Friday, August 12, 2022

ಮಹಾ ಪಾಲಿಟಿಕ್ಸ್‌: ಮಹಾರಾಷ್ಟ್ರದ ಸ್ಪೀಕರ್‌ ಆಗಿ ಬಿಜೆಪಿಯ ರಾಹುಲ್‌ ಆಯ್ಕೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ಆಗಿ ಬಿಜೆಪಿಯ ರಾಹುಲ್‌ ನರ್ವೇಕರ್‌ ಆಯ್ಕೆಯಾಗಿದ್ದಾರೆ.


ಬಿಜೆಪಿಯ ಅಭ್ಯರ್ಥಿ ರಾಹುಲ್‌ 164 ಮತಗಳನ್ನು ಪಡೆದು ಸ್ಪೀಕರ್‌ ಆಗಿ ಆಯ್ಕೆಯಾದರು.

ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಶಿವಸೇನಾದ ಶಾಸಕ ರಾಜನ್‌ ಸಾಳ್ವಿ ಅವರನ್ನು ಸ್ಪೀಕರ್‌ ಚುನಾವಣೆ ಕಣಕ್ಕಿಳಿಸಿದ್ದವು. ಆದರೆ ಅವರು ಸೋಲುಂಡಿದ್ದಾರೆ.

ಗೋವಾದಲ್ಲಿ ತಂಗಿದ್ದ ಶಿವಸೇನಾದ ಶಾಸಕರು ಮತ್ತು ಪಕ್ಷೇತರ ಸದಸ್ಯರು ಸ್ಪೀಕರ್‌ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಮುಂಬೈಗೆ ಆಗಮಿಸಿದ್ದರು.

ಶಿವಸೇನಾದ ಬಂಡಾಯ ನಾಯಕ ಏಕನಾಥ ಶಿಂಧೆ ಅವರು ವಿಧಾನಸಭೆಯಲ್ಲಿ ಸೋಮವಾರ ಬಹುಮತ ಸಾಬೀತು ಮಾಡಬೇಕಾಗಿದೆ. ಅದಕ್ಕೂ ಮೊದಲೇ ಸಿಕ್ಕಿರುವ ಈ ಗೆಲುವು ದೋಸ್ತಿಗಳಲ್ಲಿ ವಿಶ್ವಾಸ ಮೂಡಿಸಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...

ಮಂಗಳೂರು ಪಾಲಿಕೆಯ ಸದಸ್ಯ ಎ.ಸಿ ವಿನಯ್ ರಾಜ್‌ಗೆ ಪುತ್ರ ವಿಯೋಗ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಹಾಗೂ ವಿಪಕ್ಷ ನಾಯಕ ಎ.ಸಿ ವಿನಯ್ ರಾಜ್ ಅವರ ಪುತ್ರ ರಾಹುಲ್ ವಿನಯರಾಜ್ ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ.ಇಂದು ಸಂಜೆ ಮಂಗಳೂರಿನ ಜೆಪ್ಪುವಿನಲ್ಲಿರುವ ಸಂತ. ಆಂತೋನಿ...

ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ...