Connect with us

LATEST NEWS

ಮಹಾರಾಪ್ಟ್ರ ಡಿಸಿಎಂ ಫಡ್ನವಿಸ್ ರಿಂದ ಐಕಳದವರಿಗೆ ಪಟ್ಲ ಸನ್ಮಾನ..!

Published

on

ಮುಂಬೈ :  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ,ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಸಂಚಾಲಕ ಐಕಳ ಹರೀಶ್ ಶೆಟ್ಟಿ ಅವರನ್ನು ಮಹಾರಾಪ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮುಂಬೈ ಬಂಟರ ಸಂಘದಲ್ಲಿ ನಡೆದ ವಿಶ್ವ ಬಂಟರ ಸಮ್ಮಿಲನ2022 ರಲ್ಲಿ ಪಟ್ಲ ಟ್ರಸ್ಟ್ ಪರವಾಗಿ ಸನ್ಮಾನಿಸಿದರು.

ಒಕ್ಕೂಟದ ಅಧ್ಯಕ್ಷರಾಗಿ ಪುನರಾಯ್ಕೆ ಯಾದ ಐಕಳ ಅವರ ಸಾಧನೆಯನ್ನು ಹಾಗೂ ಪಟ್ಲ ಟ್ರಸ್ಟ್ ಗೆ ಆರಂಭಿಕ ದಿನದಿಂದಲೂ ಅವರು ನೀಡುತ್ತಿರುವ ಸಹಕಾರ ,ಮಾರ್ಗದರ್ಶನ ವನ್ನು ನೆನಪಿಸಿ ” ದೇಶಕೊಬ್ಬ ನರೇಂದ್ರ,ಮಹಾರಾಷ್ಟ್ರಕ್ಕೊಬ್ಬ ದೇವೇಂದ್ರ ,ಬಂಟ ಕುಲಕ್ಕೊಬ್ಬ ಸಾರ್ವಭೌಮ …” ಎಂದು ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ಅಭಿನಂದಿಸಿದರು.

ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ,ಗೌರವಾಧ್ಯಕ್ಷ ಕುಳೂರು ಕನ್ಯಾನ ಸದಾಶಿವ ಶೆಟ್ಟಿ , ಉಪಾಧ್ಯಕ್ಷ ಪೆರ್ಮುದೆ ಅಶೋಕ ಶೆಟ್ಟಿ , ಕೇಂದ್ರಸಮಿತಿಯ ಪ್ರದೀಪ್ ಆಳ್ವ ಕದ್ರಿ , ರವಿ ಶೆಟ್ಟಿ ಅಶೋಕ ನಗರ , ಬಾಳ ಜಗನ್ನಾಥ ಶೆಟ್ಟಿ , ನಮ್ಮ ಕುಡ್ಲದ ನಿರ್ದೇಶಕ ಲೀಲಾಕ್ಷ ಬಿ.ಕರ್ಕೇರ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಢಾರಿ ಅಡ್ಯಾರ್ ಸಂಮಾನ ಪತ್ರ ವಾಚಿಸಿದರು.

ವಿಶ್ವ ಬಂಟರ ಸಮ್ಮಿಲನ 2022 ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

bengaluru

ಹರ್ಷಿಕಾ ಪೂಣಚ್ಚ – ಭುವನ್ ಗೌಡ ದಂಪತಿ ಮೇಲೆ ಹ*ಲ್ಲೆ; ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ ? ಏಂದು ಕೇಳಿದ ನಟಿ

Published

on

ಬೆಂಗಳೂರು : ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ಭುವನ್ ಪೊನ್ನಣ್ಣ ದಂಪತಿ ಮೇಲೆ ಹ*ಲ್ಲೆ ನಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರಿಣಾಮ ಭುವನ್ ಗೆ ಗಾ*ಯವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹರ್ಷಿಕಾ ಪೂಣಚ್ಚ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಗೆಳೆಯರೇ, ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ? ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಗ*ಲಾಟೆಯ ವೀಡಿಯೋವನ್ನೂ ಹರ್ಷಿಕಾ ಹಂಚಿಕೊಂಡಿದ್ದಾರೆ. ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಭ*ಯಾನಕ ಅನುಭವ ಆಗಿದೆ ಎಂದು ಅವರು ಹೇಳಿದ್ದಾರೆ.

ಹರ್ಷಿಕಾ ಬರೆದ ಪೋಸ್ಟ್ ನಲ್ಲಿ ಏನಿದೆ?

ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ? ನಮಸ್ಕಾರ, ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ.
ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೇ ಬಿಟ್ಟು ಬಿಡುತ್ತೇನೆ ಎಂದು ಯೋಚಿಸಿದೆ ಆದರೆ ನನ್ನ ಅನುಭವದಿಂದ ಮತ್ತಿರರಿಗೆ ಸಹಾಯ ವಾಗ ಬಹುದು ಎಂದು ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದೆ.

ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ “ಕರಾಮಾ” ಎಂಬ ರೆಸ್ಟೊರೆಂಟ್‌ನಲ್ಲಿ ಸಂಜೆ ಕುಟುಂಬದೊಂದಿಗೆ ಊಟ ಮಾಡಲು ತೆರಳಿದ್ದೆ. ಭೋಜನವನ್ನು ಮುಗಿಸಿದ ನಂತರ ನಾವು ವಾಲೆಟ್ ಪಾರ್ಕಿಂಗ್‌ನಿಂದ ನಮ್ಮ ವಾಹನವನ್ನು ಸ್ವೀಕರಿಸಿ ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡು, ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮ್ಮನ್ನು ಮುಟ್ಟಬಹುದು ಎಂದು ವಾದಿಸಲು ಪ್ರಾರಂಭಿಸಿದರು.

ನನ್ನ ಪತಿಯ ಚಿನ್ನದ ಸರ ಕಸಿಯಲು ಯತ್ನ : 

ನನ್ನ ಪತಿ “ಇನ್ನು ವಾಹನ ಮೂವ್ ಮಾಡಿಲ್ವಲ್ಲ ಸೈಡು ಬಿಡಿ” ಎಂದು ಹೇಳಿದರು. ಏಕೆಂದರೆ ಅವರು ಸಂಭವನೀಯ ಘಟನೆ ಬಗ್ಗೆ ಮಾತನಾಡುತ್ತಿದ್ದು ಅದರಲ್ಲಿ ಅರ್ಥವಿರಲಿಲ್ಲ. ನಾವು ವಾಹನವನ್ನು ಸ್ವಲ್ಪ ಮುಂದಕ್ಕೆ ಸರಿಸಿದೆವು, ಅಷ್ಟರೊಳಗೆ ಈ ಇಬ್ಬರು ವ್ಯಕ್ತಿಗಳು ನಮ್ಮನ್ನು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿದರು, ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಯ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದರು.

ನನ್ನ ಪತಿ ತುಂಬಾ ತಾಳ್ಮೆಯಿಂದಿದ್ದರು ಮತ್ತು ಹೆಚ್ಚು ಪ್ರತಿಕ್ರಿಯಿಸಲಿಲ್ಲ. ನನಗೆ ಆಶ್ಚರ್ಯವಾಯಿತು. ಏಕೆಂದರೆ ಅವರು ಸಾಮಾನ್ಯವಾಗಿ ತುಂಬಾ ಸಿಟ್ಟು ಸ್ವಭಾವದವರು. 2 – 3 ನಿಮಿಷಗಳಲ್ಲಿ ಅದೇ ಗ್ಯಾಂಗ್‌ನ 20 – 30 ಸದಸ್ಯರ ಗುಂಪು ಜಮಾಯಿಸಿತು ಮತ್ತು ಅವರಲ್ಲಿ 2 ಜನರು ನನ್ನ ಗಂಡನ ಚಿನ್ನದ ಸರವನ್ನು ಕಿತ್ತು, ಅದನ್ನು ಬಹಳ ಕೌಶಲ್ಯದಿಂದ ತಮ್ಮ ಕಡೆಗೆ ಎಳೆಯಲು ಪ್ರಯತ್ನಿಸಿದರು. ನನ್ನ ಪತಿ ಇದನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರು. ಅದನ್ನು ಹಿಡಿದಿಟ್ಟುಕೊಂಡು ನನಗೆ ಕೊಟ್ಟರು.

ಕನ್ನಡ ಮಾತನಾಡಿದ್ದಕ್ಕೆ ನಿಂದನೆ :

ಅಷ್ಟೊತ್ತಿಗಾಗಲೇ ಇಡೀ ತಂಡವು ಚಿನ್ನದ ಸರ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೈಗೆ ಸಿಗದೆ ರೊಚ್ಚಿಗೆದ್ದು ವಾಹನಕ್ಕೆ ಹಾನಿ ಮಾಡಿ ನಮಗೆ ಅಥವಾ ಯಾರಿಗೂ ಅರ್ಥವಾಗದ ವಿಷಯಗಳನ್ನು ಹೇಳಿ ನಮ್ಮನ್ನು ದೈಹಿಕವಾಗಿ ನಿಂದಿಸಲು ಪ್ರಯತ್ನಿಸಿದರು. ನಮ್ಮ ವಾಹನದಲ್ಲಿ ಮಹಿಳೆಯರು ಮತ್ತು ಕುಟುಂಬದವರು ಇದ್ದ ಕಾರಣ ನನ್ನ ಪತಿ ಹೆಚ್ಚು ಪ್ರತಿಕ್ರಿಯಿಸಲಿಲ್ಲ.

ಅಲ್ಲದೆ, ನಾನು ಗಮನಿಸಿದ್ದು ಏನೆಂದರೆ ಇವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. ಅವರು ನೀವು ನಮ್ಮ ಪ್ರದೇಶಕ್ಕೆ ಬಂದು ನಿಮಗೆ ಬೇಕಾದ ಭಾಷೆಗಳಲ್ಲಿ ಮಾತನಾಡುವುದನ್ನು ನಿಲ್ಲಿಸಿ. “ಯೇ ಲೋಕಲ್ ಕನ್ನಡ್ ವಾಲಾ ಹೇ” (ಈ ವ್ಯಕ್ತಿಗಳು ಸ್ಥಳೀಯ ಕನ್ನಡ ಜನರು) ನನ್ನ ಗಂಡ ಮತ್ತು ನಾನು ಕನ್ನಡದಲ್ಲಿ ಮಾತ್ರ ಮಾತನಾಡಿದಾಗ ಅದು ಅವರನ್ನು ಹೆಚ್ಚು ಕೆರಳಿಸಿತು.

ನಿಮ್ಮ “ಕನ್ನಡ ಸ್ಟೈಲ್”ಯನ್ನು ನೀವೇ ಇಟ್ಟುಕೊಳ್ಳಿ ಎಂದರು. ಆ ಗುಂಪಿನಲ್ಲಿ ಹೆಚ್ಚಿನವರು ಹಿಂದಿ, ಉರ್ದು ಮತ್ತು ಕೆಲವರು ಮುರಿದ ಕನ್ನಡದಲ್ಲಿ ಮಾತನಾಡುತ್ತಿದ್ದರು.

ಪೊಲೀಸರೂ ಸಹಾಯ ಮಾಡಲಿಲ್ಲ : 

ನಾನು ನಮಗೆ ಪರಿಚಯವಿದ್ದ ಒಬ್ಬರು ಇನ್ಸ್‌ಪೆಕ್ಟರ್‌ಗೆ ತುರ್ತು ಕರೆ ಮಾಡಿದಾಗ ಅವರೆಲ್ಲರೂ ಏನೂ ಆಗಿಲ್ಲ ಎಂಬಂತೆ ಕೆಲವೇ ಸೆಕೆಂಡುಗಳಲ್ಲಿ ಚದುರಿ ಹೋದರು. ನಾವು ಅವರನ್ನು ಹುಡುಕಲು ಪ್ರಯತ್ನಿಸಿದೆವು. ಆದರೆ ಅವರು ಮಾಯವಾಗಿದ್ದರು. ನಾವು ಸಮೀಪದಲ್ಲಿ ಹತ್ತಿರದ ಪೊಲೀಸ್ ಠಾಣೆಯ ಗಸ್ತು ಪೊಲೀಸ್ ವಾಹನವನ್ನು ಕಂಡು ಘಟನೆಯನ್ನು ASI ಶ್ರೀ ಉಮೇಶ್ ಅವರಿಗೆ ವಿವರಿಸಿದೆವು.

ಅವರು ನಮಗೆ ಸಹಾಯ ಮಾಡಲು ಹೆಚ್ಚು ಆಸಕ್ತಿ ತೋರಲಿಲ್ಲ. ಇಲಾಖೆಯ ಮೇಲಧಿಕಾರಿಗಳ ಜತೆ ಮಾತನಾಡಬೇಕು ಎಂದ ಅವರು, ಬಂದು ಏನಾಯಿತು ಎಂದು ತಿಳಿದುಕೊಳ್ಳುವ ಸೌಜನ್ಯವನ್ನು ತೋರಲಿಲ್ಲ. ಕೇವಲ 2 ಕಟ್ಟಡಗಳ ಮುಂದಿರುವ ರೆಸ್ಟೊರೆಂಟ್‌ನ ಮುಂದೆ ಮೂಸಂಬಿ ಜ್ಯೂಸ್ ಕುಡಿಯುತ್ತ ಕಾರ್ ನಲ್ಲಿ ಕುಳಿತಿದ್ದರು.

ಈ ಘಟನೆಯ ನಂತರ ನಾನು ಮಾನಸಿಕವಾಗಿ ಸಂಪೂರ್ಣ ಆಘಾತಕ್ಕೊಳಗಾಗಿದ್ದೇನೆ. ನಾನು ಹುಟ್ಟಿ ಬೆಳೆದ ನಗರದಲ್ಲಿ ಹೊರಗೆ ಹೋಗಲು ನನಗೆ ಇನ್ನೂ ಭಯವಾಗುತ್ತಿದೆ. ನನಗೆ ಜೀವನದಲ್ಲಿ ಎಲ್ಲವನ್ನು ಕೊಟ್ಟ ನಗರದಲ್ಲಿ ಇಂತಹ ಅನುಭವ ಆಗಿದ್ದು ಇದೇ ಮೊದಲು. ಇದನ್ನು ಪೊಲೀಸ್ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ಗಮನಕ್ಕೆ ತರಲು ಮತ್ತು ಭವಿಷ್ಯದಲ್ಲಿ ಯಾವುದೇ ಮಹಿಳೆ ಅಥವಾ ಕುಟುಂಬಗಳು ಬೆಂಗಳೂರಿನಲ್ಲಿ ಇಂತಹ ಕೆಟ್ಟ ಅನುಭವಕ್ಕೆ ಒಳಗಾಗಬಾರದು ಎಂದು ನಾನು ಇದನ್ನು ಪೋಸ್ಟ್ ಮಾಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ನಾವು ಪಾಕಿಸ್ತಾನದಲ್ಲಿದ್ದೇವಾ? 

ಬೆಂಗಳೂರಿನಲ್ಲಿ ಶಾಂತಿಯುತವಾಗಿ ಜೀವನ ನಡೆಸುತ್ತಿರುವ ಜನರೊಂದಿಗೆ ಇಂತಹ ಗ*ಲಾಟೆ ಸೃಷ್ಟಿಸುವ ಹಕ್ಕು ಯಾರಿಗೂ ಇಲ್ಲ! ಇದನ್ನು ಕಣ್ಣೆದುರು ನೋಡುತ್ತಿರುವಾಗ ನನ್ನ ಮನಸ್ಸಿನಲ್ಲಿ ಒಂದೆರಡು ಪ್ರಶ್ನೆಗಳು ಮೂಡಿದವು.

1. ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ ?
2. ಹಾಗಿದ್ದರೆ ನಾವು ನಮ್ಮ ಊರಿನಲ್ಲಿ ಕನ್ನಡ ಮಾತನಾಡುವುದೇ ತಪ್ಪಾ?
3. ನಮ್ಮ ಸ್ವಂತ ನಗರದಲ್ಲಿ ನಾವು ಎಷ್ಟು ಸುರಕ್ಷಿತವಾಗಿರುತ್ತೇವೆ?
4. ನಮ್ಮ ಬೆಂಗಳೂರಿನಲ್ಲಿ ಹುಟ್ಟಿ ಬೆಳೆದು, ಇಂತಹ ದೀರ್ಘಾವಧಿಯ ಮಾನಸಿಕ ಆಘಾತಕ್ಕೆ ಕಾರಣವಾಗುವ ಇಂತಹ ಘಟನೆಗಳನ್ನು ಮುಚ್ಚಿ ಹಾಕಬೇಕೆ ?

‘ಕರ್ನಾಟಕದ ಮಾನ್ಯ ಮುಖ್ಯ ಮಂತ್ರಿಗಳು ಹಾಗು ಕರ್ನಾಟಕದ ರಾಜ್ಯ ಪೊಲೀಸ್ ಇಲಾಖೆಯವರು ಈ ಬಗ್ಗೆ ವಿಚಾರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ. ಇಂತಿ , ಹರ್ಷಿಕಾ ಪೂಣಚ್ಚ [ಚಿತ್ರನಟಿ]ಬೆಂಗಳೂರು. (ಈ ಇಡೀ ಘಟನೆಯ ನಡುವೆ ನನ್ನ ಕುಟುಂಬದ ಸದಸ್ಯರು ಚಿತ್ರೀಕರಿಸಿದ ವೀಡಿಯೊವನ್ನು ಪೋಸ್ಟ್ ಮಾಡುತ್ತಿದ್ದೇನೆ. ಅಷ್ಟು ಸ್ಪಷ್ಟವಾಗಿಲ್ಲ ಹಾಗು ಘಟನೆಯ ಮದ್ಯದಿಂದ ಅವರಿಗೆ ತಿಳಿದಷ್ಟು ಚಿತ್ರೀಕರಿಸಿದ್ದಾರೆ) ಎಂದು ಹರ್ಷಿಕಾ ಪೋಸ್ಟ್ ಮಾಡಿದ್ದಾರೆ.

 

ಇನ್ನು ಈ ಪೋಸ್ಟ್ ಗೆ ಹಲವರು ಕಮೆಂಟ್ಸ್ ಮಾಡಿದ್ದು, ಕಮಿಷನರ್ ಗೆ ಈ ಪೋಸ್ಟ್ ಟ್ಯಾಗ್ ಮಾಡಿ ಎಂದಿದ್ದಾರೆ. ಇನ್ನು ಕೆಲವರು, ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದಾರೆ. ಇಂತಹ ಹೋಟೆಲ್ ಹಾಗೂ ಸ್ಥಳಗಳಿಗೆ ಭೇಟಿ ನೀಡಬೇಡಿ ಎಂದು ಸಲಹೆ ನೀಡಿದ್ದಾರೆ.

Continue Reading

DAKSHINA KANNADA

MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ

Published

on

ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ.

ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.

 

ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪೆಟ್ರೋಲ್ ಬಂಕ್ ಮ್ಯಾನೇಜರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರು ಇಂಜಿನ್ ದುರಸ್ಥಿಗೆ 2 ಲಕ್ಷಕ್ಕೂ ಅಧಿಕ ಖರ್ಚು ಆಗಲಿದೆ. ಆದರೆ, ಪೆಟ್ರೋಲ್ ಬಂಕ್ ಮಾಲಕ ಬರೀ 30 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ ಎಂದು ಜೀವನ್ ಶೆಟ್ಟಿ ದೂರಿದ್ದಾರೆ. ಕಡಿಮೆ ಸಂಬಳಕ್ಕೆ ಅನುಭವವಿಲ್ಲದ ಕಾರ್ಮಿಕರನ್ನು ನೇಮಿಸುತ್ತಾರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.

Continue Reading

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

LATEST NEWS

Trending