your email address will not be published. Required fields are marked *

DAKSHINA KANNADA

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ಎರಡನೇ ಸ್ಥಾನ

Published

on

ಮಂಗಳೂರು:  2023- 24ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.  ಈ ಪೈಕಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಹಾಜರಾಗಿದ್ದರು. 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.

ಇದೀಗ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು ಉಡುಪಿ ಜಿಲ್ಲೆ  ಶೇಕಡಾ 94 ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇ. 92.12 ಫಲಿತಾಂಶದೊಂದಿಗೆ ಎರಡನೇ ಸ್ಥಾನ ಹೊಂದಿದೆ. ಶಿವಮೊಗ್ಗ ಶೇ.88.67 ಫಲಿತಾಂಶದಿಂದ  ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ.

ರಾಜ್ಯಕ್ಕೆ ಬಾಗಲಕೋಟೆ ಮುಧೋಳಿನ ಅಂಕಿತಾ 625 ಅಂಕ ಪಡೆದು ಪ್ರಥಮ ಸ್ಥಾನ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ. ದಕ್ಷಿಣ ಕನ್ನಡ ಚಿನ್ಮಯ್ 624 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಮುಂದೆ ಓದಿ..; ಮಂಗಳೂರು: ಸರಕಾರಿ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!!

ವಿದ್ಯಾರ್ಥಿಗಳು ಫಲಿತಾಂಶವನ್ನು ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸ ಬಹುದು. kseab.karnataka.gov.in ಅಥವಾ karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸ ಬಹುದಾಗಿದೆ.

Continue Reading

DAKSHINA KANNADA

ಮಂಗಳೂರು: ಸರಕಾರಿ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!!

Published

on

ಮಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿ ನಿತೇಶ್ ರಾವ್(20 ವ) ಎಂಬವರು ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಮೇ.8ರಂದು ಬೆಳಿಗ್ಗೆ 10.30ರ ಸುಮಾರಿಗೆ ನಡೆದಿದೆ. ನಗರದ ಬೀಬಿ ಅಲಾಬಿ ರಸ್ತೆಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿದ್ದ ನಿತೇಶ್ 2ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.

suicide

ಮುಂದೆ ಓದಿ..; PUTTUR : ಮದುವೆ ಸಮಾರಂಭದಲ್ಲಿ ಹುಡುಗಿಯರ ಫೋಟೋ ತೆಗೆದವರಿಗೆ ಬಿತ್ತು ಧರ್ಮದೇಟು!

ಇವರು ಉಡುಪಿ ಜಿಲ್ಲೆಯ ನಿವಾಸಿಯಾಗಿದ್ದು, ಕಳೆದ 2 ವರ್ಷಗಳಿಂದ ಮಂಗಳೂರು ನಗರದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೃತರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಅವರ ತಂದೆ ಸುಮಾರು 5 ವರ್ಷಗಳ ಹಿಂದೆ ನಿಧನರಾಗಿದ್ದಾರೆ. ಈ ಬಗ್ಗೆ ಆಕೆಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

DAKSHINA KANNADA

PUTTUR : ಮದುವೆ ಸಮಾರಂಭದಲ್ಲಿ ಹುಡುಗಿಯರ ಫೋಟೋ ತೆಗೆದವರಿಗೆ ಬಿತ್ತು ಧರ್ಮದೇಟು!

Published

on

ಪುತ್ತೂರು : ಮದುವೆ ಸಮಾರಂಭಕ್ಕೆ ಕರೆಯೋಲೆ ಇಲ್ಲದೇ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಈ ರೀತಿ ಬೇಡದ ಕೆಲಸ ಮಾಡಿದವರು ಸಿಕ್ಕಾಗ ಜನ ಸುಮ್ಮನೆ ಬಿಟ್ಟಾರಾ..ಅವರಿಗೆ ಧರ್ಮದೇಟು ನೀಡಿದ್ದಾರೆ. ಈ ಬಗ್ಗೆ ಸಂತ್ರಸ್ತ ಮಹಿಳೆಯೊಬ್ಬರ ಫೇಸ್‌ಬುಕ್‌ ಪೋಸ್ಟ್‌ ವೈರಲ್‌ ಆಗಿದೆ. ಪುತ್ತೂರು ಕಾವು ದೇವಸ್ಥಾನವೊಂದರ ಸಭಾಭವನದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸಂಬಂಧವೇ ಇಲ್ಲದ ಅಪರಿಚಿತ ವ್ಯಕ್ತಿ ಗಳಿಬ್ಬರು ಬಂದು ಹುಡುಗಿಯರ ಫೋಟೋ ತೆಗೆಯುತ್ತಿದ್ದರು.

ಇದನ್ನೂ ಓದಿ : ಪ್ರತಿಷ್ಟಿತ ಮೆಟ್ ಗಾಲ ಸಮಾರಂಭದಲ್ಲಿ ಮಿಂಚಿದ ಆಲಿಯಾ ಭಟ್; ಆಲಿಯಾ ವಿಶಿಷ್ಟ ಉಡುಗೆಗೆ ಬೆರಗಾದ್ರು ಫ್ಯಾನ್ಸ್

ಇದನ್ನು ಗಮನಿಸಿದ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯೊಬ್ಬರ ಮೊಬೈಲ್‌ ಕಸಿದುಕೊಂಡಿದ್ದಾರೆ. ಪರಿಶೀಲಿಸಿದಾಗ ಗ್ಯಾಲರಿಯಲ್ಲಿ ನೂರಾರು ಹುಡುಗಿಯರ ಪೋಟೋ ಇರುವುದು ಬೆಳಕಿಗೆ ಬಂದಿದೆ. ಈ ಕುರಿತು ನೆರೆದಿದ್ದವರು ವಿಚಾರಿಸಿದಾಗ ಸಂಪ್ರದಾಯಸ್ಥರೊಬ್ಬರ ಪುತ್ರ ಹೇಳಿದ್ದಕ್ಕಾಗಿ ಫೋಟೋ ಕ್ಲಿಕ್ಕಿಸಿದ್ದೇವೆ ಎಂದು ಹೇಳಿದ್ದಾರೆ. ಬಳಿಕ ಏಟು ತಿಂದವರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

 

Continue Reading

LATEST NEWS

Trending