Sunday, July 3, 2022

ಮಹಾರಾಷ್ಟ್ರ ರಾಜಕೀಯದಲ್ಲಿ ಬಂಡಾಯ?: 10ಕ್ಕೂ ಹೆಚ್ಚು ಶಾಸಕರು ನಾಪತ್ತೆ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕ ಹಾಗೂ ನಗರಾಭಿವೃದ್ಧಿ ಸಚಿವರ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಬಂಡಾಯದ ರಣಕಹಳೆ ಎದ್ದಿದೆ.

17-20 ಶಾಸಕರ ತಂಡ ಗುಜರಾತ್‌ನ ಸೂರತ್‌ನಲ್ಲಿರುವ ಹೋಟೆಲ್‌ವೊಂದರಲ್ಲಿ ತಂಗಿದ್ದಾರೆಂದು ಹೇಳಲಾಗುತ್ತಿದೆ. ಈ ಮಧ್ಯೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪಕ್ಷದ ಎಲ್ಲಾ ಶಾಸಕರೊಂದಿಗೆ ತುರ್ತುಸಭೆ ಕರೆದಿದ್ದಾರೆ.


ಶಿವಸೇನೆ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ

ಏಕನಾಥ್​ ಶಿಂಧೆ ಅವರು ಕೆಲ ಶಾಸಕರೊಂದಿಗೆ ಗುಜರಾತ್ ಹೋಟೆಲ್‌ವೊಂದರಲ್ಲಿ ತಂಗಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆಯವರು ಪಕ್ಷದ ಎಲ್ಲಾ ಶಾಸಕರೊಂದಿಗೆ ತುರ್ತುಸಭೆ ಕರೆದಿದ್ದಾರೆಂದು ತಿಳಿದುಬಂದಿದೆ.

ಏಕನಾಥ್ ಶಿಂಧೆಯವರು ಸೋಮವಾರ ಸಂಜೆಯಿಂದಲೂ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಅವರೊಂದಿಗೆ ಹಲವು ಶಾಸಕರೂ ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದೆ.

17-20 ಮಂದಿ ಶಾಸಕರೊಂದಿಗೆ ಏಕನಾಥ್ ಶಿಂಧಯವರು ಗುಜರಾತ್ ಸಾಜ್ಯದ ಸೂರತ್ ನಲ್ಲಿರುವ ಹೋಟೆಲ್ ಲೆ ಮೆರಿಡಿಯನ್‌ನಲ್ಲಿ ತಂಗಿದ್ದಾರೆ.

ಹೋಟೆಲ್‌ಗೆ ಗುಜರಾತ್ ರಾಜ್ಯದ ಪೊಲೀಸರು ಭದ್ರತೆ ಒದಗಿಸಿದ್ದು, ಹೋಟೆಲ್‌ನಲ್ಲಿ ತಂಗಿರುವ ಶಿಂಧೆಯವರು ಶೀಘ್ರದಲ್ಲಿಯೇ ಪತ್ರಿಕಾಗೋಷ್ಠಿ ನಡೆಸಲಿದ್ದು, ತಮ್ಮ ನಿಲುವು ಕುರಿತು ಸ್ಪಷ್ಟಪಡಿಸಲಿದ್ದಾರೆಂದು ಮೂಲಗಳು ತಿಳಿಸಿವೆ.


ಈ ನಡುವೆ ಇಂದು ಮಧ್ಯಾಹ್ನ 12 ಗಂಟೆಗೆ ಶಿವಸೇನೆ ಶಾಸಕರ ಸಭೆ ಕರೆಯಲಾಗಿದೆ. ಈ ಸಭೆಗೆ ಎಷ್ಟು ಶಾಸಕರು ಹಾಜರಾಗುತ್ತಾರೆ ಎಂಬುದರ ಮೇಲೆ ಮಹಾವಿಕಾಸ್ ಅಘಾಡಿಯ ಭವಿಷ್ಯ ನಿಂತಿದೆ.

ಮಹಾರಾಷ್ಟ್ರ ವಿಧಾನ ಪರಿಷತ್ತಿನ 10 ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದ ಎಲ್ಲ ಐವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಇನ್ನು ಎನ್‍ಸಿಪಿ ಹಾಗೂ ಶಿವಸೇನೆ ತಲಾ ಎರಡು, ಕಾಂಗ್ರೆಸ್ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಐದು ಸ್ಥಾನಗಳಿಗೆ ಬಿಜೆಪಿಯಿಂದ ಪ್ರವೀಣ್ ದಾರೆಕರ್, ಪ್ರೊ. ರಾಮ್ ಶಿಂದೆ, ಉಮಾ ಖಾಪ್ರೆ, ಶ್ರೀಕಾಂತ್ ಭಾರತೀಯ ಹಾಗೂ ಪ್ರಸಾದ್ ಲಾಡ್ ಸ್ಪರ್ಧಿಸಿದ್ದರು.

ಎಂಎಲ್ಸಿ ಚುನಾವಣೆಯಲ್ಲಿ 12 ಮಂದಿ ಶಿವಸೇನೆಯ ಶಾಸಕರು ಬಿಜೆಪಿಗೆ ಬೆಂಬಲ ನೀಡಿದ್ದು, ಕಾಂಗ್ರೆಸ್’ನ ಮೂವರು ಶಾಸಕರೂ ಕೂಡ ಅಡ್ಡ ಮತದಾನ ಮಾಡಿದ್ದಾರೆಂದು ಹೇಳಲಾಗುತ್ತಿದೆ.
ಶಿಂಧೆ ಅವರು ಬಿಜೆಪಿಯ ಹಿರಿಯ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆಂದು ಹೇಳಲಾಗುತ್ತಿದ್ದು,

ಗುಜರಾತ್ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ಶಿಂಧೆ ಅವರನ್ನು ಬಿಜೆಪಿಗೆ ಹತ್ತಿರವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಶಿಂಧೆ ಮರಾಠವಾಡದ ನಿಷ್ಠಾವಂತ ಶಾಸಕರಾಗಿದ್ದು, ಮಹಾ ವಿಕಾಸ್ ಅಘಾಡಿ ಸರ್ಕಾರ ಶಿಂಧೆಯವರಲ್ಲಿ ಬೇಸರವನ್ನುಂಟು ಮಾಡಿತ್ತು. ಹೀಗಾಗಿ ರಾಜ್ಯಸಭಾ ಚುನಾವಣೆ ಮತ್ತು ಎಂಎಲ್‌ಸಿ ಚುನಾವಣೆಗಳಲ್ಲಿ ನಿಷ್ಠೆ ತೋರಲಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ.

ಇದಷ್ಟೇ ಅಲ್ಲದೆ, ಪಕ್ಷದಲ್ಲಿ ಕಿರಿಯನಾಗಿದ್ದರೂ, ಆದಿತ್ಯ ಠಾಕ್ರೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವುದು ಶಿಂಧೆ ಮತ್ತು ಠಾಕ್ರೆ ನಡುವಿನ ಅಂತರವನ್ನು ಹೆಚ್ಚಳ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

LEAVE A REPLY

Please enter your comment!
Please enter your name here

Hot Topics

ವಿಟ್ಲದಲ್ಲಿ ನಿರಂತರ ಮಳೆಗೆ ನೀರುಪಾಲಾದ ತೋಡು-ಮನೆ ಕುಸಿಯುವ ಭೀತಿ

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ಎಂಬಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತೋಡಿನ ಬದಿ ಕುಸಿದು ಮನೆ ಅಪಾಯದಂಚಿನಲ್ಲಿದೆ.ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ನಿವಾಸಿ ರಾಮಣ್ಣ ಪಿಲಿಂಜ ಅವರಿಗೆ ಸೇರಿದ ಮನೆಯ ಪಕ್ಕದಲ್ಲಿ...

ಮಹಾ ಪಾಲಿಟಿಕ್ಸ್‌: ಮಹಾರಾಷ್ಟ್ರದ ಸ್ಪೀಕರ್‌ ಆಗಿ ಬಿಜೆಪಿಯ ರಾಹುಲ್‌ ಆಯ್ಕೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ಆಗಿ ಬಿಜೆಪಿಯ ರಾಹುಲ್‌ ನರ್ವೇಕರ್‌ ಆಯ್ಕೆಯಾಗಿದ್ದಾರೆ.ಬಿಜೆಪಿಯ ಅಭ್ಯರ್ಥಿ ರಾಹುಲ್‌ 164 ಮತಗಳನ್ನು ಪಡೆದು ಸ್ಪೀಕರ್‌ ಆಗಿ ಆಯ್ಕೆಯಾದರು.ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಶಿವಸೇನಾದ ಶಾಸಕ ರಾಜನ್‌...

ಸೌದಿ ಅರೇಬಿಯಾ: ಹಜ್‌ ಯಾತ್ರಿಗಳ ಸೇವೆಯಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಂ(I.F.F.)

ರಿಯಾದ್‌: ಕೊಲ್ಲಿ ರಾಷ್ಟ್ರದಲ್ಲಿ ನಿರಂತರವಾಗಿ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಇಂಡಿಯ ಫ್ರೆಟರ್ನಿಟಿ ಫೋರಂ (ಐ.ಎಫ್.ಎಫ್) ಪ್ರತೀ ವರ್ಷದಂತೆ ಈ ವರ್ಷವೂ ಹಜ್‌ ಯಾತ್ರಾರ್ಥಿಗಳ ಸೇವೆಯಲ್ಲಿ ಸಕ್ರಿಯವಾಗಿದೆ.2022 ರ ಹಜ್‌ಗೆ ಈಗಾಗಲೇ ಭಾರತದಿಂದ ಎಪ್ಪತ್ತು...