LATEST NEWS
Maharashtra:100 ಅಡಿ ಎತ್ತರದಿಂದ ಕ್ರೇನ್ ಕುಸಿದು 16 ಕಾರ್ಮಿಕರ ಸಾವು- ನಾಲ್ವರಿಗೆ ಗಂಭೀರ ಗಾಯ..!
ಸೇತುವೆ ನಿರ್ಮಾಣವಾಗುತ್ತಿದ್ದ ವೇಳೆ ಕ್ರೇನ್ ಕುಸಿದು 16 ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಜು.31ರಂದು ನಡೆದಿದೆ.
ಮಹಾರಾಷ್ಟ್ರ: ಸೇತುವೆ ನಿರ್ಮಾಣವಾಗುತ್ತಿದ್ದ ವೇಳೆ ಕ್ರೇನ್ ಕುಸಿದು 16 ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಜು.31ರಂದು ನಡೆದಿದೆ.
ಥಾಣೆ ಜಿಲ್ಲೆಯ ಸಮೃದ್ಧಿ ಎಕ್ಸ್ಪ್ರೆಸ್ವೇನಲ್ಲಿ ಸೇತುವೆ ನಿರ್ಮಾಣ ಮಾಡುತ್ತಿದ್ದ ವೇಳೆ 100 ಅಡಿ ಎತ್ತರದಿಂದ ಕಾರ್ಮಿಕರ ಮೇಲೆ ಕ್ರೇನ್ ಕುಸಿದು ಬಿದ್ದಿದೆ.
ಪರಿಣಾಮ 16 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಳಿಕ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಇತರ ತುರ್ತು ಸೇವೆಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಸಿದಿರುವ ಅವಶೇಷಗಳ ನಡುವೆಯೇ ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
#WATCH | Maharashtra: Rescue and search operation underway by NDRF after a girder machine collapsed in Thane's Shahapur
A total of 15 bodies have been recovered so far and three injured reported: NDRF pic.twitter.com/fCeBkk4OZ0
— ANI (@ANI) August 1, 2023
DAKSHINA KANNADA
ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!
ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.
ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಬೈಕ್ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.
ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.
ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.
ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.
‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು ಮನವಿ ಮಾಡಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
- DAKSHINA KANNADA6 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS6 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA7 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA6 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!